AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 19ರಂದು ಸಿಎಎ ನಿಯಮಗಳಿಗೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ ಸುಪ್ರೀಂಕೋರ್ಟ್

2019 ರಿಂದ ಸುಪ್ರೀಂಕೋರ್ಟ್​ನಲ್ಲಿ  ಸಲ್ಲಿಸಲಾದ ಇನ್ನೂರಕ್ಕೂ ಹೆಚ್ಚು ಅರ್ಜಿಗಳು ಸಿಎಎ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿವೆ. ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಧಾರ್ಮಿಕ ಕಿರುಕುಳದ ಕಾರಣದಿಂದ ಭಾರತಕ್ಕೆ ಬಂದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚುವ ಗುರಿಯನ್ನು ಈ ಕಾನೂನು ಹೊಂದಿದೆ.

ಮಾರ್ಚ್ 19ರಂದು ಸಿಎಎ ನಿಯಮಗಳಿಗೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 15, 2024 | 1:00 PM

Share

ದೆಹಲಿ ಮಾರ್ಚ್ 15: ಪೌರತ್ವ ತಿದ್ದುಪಡಿ ಕಾಯ್ದೆ (CAA), 2019 ರ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಮಾರ್ಚ್ 19 ರಂದು ಸುಪ್ರೀಂಕೋರ್ಟ್ (Supreme Court) ವಿಚಾರಣೆ ನಡೆಸಲಿದೆ. ಈ ವಿಷಯವನ್ನು ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal) ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಅವರ ಮುಂದೆ ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲಾಗುವುದು ಎಂದು ಸಿಜೆಐ ಹೇಳಿದ್ದಾರೆ.

2019 ರಿಂದ ಸುಪ್ರೀಂಕೋರ್ಟ್​ನಲ್ಲಿ  ಸಲ್ಲಿಸಲಾದ ಇನ್ನೂರಕ್ಕೂ ಹೆಚ್ಚು ಅರ್ಜಿಗಳು ಸಿಎಎ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿವೆ. ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಧಾರ್ಮಿಕ ಕಿರುಕುಳದ ಕಾರಣದಿಂದ ಭಾರತಕ್ಕೆ ಬಂದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚುವ ಗುರಿಯನ್ನು ಈ ಕಾನೂನು ಹೊಂದಿದೆ. ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ ಅಂಗೀಕರಿಸಿದರೆ, ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿತ್ತು.

ಕಾಯ್ದೆಯ ಅಧಿಸೂಚನೆಯನ್ನು ವಿರೋಧ ಪಕ್ಷ ನಾಯಕರು ಟೀಕಿಸಿದ್ದಾರೆ. ಈ ಅಧಿಸೂಚಿತ ನಿಯಮಗಳು “ಅಸಂವಿಧಾನಿಕ”, “ತಾರತಮ್ಯ”ದಿಂದ ಕೂಡಿದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ “ಪೌರತ್ವದ ಜಾತ್ಯತೀತ ತತ್ವ” ದ ಉಲ್ಲಂಘನೆಯಾಗಿದೆ ಎಂದು ವಿಪಕ್ಷ ಪ್ರತಿಪಾದಿಸಿದೆ.

ಮುಸ್ಲಿಮರನ್ನು ಅದರ ವ್ಯಾಪ್ತಿಯಿಂದ ಹೊರಗಿಡುವ ಮೂಲಕ ಮತ್ತು ಪೌರತ್ವವನ್ನು ಧಾರ್ಮಿಕ ಗುರುತಿಗೆ ಜೋಡಿಸುವ ಮೂಲಕ, ಕಾನೂನು ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜಾತ್ಯತೀತ ತತ್ವಗಳನ್ನು ದುರ್ಬಲಗೊಳಿಸುತ್ತದೆ ಎಂದು ವಿಮರ್ಶಕರು ವಾದಿಸಿದ್ದಾರೆ. ಆದಾಗ್ಯೂ, ಸಿಎಎ ಪೌರತ್ವವನ್ನು ನೀಡುವುದಾಗಿದೆ. ದೇಶದ ಯಾವುದೇ ನಾಗರಿಕರು ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಕೇಂದ್ರವು ಸಮರ್ಥಿಸಿಕೊಂಡಿದೆ.

ಗುರುವಾರ ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನ್ನು ವಾಪಸ್ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lok Sabha election: ಮಾ.16ಕ್ಕೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

“ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಇದು ನಮ್ಮ ಸಾರ್ವಭೌಮ ಹಕ್ಕು, ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ. “ವಿರೋಧ ಪಕ್ಷಗಳಿಗೆ ಬೇರೆ ಕೆಲಸವಿಲ್ಲ. ಹೇಳೋದು ಒಂದು ಮಾಡುವುದು ಇನ್ನೊಂದು ಮಾಡುವ ಇತಿಹಾಸ ಅವರದು. ಆದರೆ, ಪ್ರಧಾನಿ ಮೋದಿ ಹಾಗೂ ಬಿಜೆಪಿ ಇತಿಹಾಸವೇ ಬೇರೆ. ಬಿಜೆಪಿ ಅಥವಾ ಪ್ರಧಾನಿ ಮೋದಿ ಹೇಳೋದು ಕಲ್ಲಿನಲ್ಲಿ ಕೆತ್ತಿದಂತೆ. ಪ್ರತಿ ಗ್ಯಾರಂಟಿಯನ್ನು ಮೋದಿ ಈಡೇರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Fri, 15 March 24

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು