ಗೋಧ್ರಾ ರೈಲು ದುರಂತ ಪ್ರಕರಣ; ಸುಪ್ರೀಂ ಕೋರ್ಟ್ನಿಂದ ಫೆಬ್ರವರಿ 13ರಂದು ವಿಚಾರಣೆ
ಗೋಧ್ರಾ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 11 ಆರೋಪಿಗಳಿಗೆ ಹೈಕೋರ್ಟ್ ವಿಧಿಸಿದ ಜೀವಾವಧಿ ಶಿಕ್ಷೆಯ ಬದಲು ಮರಣದಂಡನೆ ವಿಧಿಸುವಂತೆ ಕೋರುವುದಾಗಿ ಗುಜರಾತ್ ಸರ್ಕಾರ ಫೆಬ್ರವರಿ 2023ರಲ್ಲಿ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ಈ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಫೆಬ್ರವರಿ 13ರಂದು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದೆ. 2002ರಲ್ಲಿ ಗೋದ್ರಾ ರೈಲು ದುರಂತ ಸಂಭವಿಸಿ 59 ಜನರು ಮೃತಪಟ್ಟಿದ್ದರು.
ನವದೆಹಲಿ: 2002ರ ಗೋಧ್ರಾ ರೈಲು ಸುಟ್ಟು ಪ್ರಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿದ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು (ಜನವರಿ 16) ಹೇಳಿದೆ. ಮುಂದಿನ ವಿಚಾರಣೆಯ ದಿನದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠ ಸ್ಪಷ್ಟಪಡಿಸಿದೆ.
2002ರ ಫೆಬ್ರವರಿ 27ರಂದು ಗುಜರಾತ್‌ನ ಗೋಧ್ರಾದಲ್ಲಿ ಸಬರಮತಿ ಎಕ್ಸ್‌ಪ್ರೆಸ್‌ನ ಎಸ್-6 ಕೋಚ್‌ಗೆ ಬೆಂಕಿ ಹಚ್ಚಿದ್ದರಿಂದ 59 ಜನರು ಸಾವನ್ನಪ್ಪಿದ್ದರು. ಇದು ಗುಜರಾತ್ನಲ್ಲಿ ಗಲಭೆಗೆ ಕಾರಣವಾಯಿತು. ಗುಜರಾತ್ ಹೈಕೋರ್ಟ್ ಅಕ್ಟೋಬರ್ 2017ರಲ್ಲಿ ನೀಡಿದ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಮೇಲ್ಮನವಿಗಳನ್ನು ಸಲ್ಲಿಸಲಾಗಿದೆ. ಹೈಕೋರ್ಟ್ ಈ ಪ್ರಕರಣದಲ್ಲಿ ಹಲವಾರು ಅಪರಾಧಿಗಳ ಶಿಕ್ಷೆಯನ್ನು ಎತ್ತಿಹಿಡಿದು 11 ಜನರ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು.
ಇದನ್ನೂ ಓದಿ: ನೋವಿನ ದೃಶ್ಯಗಳು, ಮೃತದೇಹಗಳನ್ನು ಕಂಡು ಕುಗ್ಗಿಹೋಗಿದ್ದೆ; ಪಾಡ್‌ಕ್ಯಾಸ್ಟ್‌ನಲ್ಲಿ ಗೋಧ್ರಾ ಗಲಭೆ ಬಗ್ಗೆ ಪ್ರಧಾನಿ ಮೋದಿ ಮಾತು
ಇಂದು ಅಪರಾಧಿಗಳ ಪರ ಹಾಜರಾದ ವಕೀಲರು ಸಮಯ ಕೋರಿದ ನಂತರ ಸುಪ್ರೀಂ ಕೋರ್ಟ್ ಫೆಬ್ರವರಿ 13ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಿತು. ಈ ಹಿಂದೆ ಸುಪ್ರೀಂ ಕೋರ್ಟ್ ಮುಂದೆ ನಡೆದ ವಿಚಾರಣೆಯ ಸಮಯದಲ್ಲಿ ಗುಜರಾತ್‌ನ ಪರ ವಕೀಲರು 11 ಅಪರಾಧಿಗಳಿಗೆ ವಿಚಾರಣಾ ನ್ಯಾಯಾಲಯವು ಮರಣದಂಡನೆ ವಿಧಿಸಿದೆ ಮತ್ತು ಇತರ 20 ಜನರಿಗೆ ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ಹೇಳಿದರು.
ಈ ಪ್ರಕರಣದಲ್ಲಿ 31 ಅಪರಾಧಿಗಳಿಗೆ ಹೈಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿದಿತ್ತು. 11 ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸಿತ್ತು. 11 ಅಪರಾಧಿಗಳಿಗೆ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಇಳಿಸುವುದರ ವಿರುದ್ಧ ಗುಜರಾತ್ ಮೇಲ್ಮನವಿ ಸಲ್ಲಿಸಿದ್ದರೂ, ಹಲವಾರು ಅಪರಾಧಿಗಳು ಈ ಪ್ರಕರಣದಲ್ಲಿ ತಮ್ಮ ಶಿಕ್ಷೆಯನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: Supreme Court Job: ಸುಪ್ರೀಂ ಕೋರ್ಟ್‌ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ
2002ರ ಗೋಧ್ರಾ ರೈಲು ಸುಟ್ಟು ಪ್ರಕರಣದಲ್ಲಿ ಗುಜರಾತ್ ಸರ್ಕಾರ ಮತ್ತು ಇತರ ಹಲವಾರು ಅಪರಾಧಿಗಳು ಸಲ್ಲಿಸಿರುವ ಮೇಲ್ಮನವಿಗಳನ್ನು ಫೆಬ್ರವರಿ 13ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಇಂದು ತಿಳಿಸಿದೆ. ಮುಂದಿನ ವಿಚಾರಣೆಯ ದಿನದಂದು ಈ ವಿಷಯದಲ್ಲಿ ಯಾವುದೇ ಮುಂದೂಡಿಕೆ ನೀಡಲಾಗುವುದಿಲ್ಲ ಎಂದು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅರವಿಂದ್ ಕುಮಾರ್ ಅವರ ಪೀಠ ಸ್ಪಷ್ಟಪಡಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ