AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ; ಕೇಂದ್ರ ಗೃಹ ಸಚಿವಾಲಯ, ದೆಹಲಿ ಪೊಲೀಸ್ ಆಯುಕ್ತರ ವಿರುದ್ಧ ಭಾನುವಾರವೂ ವಿಶೇಷ ವಿಚಾರಣೆ

ಸಿಜೆಪಿ ಪ್ರತಿಭಟನೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಸಾರ್ವಜನಿಕ ಸಾರಿಗೆ ನಿರ್ಬಂಧಗಳಿಗೆ ಸಂಬಂಧಿಸಿದಂತೆ ಅಕ್ಟೋಬರ್ 9ರಂದು ನೀಡಿದ್ದ ನಿರ್ದೇಶನಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಭಾನುವಾರ (ಅಕ್ಟೋಬರ್ 11) ವಿಶೇಷ ಕಲಾಪ ನಡೆಸಲಿದೆ. ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್, ದೆಹಲಿ ಪೊಲೀಸ್ ಆಯುಕ್ತರ ವಿರುದ್ಧ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿರುವ ಈ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ವಿಶೇಷ ಪೀಠವು ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ; ಕೇಂದ್ರ ಗೃಹ ಸಚಿವಾಲಯ, ದೆಹಲಿ ಪೊಲೀಸ್ ಆಯುಕ್ತರ ವಿರುದ್ಧ ಭಾನುವಾರವೂ ವಿಶೇಷ ವಿಚಾರಣೆ
ಸುಪ್ರೀಂ ಕೋರ್ಟ್Image Credit source: PTI
ಸುಷ್ಮಾ ಚಕ್ರೆ
|

Updated on: Oct 10, 2026 | 8:51 PM

Share

ನವದೆಹಲಿ, ಅಕ್ಟೋಬರ್ 10: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯಲ್ಲಿ ಇಂದು ಪ್ರತಿಭಟನೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ, ರೈಲು ಸಂಚಾರವನ್ನು ನಿರ್ಬಂಧಿಸಲಾಗಿತ್ತು. ಈ ಕುರಿತು ನಿನ್ನೆಯೇ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿದ್ದ ಸುಪ್ರೀಂ ಕೋರ್ಟ್ ‘ನೊಣವನ್ನು ಕೊಲ್ಲಲು ಸುತ್ತಿಗೆ ಅಗತ್ಯವಿದೆಯೇ? ಈ ರೀತಿಯ ನಿರ್ಬಂಧಗಳಿಗೆ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ’ ಎಂದು ಹೇಳಿತ್ತು. ಆದರೂ ಇಂದು ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್​ ಆದೇಶವನ್ನು ಉಲ್ಲಂಘಿಸಲಾಗಿದೆ ಎಂದು ಕೇಸ್ ದಾಖಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಲು ಭಾನುವಾರವೂ ಸುಪ್ರೀಂ ಕೋರ್ಟ್ ಕಾರ್ಯ ನಿರ್ವಹಿಸಲಿದೆ.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಹಾಗೂ ವಿರೋಧ ಪಕ್ಷಗಳು ಇಂದು ಹಮ್ಮಿಕೊಂಡಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಸಾರ್ವಜನಿಕ ಸಾರಿಗೆಯನ್ನು ಸಂಪೂರ್ಣವಾಗಿ ಬಂದ್ ಮಾಡಬಾರದು ಎಂದು ಅಕ್ಟೋಬರ್ 9ರಂದು ಸುಪ್ರೀಂ ಕೋರ್ಟ್ ನೀಡಿದ್ದ ಸ್ಪಷ್ಟ ಆದೇಶವನ್ನು ಉಲ್ಲಂಘಿಸಲಾಗಿದೆ. ಮೆಟ್ರೋ ನಿಲ್ದಾಣಗಳನ್ನು ಮುಚ್ಚಿ ಹಾಗೂ ರೈಲು ಸೇವೆಗಳನ್ನು ರದ್ದುಗೊಳಿಸಿ ನ್ಯಾಯಾಲಯದ ಆದೇಶಕ್ಕೆ ಅಪಚಾರ ಎಸಗಲಾಗಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಭಾನುವಾರ ವಿಶೇಷ ಕಲಾಪ ನಡೆಸಲಿದೆ.

ಇದನ್ನೂ ಓದಿ: ‘ನೊಣವನ್ನು ಕೊಲ್ಲಲು ಸುತ್ತಿಗೆ ಏಕೆ?’; ಸಿಜೆಪಿ ಪ್ರತಿಭಟನೆಗಾಗಿ ದೆಹಲಿಯಲ್ಲಿನ ನಿರ್ಬಂಧಗಳಿಗೆ ಸುಪ್ರೀಂ ಕೋರ್ಟ್ ತರಾಟೆ

ನ್ಯಾಯಮೂರ್ತಿಗಳಾದ ಜೋಯ್‌ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರನ್ನೊಳಗೊಂಡ ವಿಶೇಷ ಪೀಠವು ಈ ಅರ್ಜಿಯ ವಿಚಾರಣೆ ನಡೆಸಲಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಉದ್ದೇಶಪೂರ್ವಕವಾಗಿ ಧಿಕ್ಕರಿಸಿದ್ದಾರೆ ಎಂದು ಆರೋಪಿಸಿ ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಅವರು ಈ ನ್ಯಾಯಾಂಗ ನಿಂದನೆ ಅರ್ಜಿಯನ್ನು ದಾಖಲಿಸಿದ್ದಾರೆ. ಕೇಂದ್ರ ಗೃಹ ಕಾರ್ಯದರ್ಶಿ ಗೋವಿಂದ್ ಮೋಹನ್ ಐಎಎಸ್. ದೆಹಲಿ ಪೊಲೀಸ್ ಆಯುಕ್ತ ಅನುರಾಗ್ ಕುಮಾರ್ ಐಪಿಎಸ್ ಮತ್ತು ದೆಹಲಿ ಮೆಟ್ರೋ ರೈಲು ನಿಗಮದ ಅಧ್ಯಕ್ಷೆ ಡಿ. ತಾರಾ ಐಎಎಸ್ ಅವರನ್ನು ಈ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಆದೇಶದ ಸ್ಪಷ್ಟ ಉಲ್ಲಂಘನೆ:

ದೆಹಲಿ ನಿವಾಸಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕ ಸಾರಿಗೆಯನ್ನು ನಿಯಂತ್ರಿತ ರೀತಿಯಲ್ಲಿ ಕಾರ್ಯಾಚರಣೆ ಮಾಡಲು ಅನುಮತಿ ನೀಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ, ಅಧಿಕಾರಿಗಳು ನಿಲ್ದಾಣಗಳನ್ನು ಮನಬಂದಂತೆ ಮುಚ್ಚುವುದನ್ನು ಮುಂದುವರಿಸಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ. ಮುಂದುವರಿದಿರುವ ಈ ನಿರ್ಬಂಧಗಳು ರಾಷ್ಟ್ರದ ರಾಜಧಾನಿಯಲ್ಲಿ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿವೆ ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆಯನ್ನುಂಟು ಮಾಡಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ದೆಹಲಿಯಲ್ಲಿ ಪ್ರತಿಭಟನೆ ವೇಳೆ ಇಡೀ ದಿನ ಏನೇನಾಯ್ತು? ಇಂದು ಟ್ರಾಫಿಕ್ ಸಂಚಾರ ಹೇಗಿತ್ತು? ಇಲ್ಲಿದೆ ಪೂರ್ತಿ ಮಾಹಿತಿ

‘ಎಂ.ಎ. ಬೇಬಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ’ ಪ್ರಕರಣದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್, ನ್ಯಾಯಮೂರ್ತಿ ಜೋಯ್‌ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠವು ಅಕ್ಟೋಬರ್ 9 ರಂದು ಈ ಕುರಿತು ಆದೇಶ ಹೊರಡಿಸಿತ್ತು. ಜಂತರ್ ಮಂತರ್ ಪ್ರತಿಭಟನೆಯ ಹಿನ್ನೆಲೆಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವಂತೆ ದೆಹಲಿ ಪೊಲೀಸರು ಡಿಎಂಆರ್‌ಸಿಗೆ ನೀಡಿದ್ದ ಸೂಚನೆ ಹಾಗೂ ನವದೆಹಲಿ ಮತ್ತು ಹಜರತ್ ನಿಜಾಮುದ್ದೀನ್ ರೈಲು ನಿಲ್ದಾಣಗಳಿಗೆ ಬರಬೇಕಿದ್ದ ಮೇಲ್ ಮತ್ತು ಎಕ್ಸ್‌ಪ್ರೆಸ್ ರೈಲುಗಳ ರದ್ದತಿಯ ಬಗ್ಗೆ ನ್ಯಾಯಾಲಯವು ಗಂಭೀರವಾಗಿ ಗಮನಹರಿಸಿತ್ತಲ್ಲದೆ, ಇದು ಸಾರಿಗೆ ಸೇವೆಗಳ ಮೇಲಿನ ಸಂಪೂರ್ಣ ನಿಷೇಧಕ್ಕೆ ಸಮನಾಗಿದ್ದು ಅತಿರೇಕದ ಕ್ರಮ ಎಂದು ಅಭಿಪ್ರಾಯಪಟ್ಟಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
ಸೌಜನ್ಯ ಕೇಸ್​: SITಗೆ ನೀಡಿದ ಮುಚ್ಚಿದ ಲಕೋಟೆ ಬಗ್ಗೆ ಜಯಂತ್ ಸ್ಫೋಟಕ ಹೇಳಿಕೆ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
‘ನಿಮಗೆ ಪಾಠ ಕಲಿಸೋದು ಹೇಗೆಂದು ಗೊತ್ತು’: ಕಿಚ್ಚನ ಕ್ಲಾಸ್​​ಗೆ ರೆಡಿಯಾಗಿ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ
ಮಾವಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲಿ ದೇವೇಗೌಡ ಪೂಜೆ