Electoral Bonds: ಚುನಾವಣಾ ಬಾಂಡ್​ ಕುರಿತು ಇಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್​

ಚುನಾವಣಾ ಬಾಂಡ್ ಯೋಜನೆ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಲಿದೆ. ಚುನಾವಣಾ ಬಾಂಡ್ ಯೋಜನೆಯ ಕಾನೂನು ಮಾನ್ಯತೆಯನ್ನು ಪ್ರಶ್ನಿಸುವ ಅರ್ಜಿಗಳ ಮೇಲೆ ನ್ಯಾಯಾಲಯದ ಈ ನಿರ್ಧಾರವಾಗಿದೆ. ಸಿಜೆಐ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು.

Electoral Bonds: ಚುನಾವಣಾ ಬಾಂಡ್​ ಕುರಿತು ಇಂದು ಮಹತ್ವದ ತೀರ್ಪು ನೀಡಲಿದೆ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​Image Credit source: NDTV
Follow us
ನಯನಾ ರಾಜೀವ್
|

Updated on: Feb 15, 2024 | 10:10 AM

ಚುನಾವಣಾ ಬಾಂಡ್ ಯೋಜನೆ(Electoral Bonds Scheme)ಯ ಸಿಂಧುತ್ವದ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು  ತೀರ್ಪು ಪ್ರಕಟಿಸಲಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಕಳೆದ ವರ್ಷ ನವೆಂಬರ್ 2 ರಂದು ಪ್ರಕರಣದ ತೀರ್ಪನ್ನು ಕಾಯ್ದಿರಿಸಿತ್ತು, ಅದು ಇಂದು ಪ್ರಕಟವಾಗಲಿದೆ.

ಯೋಜನೆಯ ಪ್ರಕಾರ, ಭಾರತದ ಯಾವುದೇ ನಾಗರಿಕ ಅಥವಾ ದೇಶದಲ್ಲಿ ಸ್ಥಾಪಿಸಲಾದ ಯಾವುದೇ ಘಟಕದಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. ಯಾವುದೇ ವ್ಯಕ್ತಿ ಏಕಾಂಗಿಯಾಗಿ ಅಥವಾ ಇತರ ವ್ಯಕ್ತಿಗಳ ಸಹಯೋಗದಲ್ಲಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. 1951ರ ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 29(A) ಅಡಿಯಲ್ಲಿ ನೋಂದಾಯಿಸಲ್ಪಟ್ಟ ರಾಜಕೀಯ ಪಕ್ಷಗಳು ಮತ್ತು ಲೋಕಸಭೆ ಅಥವಾ ವಿಧಾನಸಭೆಗೆ ಕಳೆದ ಚುನಾವಣೆಗಳಲ್ಲಿ ಕನಿಷ್ಠ ಒಂದು ಶೇಕಡಾ ಮತಗಳನ್ನು ಗಳಿಸಿದ ಪಕ್ಷಗಳು ಚುನಾವಣಾ ಬಾಂಡ್‌ಗಳನ್ನು ಪಡೆಯಬಹುದು. ಬಾಂಡ್‌ಗಳನ್ನು ಅಧಿಕೃತ ಬ್ಯಾಂಕ್ ಖಾತೆಯ ಮೂಲಕ ಅರ್ಹ ರಾಜಕೀಯ ಪಕ್ಷವು ಎನ್‌ಕ್ಯಾಶ್ ಮಾಡಬಹುದು.

ಐವರು ಸದಸ್ಯರ ಸಾಂವಿಧಾನಿಕ ಪೀಠವು ಪ್ರಕರಣದ ವಿಚಾರಣೆ ಅಕ್ಟೋಬರ್ 31 ರಿಂದ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ಸದಸ್ಯರ ಸಂವಿಧಾನ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಇದರಲ್ಲಿ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿ ಬಿಆರ್ ಗವಾಯಿ, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಕೂಡ ಇದ್ದರು. ಈ ವೇಳೆ ಎರಡೂ ಕಡೆಯಿಂದ ವಾದ ಮಂಡಿಸಲಾಯಿತು. ಎಲ್ಲ ಕಕ್ಷಿದಾರರ ಮಾತುಗಳನ್ನು ಗಂಭೀರವಾಗಿ ಆಲಿಸಿದ ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

ಮತ್ತಷ್ಟು ಓದಿ: ಚುನಾವಣಾ ಬಾಂಡ್​ಗಳ ಮೂಲಕ ಯಾವ ಯಾವ ಪಕ್ಷಗಳಲ್ಲಿ ಎಷ್ಟು ಹಣ ಸಂದಾಯವಾಗಿದೆ? ಇಲ್ಲಿದೆ ಮಾಹಿತಿ

ಏನಿದು ಯೋಜನೆ? ಈ ಯೋಜನೆಗೆ ಸರ್ಕಾರವು ಜನವರಿ 2, 2018 ರಂದು ಅಧಿಸೂಚಿಸಿದೆ. ಇದರ ಪ್ರಕಾರ, ಭಾರತದ ಯಾವುದೇ ನಾಗರಿಕ ಅಥವಾ ದೇಶದಲ್ಲಿ ಸ್ಥಾಪಿಸಲಾದ ಯಾವುದೇ ಘಟಕದಿಂದ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. ಯಾವುದೇ ವ್ಯಕ್ತಿ ಏಕಾಂಗಿಯಾಗಿ ಅಥವಾ ಇತರ ವ್ಯಕ್ತಿಗಳೊಂದಿಗೆ ಜಂಟಿಯಾಗಿ ಚುನಾವಣಾ ಬಾಂಡ್‌ಗಳನ್ನು ಖರೀದಿಸಬಹುದು. ಜನತಾ ಪ್ರಾತಿನಿಧ್ಯ ಕಾಯಿದೆ, 1951 ರ ಸೆಕ್ಷನ್ 29A ಅಡಿಯಲ್ಲಿ ನೋಂದಾಯಿಸಲಾದ ಅಂತಹ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್‌ಗಳಿಗೆ ಅರ್ಹವಾಗಿವೆ.

ಒಂದೇ ಷರತ್ತು ಎಂದರೆ ಜನತಾ ಪ್ರಾತಿನಿಧ್ಯ ಕಾಯಿದೆ 1951 ರ ಸೆಕ್ಷನ್ 29A ಅಡಿಯಲ್ಲಿ ನೋಂದಾಯಿಸಲ್ಪಟ್ಟ ಮತ್ತು ಕಳೆದ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಶೇಕಡಾ ಒಂದಕ್ಕಿಂತ ಹೆಚ್ಚು ಮತಗಳನ್ನು ಪಡೆದ ರಾಜಕೀಯ ಪಕ್ಷಗಳು ಮಾತ್ರ ಈ ಬಾಂಡ್‌ಗಳನ್ನು ಪಡೆಯಬಹುದು. ಅಧಿಕೃತ ಬ್ಯಾಂಕ್‌ನೊಂದಿಗೆ ಅದರ ಖಾತೆಯ ಮೂಲಕ ಮಾತ್ರ ಎನ್‌ಕ್ಯಾಶ್ ಮಾಡಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್