ನವದೆಹಲಿ, (ಜುಲೈ 21): ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಜೈಲುಶಿಕ್ಷೆ ತಡೆ ಕೋರಿದ್ದ ಅರ್ಜಿ ವಿಚಾರಣೆ ಇಂದು (ಜುಲೈ21) ಸುಪ್ರೀಂಕೋರ್ಟ್ನಲ್ಲಿ(Supreme Court) ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭವಿಷ್ಯ ಇಂದು ನಿರ್ಧಾರವಾಗಲಿದ್ದು, ಎಲ್ಲರ ಚಿತ್ತ ಸುಪ್ರೀಂಕೋರ್ಟ್ ತೀರ್ಪಿನತ್ತ ನೆಟ್ಟಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಉಪನಾಮಕ್ಕೆ ಸಂಬಂಧಿಸಿದಂತೆ, ತನ್ನ ಮೇಲೆ ಮಾನನಷ್ಟ ಮೊಕದ್ದಮೆಯಡಿಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ನೀಡಿದ ಸೂರತ್ ನ್ಯಾಯಲಯದ ಆದೇಶವನ್ನು ತಡೆಹಿಡಿಯಲು ನಿರಾಕರಿಸಿದ ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ ಸುಪ್ರೀಂಕೋರ್ಟ್ ಜುಲೈ 21ರಂದು ವಿಚಾರಣೆ ನಡೆಸಲಾಗುವುದು ಎಂದು ದಿನಾಂ ನಿಗದಿ ಮಾಡಿತ್ತು. ಇಂದು ರಾಹುಲ್ ಗಾಂಧಿ ಅರ್ಜಿ ವಿಚಾರಣೆ ನಡೆಯಲಿದ್ದು, ತೀರ್ಪು ಏನಾಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ: ಮಾನನಷ್ಟ ಮೊಕದ್ದಮೆ: ಜು.21ಕ್ಕೆ ರಾಹುಲ್ ಮೇಲ್ಮನವಿ ಅರ್ಜಿ ವಿಚಾರಣೆಗೆ ಸುಪ್ರೀಂ ಒಪ್ಪಿಗೆ
ಮೋದಿ ಹೆಸರು ಇಟ್ಟುಕೊಂಡವರು ಕಳ್ಳರು ಎಂದಿದ್ದ ರಾಹುಲ್ ಗಾಂಧಿ ಅವರಿಗೆ ಸೂರತ್ ಕೋರ್ಟ್ 2 ವರ್ಷ ಜೈಲುಶಿಕ್ಷೆ ವಿಧಿಸಿತ್ತು. ಇದನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದು. ಆದ್ರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಜುಲೈ 7 ರಂದು ಗುಜರಾತ್ ಹೈಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ಜು.15ರಂದು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಜತೆಗೆ ಶೀಘ್ರ ವಿಚಾರಣೆಯನ್ನು ನಡೆಸುವಂತೆ ಅಭಿಷೇಕ್ ಮನು ಸಿಂಘ್ವಿ ಸಹ ಮನವಿ ಮಾಡಿಕೊಂಡಿದ್ದರು.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ