ಕ್ರೈಸ್ತ ಸಂಸ್ಥೆ, ಪಾದ್ರಿಗಳ ಮೇಲಿನ ದಾಳಿ ಆರೋಪ: ಜುಲೈ 15ರಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ

ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್‌ಬಿಷಪ್ ಡಾ. ಪೀಟರ್ ಮಚಾಡೊ ಅವರು ಸಲ್ಲಿಸಿದ ಅರ್ಜಿಯಲ್ಲಿ, ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯದ ಸದಸ್ಯರ ವಿರುದ್ಧ ಹಿಂಸಾಚಾರ ಮತ್ತು ಗುಂಪು ದಾಳಿಗಳನ್ನು ತಡೆಯಲು...

ಕ್ರೈಸ್ತ ಸಂಸ್ಥೆ, ಪಾದ್ರಿಗಳ ಮೇಲಿನ ದಾಳಿ ಆರೋಪ: ಜುಲೈ 15ರಂದು ಸುಪ್ರೀಂನಲ್ಲಿ ಅರ್ಜಿ ವಿಚಾರಣೆ
ಸುಪ್ರೀಂಕೋರ್ಟ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 11, 2022 | 8:56 PM

ದೆಹಲಿ: ದೇಶಾದ್ಯಂತ ಕ್ರೈಸ್ತ ಸಂಸ್ಥೆಗಳು (Christian institutions) ಮತ್ತು ಪಾದ್ರಿಗಳ ಮೇಲೆ ಹೆಚ್ಚುತ್ತಿರುವ ದಾಳಿ  ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ (Supreme Court) ಸೋಮವಾರ ಜುಲೈ 15ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಈ ಅರ್ಜಿಯನ್ನು ಶುಕ್ರವಾರ ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿದೆ. ಇದಕ್ಕೂ ಮುನ್ನ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವಿಸ್, ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಕೇಳಿದ್ದಾರೆ. “ನೀವು ಹೇಳುತ್ತಿರುವುದು ಸಂಭವಿಸುತ್ತಿದ್ದರೆ ದುರದೃಷ್ಟಕರ. ನಿಮ್ಮ ವಿಷಯವನ್ನು ಮರು-ತೆರೆಯುವ ದಿನದಂದು ಕೈಗೆತ್ತಿಕೊಳ್ಳುತ್ತೇವೆ ಎಂದು ನಾವು ಖಚಿತಪಡಿಸಿಕೊಳ್ಳಬಹುದು” ಎಂದು ಪೀಠ ಹೇಳಿದೆ. ಬೆಂಗಳೂರು ಧರ್ಮಪ್ರಾಂತ್ಯದ ಆರ್ಚ್‌ಬಿಷಪ್ ಡಾ. ಪೀಟರ್ ಮಚಾಡೊ ಅವರು ಸಲ್ಲಿಸಿದ ಅರ್ಜಿಯಲ್ಲಿ, ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ಕ್ರೈಸ್ತ ಸಮುದಾಯದ ಸದಸ್ಯರ ವಿರುದ್ಧ ಹಿಂಸಾಚಾರ ಮತ್ತು ಗುಂಪು ದಾಳಿಗಳನ್ನು ತಡೆಯಲು ನಿರ್ದೇಶನಗಳನ್ನು ಕೋರಲಾಗಿದೆ. ಅದೇ ವೇಳೆ ದ್ವೇಷದ ಅಪರಾಧಗಳನ್ನು ತಡೆಯಲು ಈ ಹಿಂದಿನ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳನ್ನು ಜಾರಿಗೊಳಿಸುವಂತೆ ಕೋರಲಾಗಿದೆ.

ಈ ಪ್ರಕರಣ ಬಗ್ಗೆ ವಿಚಾರಣೆ ನಡೆಸುವುದಕ್ಕಾಗಿ ರಾಜ್ಯದಿಂದ ಹೊರಗಿನ ಅಧಿಕಾರಿಗಳ ವಿಶೇಷ ತನಿಖಾ ತಂಡವನ್ನು ರಚಿಸಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಸಂತ್ರಸ್ತರ ವಿರುದ್ಧ ದಾಳಿಕೋರರಿಂದ ಸುಳ್ಳು ಕೌಂಟರ್ ಎಫ್‌ಐಆರ್‌ಗಳನ್ನು ದಾಖಲಿಸಿದ್ದು ಇದನ್ನು ಕಾನೂನಿಗೆ ಅನುಸಾರವಾಗಿ ಮುಚ್ಚುವುದಕ್ಕೆ ಎಸ್ಐಟಿಗೆ ನಿರ್ದೇಶಿಸಬೇಕು ಎಂದು ಮನವಿ ಮಾಡಲಾಗಿದೆ. ತೆಹಸೀನ್ ಪೂನಾವಾಲಾ ತೀರ್ಪಿನಲ್ಲಿ ನೀಡಲಾದ ಮಾರ್ಗಸೂಚಿಗಳ ಅನುಷ್ಠಾನಕ್ಕೆ ಅರ್ಜಿಯು ಕೋರಿದೆ.ಇದರಲ್ಲಿ ರಾಷ್ಟ್ರದಾದ್ಯಂತ ದ್ವೇಷದ ಅಪರಾಧಗಳನ್ನು ಗಮನಿಸಲು ಮತ್ತು ಎಫ್‌ಐಆರ್‌ಗಳನ್ನು ದಾಖಲಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು ಎಂದು ಅರ್ಜಿಯಲ್ಲಿ ಹೇಳಿದೆ.

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ