AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supreme Court: ಇಂದು ಸುಪ್ರೀಂಕೋರ್ಟ್​ನಲ್ಲಿ ಬಿಬಿಎಂಪಿ ಚುನಾವಣೆ, ಮೇಕೆದಾಟು ಡಿಪಿಆರ್​ ವಿಚಾರಣೆ

BBMP Election: ಬಿಬಿಎಂಪಿ ಚುನಾವಣೆ ಮತ್ತು ಮೇಕೆದಾಟು ಅಣೆಕಟ್ಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ಇಂದು (ಜುಲೈ 26) ವಿಚಾರಣೆ ನಡೆಯಲಿದೆ.

Supreme Court: ಇಂದು ಸುಪ್ರೀಂಕೋರ್ಟ್​ನಲ್ಲಿ ಬಿಬಿಎಂಪಿ ಚುನಾವಣೆ, ಮೇಕೆದಾಟು ಡಿಪಿಆರ್​ ವಿಚಾರಣೆ
ಬಿಬಿಎಂಪಿ ಕಚೇರಿ ಮತ್ತು ಸುಪ್ರೀಂಕೋರ್ಟ್
TV9 Web
| Edited By: |

Updated on:Jul 26, 2022 | 10:35 AM

Share

ದೆಹಲಿ: ಸುಪ್ರೀಂಕೋರ್ಟ್​ನಲ್ಲಿ (Supreme Court of India) ಮಂಗಳವಾರ ಕರ್ನಾಟಕಕ್ಕೆ ಸಂಬಂಧಿಸಿದ ಎರಡು ಮಹತ್ವದ ಪ್ರಕರಣಗಳು ವಿಚಾರಣೆಗೆ ಬರಲಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (Bruhat Bengaluru Mahanagara Palike – BBMP) ಚುನಾವಣೆ ಮತ್ತು ಮೇಕೆದಾಟು ಅಣೆಕಟ್ಟು (Mekedatu Dam) ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆಯಲಿದ್ದು ವಾದಗಳನ್ನು ಮಂಡಿಸಲು ವಕೀಲರು ಸಿದ್ಧತೆ ನಡೆಸಿದ್ದಾರೆ.

ಬಿಬಿಎಂಪಿ ಚುನಾವಣೆ ನಡೆಸುವ ಸಂಬಂಧ ಇಂದು ಎಂಟು ವಾರಗಳ ಗಡುವು ಅಂತ್ಯವಾದ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಈ ವೇಳೆ ಕರ್ನಾಟಕ ಸರ್ಕಾರವು ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೋರುವ ಸಾಧ್ಯತೆಯಿದೆ. ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡನೆಯಾದರೂ ಮೀಸಲಾತಿ ನಿಗದಿಪಡಿಸಿ ಈವರೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿಲ್ಲ. ಹೀಗಾಗಿ ಮೀಸಲಾತಿ ಅಂತಿಮಗೊಳಿಸಲು ಕನಿಷ್ಠ ನಾಲ್ಕು ವಾರಗಳ ಸಮಯ ಕೇಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಸರ್ಕಾರದ ವಾದವನ್ನು ವಿರೋಧಿಸಿ, ಶೀಘ್ರ ಚುನಾವಣೆಗೆ ಸೂಚನೆ ನೀಡಬೇಕು ಎಂದು ಕೋರಲು ಅರ್ಜಿದಾರರಾದ ಶಿವರಾಜು ಮತ್ತು ವಾಜಿದ್ ತಯಾರಿ ಮಾಡಿಕೊಂಡಿದ್ದಾರೆ.

ಮೇಕೆದಾಟು ಡಿಪಿಆರ್​ ವಿವಾದದ ವಿಚಾರಣೆ

ಮೇಕೆದಾಟು ಅಣೆಕಟ್ಟಿಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿಗೆ (Detailed Project Report – DPR) ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರವು (Cauvery Water Management Authority – CWMA) ಒಪ್ಪಿಗೆ ನೀಡುವ ಕುರಿತು ತಮಿಳುನಾಡು ಸಲ್ಲಿಸಿರುವ ತಕರಾರು ಅರ್ಜಿಯ ವಿಚಾರಣೆ ಸಹ ಇಂದು ಸುಪ್ರೀಂಕೋರ್ಟ್​ನಲ್ಲಿ ನಡೆಯಲಿದೆ. ನ್ಯಾಯಮೂರ್ತಿ ಎ.ಎಂ.ಕಾನ್ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ಮೇಕೆದಾಟು ಪ್ರಕರಣದ ವಿಚಾರಣೆ ನಡೆಯಲಿದೆ.

ಮೇಕೆದಾಟು ಯೋಜನೆಯ ಡಿಪಿಆರ್​ಗೆ ಒಪ್ಪಿಗೆ ನೀಡದಂತೆ CWMA ಸೂಚಿಸಬೇಕು ಎಂದು ತಮಿಳುನಾಡು ಸರ್ಕಾರವು ಕೋರಿದೆ. ಸುಪ್ರೀಂಕೋರ್ಟ್​​ನಲ್ಲಿ ಮೂಲ ಅರ್ಜಿ ಇನ್ನೂ ಬಾಕಿಯಿದೆ. ಅದು ಇತ್ಯರ್ಥ ಆಗುವವರೆಗೆ ಮೇಕೆದಾಟು ಯೋಜನೆಗೆ CWMA ಒಪ್ಪಿಗೆ ಕೊಡಬಾರದು ಎಂದು ಕೋರಿದೆ. ತಮಿಳುನಾಡಿನ ಅರ್ಜಿ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್, ಕಳೆದ ವಾರ ಚರ್ಚೆ ಮತ್ತು ಇತರ ಪ್ರಕ್ರಿಯೆ ಸಲ್ಲಿಸುವಂತೆ CWMAಗೆ ನೋಟಿಸ್ ನೀಡಿತ್ತು. ಈ ನೊಟೀಸ್​ಗೆ ಇಂದು CWMA ಪ್ರತಿಕ್ರಿಯಸಲಿದೆ. ಈ ಪ್ರತಿಕ್ರಿಯೆ ಆಧರಿಸಿ ಸುಪ್ರೀಂಕೋರ್ಟ್​ ಮುಂದಿನ ನಡೆಯನ್ನು ನಿರ್ಧರಿಸಲಿದೆ.

Published On - 10:35 am, Tue, 26 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ