ದೆಹಲಿ: ರಾಷ್ಟ್ರ ರಾಜಧಾನಿಯ ವಿವಿಧ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರನ್ನು ತಕ್ಷಣ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ಡಿಸೆಂಬರ್ 16ರಂದು ಕೈಗೆತ್ತಿಕೊಳ್ಳಲಿದೆ.
ರಿಷಭ್ ಶರ್ಮಾ ಎಂಬ ಕಾನೂನು ವಿದ್ಯಾರ್ಥಿ ಸಲ್ಲಿಸಿದ್ದ ಮನವಿಯನ್ನು ಸುಪ್ರೀ ಕೋರ್ಟ್ ಅಂದು ಆಲಿಸಲಿದೆ. ಸದ್ಯ ನ್ಯಾಯಾಲಯದ ವೆಬ್ಸೈಟ್ನಲ್ಲಿ ಉಲ್ಲೇಖಿಸಿದಂತೆ ಮುಖ್ಯ ನ್ಯಾಯಾಧೀಶ ಎಸ್ ಎ ಬೋಬ್ಡೆ, ನ್ಯಾಯಾಧೀಶರಾದ ಎ ಎಸ್ ಬೋಪಣ್ಣ ಮತ್ತು ವಿ. ರಾಮಸುಬ್ರಹ್ಮಣ್ಯನ್ ಅವರು ತ್ರಿಸದಸ್ಯ ಪೀಠ ಈ ಅರ್ಜಿಯನ್ನು ಆಲಿಸಲಿದೆ.
ದೆಹಲಿ ಚಲೋ ಕೊರೊನಾ ಸೋಂಕು ಹೆಚ್ಚಳಕ್ಕೆ ಕಾರಣವಾಗಲಿದೆ. ರಸ್ತೆ ತಡೆಯಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ ಎಂಬ ಕಾರಣವೊಡ್ಡಿ ರಿಷಭ್ ಶರ್ಮಾ ಸರ್ವೋಚ್ಛ ನ್ಯಾಯಾಲಯಕ್ಕೆ ಈ ಅರ್ಜಿ ಸಲ್ಲಿಸಿದ್ದರು.