Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಾ ಅಧಿಕಾರ ಯಾರದ್ದು?-ಮಾ.3ರಂದು ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ

2014ರಲ್ಲಿ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗೇ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿದೆ. ಆಗಿನಿಂದಲೂ ದೆಹಲಿ ಆಡಳಿತಾತ್ಮಕ ಸೇವೆಯನ್ನು ಯಾರು ನಿಯಂತ್ರಿಸಬೇಕು ಎಂಬುದು ವಿವಾದದ ಕೇಂದ್ರಬಿಂದುವೇ ಆಗಿದೆ.

ದೆಹಲಿ ಆಡಳಿತಾತ್ಮಕ ಸೇವೆಗಳ ನಿಯಂತ್ರಣಾ ಅಧಿಕಾರ ಯಾರದ್ದು?-ಮಾ.3ರಂದು ಸುಪ್ರೀಂಕೋರ್ಟ್​​ನಲ್ಲಿ ಅರ್ಜಿ ವಿಚಾರಣೆ
ಸುಪ್ರೀಂಕೋರ್ಟ್​
Follow us
TV9 Web
| Updated By: Lakshmi Hegde

Updated on:Feb 15, 2022 | 3:58 PM

ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತಾತ್ಮಕ ಸೇವೆ (Administrative Service)ಯನ್ನು ಯಾರು ನಿಯಂತ್ರಿಸಬೇಕು? ಕೇಂದ್ರ ಸರ್ಕಾರವೋ (Central Government)? ದೆಹಲಿ ಸರ್ಕಾರವೋ (Delhi Government)? ಹೀಗೊಂದು ವಿವಾದ ಹಲವು ಕಳೆದ ಕೆಲವು ವರ್ಷಗಳಿಂದಲೂ ನಡೆದುಕೊಂಡು ಬಂದಿದೆ. ಅಲ್ಲದೆ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅರವಿಂದ್​ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರನ್ನೂ ಏರಿದೆ. ಅರವಿಂದ್ ಕೇಜ್ರಿವಾಲ್​ ನೇತೃತ್ವದ ಸರ್ಕಾರ ಸಲ್ಲಿಸಿರುವ ಈ ಅರ್ಜಿಯನ್ನು ವಿಚಾರಣೆ ಮಾಡಲು ಸುಪ್ರೀಂಕೋರ್ಟ್ ಇಂದು ಒಪ್ಪಿಗೆ ಸೂಚಿಸಿದ್ದು, ಮಾರ್ಚ್​ 3ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ.  ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ಅರ್ಜಿ ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದ್ದು, ಹಿರಿಯ ವಕೀಲ ಡಾ. ಅಭಿಷೇಕ್​ ಮನು ಸಿಂಗ್ವಿ ದೆಹಲಿ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ. ಈ ವಿಚಾರಣೆಯಲ್ಲಿ ಸಿಜೆಐ ಜತೆ, ನ್ಯಾಯಮೂರ್ತಿಗಳಾದ ಎಸ್​.ಎಸ್​.ಬೋಪಣ್ಣ ಮತ್ತು ಹಿಮಾ ಕೊಹ್ಲಿ ಇರಲಿದ್ದಾರೆ.

ಆಡಳಿತಾತ್ಮಕ ಸೇವೆಗಳ ನಿಯಂತ್ರಣ ವಿಷಯಕ್ಕೆ ಸಂಬಂಧಪಟ್ಟಂತೆ 2019ರಲ್ಲಿ ಸುಪ್ರೀಂಕೋರ್ಟ್​​ನ ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಮತ್ತು ಅಶೋಕ್​ ಭೂಷಣ್ ಅವರನ್ನೊಳಗೊಂಡ​ ದ್ವಿಸದಸ್ಯ ಪೀಠ ವಿಭಜಿತ ತೀರ್ಪು ನೀಡಿತ್ತು. ಅಂದರೆ ದೆಹಲಿಯ ಆಡಳಿತಾತ್ಮಕ ಸೇವೆಗಳ ಮೇಲೆ  ಸ್ಥಳೀಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಅಧಿಕಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ್ದರೂ, ಇಬ್ಬರೂ ನ್ಯಾಯಾಧೀಶರು ಬೇರೆ-ಬೇರೆ ತೀರ್ಪು ನೀಡಿದ್ದರು. ಎ.ಕೆ.ಸಿಕ್ರಿಯವರು, ಜಂಟಿ ಕಾರ್ಯದರ್ಶಿ ಮತ್ತು ಅದರ ಮೇಲಿನ ಹುದ್ದೆಗಳ ನೇಮಕಾತಿ, ವರ್ಗಾವಣೆ ಲೆಫ್ಟಿನೆಂಟ್ ಗವರ್ನರ್​ ಆಡಳಿತದಡಿ ಬರುತ್ತದೆ. ಅದರ ಕೆಳಗಿನ ಶ್ರೇಣಿಯ ಅಧಿಕಾರಿಗಳ ಪೋಸ್ಟಿಂಗ್​, ಟ್ರಾನ್ಸ್​ಫರ್​ಗಳೆಲ್ಲ ದೆಹಲಿ ಸರ್ಕಾರದ ನಿಯಂತ್ರಣದಲ್ಲಿರುತ್ತದೆ ಎಂದಿದ್ದರು. ಆದರೆ ಅಶೋಕ್​ ಭೂಷಣ್​ ಈ ತೀರ್ಪಿಗೆ ವಿರುದ್ಧವಾಗಿ ಹೇಳಿದ್ದರು. ಅಂದರೆ ಆಡಳಿತಾತ್ಮಕ ಸೇವೆ ಸಂಪೂರ್ಣವಾಗಿ ಕೇಂದ್ರ ಸರ್ಕಾರದ ನಿಯಂತ್ರಣದಡಿ ಬರುತ್ತದೆ. ಇಲ್ಲಿ ದೆಹಲಿ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ ಎಂದಿದ್ದರು.  ಹಾಗೇ, ಪ್ರಸ್ತುತ ಅರ್ಜಿ ವಿಚಾರಣೆಯ ಹೊಣೆಯನ್ನು ತ್ರಿಸದಸ್ಯರ ಪೀಠಕ್ಕೆ ಶಿಫಾರಸ್ಸು ಕೂಡ ಮಾಡಿದ್ದರು.

2014ರ ಫೆ.14ರವರೆಗೆ ವೇಳೆಗೆ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್  ಮುಖ್ಯಮಂತ್ರಿಯಾಗಿದ್ದರು. ನಂತರ ರಾಷ್ಟ್ರಪತಿ ಆಡಳಿತ ಹೇರಲಾಯಿತು. ಬಳಿಕ 2015ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದು, ಅರವಿಂದ್ ಕೇಜ್ರಿವಾಲ್​ ಮುಖ್ಯಮಂತ್ರಿಯಾದರು. ಅದಕ್ಕೂ ಪೂರ್ವ 2014ಲ್ಲಿ  ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಏರಿದೆ. ದೆಹಲಿಯಲ್ಲಿ ಆಪ್​ ಅಧಿಕಾರಕ್ಕೆ ಬಂದಾಗಿನಿಂದ, ದೆಹಲಿ ಆಡಳಿತಾತ್ಮಕ ಸೇವೆಯನ್ನು ಯಾರು ನಿಯಂತ್ರಿಸಬೇಕು ಎಂಬುದು ಕೇಂದ್ರ ಮತ್ತು ಸ್ಥಳೀಯ ಸರ್ಕಾರಗಳ ನಡುವೆ ವಿವಾದದ ಕೇಂದ್ರಬಿಂದುವೇ ಆಗಿದೆ.

ಈ ವಿವಾದದ ಒಂದು ಭಾಗವಾಗಿ 2018ರ ಜುಲೈನಲ್ಲಿ ಸುಪ್ರೀಂಕೋರ್ಟ್​​ನ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಪೀಠ ಮಹತ್ವದ ತೀರ್ಪು ನೀಡಿತ್ತು. ದೆಹಲಿಗೆ ರಾಜ್ಯದ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಆದರೆ ಲೆಫ್ಟಿನೆಂಟ್ ಗವರ್ನರ್​ ಅಧಿಕಾರದಲ್ಲಿ ಕಡಿತಗೊಳಿಸಬಹುದು. ದೆಹಲಿ ಆಡಳಿತಕ್ಕೆ ಸಂಬಂಧಪಟ್ಟಂತೆ ಲೆಫ್ಟಿನೆಂಟ್ ಗವರ್ನರ್​ಗೆ ಸ್ವತಂತ್ರ್ಯವಾಗಿ ನಿರ್ಧಾರ ಕೈಗೊಳ್ಳುವ ಅಧಿಕಾರ ಇರುವುದಿಲ್ಲ. ಯಾವುದೇ ತೀರ್ಮಾನ ತೆಗೆದುಕೊಳ್ಳುವಾಗ ಅಲ್ಲಿನ ಚುನಾಯಿತ ಸರ್ಕಾರದ ಸಲಹೆ, ನೆರವು ಪಡೆಯಬೇಕು ಎಂದು ಪೀಠ ಆದೇಶ ನೀಡಿತ್ತು. 2019ರ ಫೆಬ್ರವರಿಯಲ್ಲಿ ವಿಭಜಿತ ತೀರ್ಪು ಬಂದಾಗಿನಿಂದಲೂ ದೆಹಲಿ ಸರ್ಕಾರ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಬೇಕು ಎಂದು ಮನವಿ ಮಾಡುತ್ತಲೇ ಬಂದಿದೆ. ಆದರೆ ತುರ್ತಾಗಿ ಎಂದರೆ, ಮಾರ್ಚ್​ 3ರಂದು ವಿಚಾರಣೆ ನಡೆಸುವುದಾಗಿ ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ ಹಿನ್ನೆಲೆ: ಜಮ್ಮು- ಕಾಶ್ಮೀರದ ವಿದ್ಯಾರ್ಥಿಗಳ ಬಳಿ ಮಾಹಿತಿ ಕೇಳಿದ ಆಂತರಿಕ ಭದ್ರತಾ ದಳ

Published On - 3:44 pm, Tue, 15 February 22

ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು