ಮಾರ್ಚ್ 19ರಂದು ಸಿಎಎ ನಿಯಮಗಳಿಗೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ ಸುಪ್ರೀಂಕೋರ್ಟ್

2019 ರಿಂದ ಸುಪ್ರೀಂಕೋರ್ಟ್​ನಲ್ಲಿ  ಸಲ್ಲಿಸಲಾದ ಇನ್ನೂರಕ್ಕೂ ಹೆಚ್ಚು ಅರ್ಜಿಗಳು ಸಿಎಎ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿವೆ. ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಧಾರ್ಮಿಕ ಕಿರುಕುಳದ ಕಾರಣದಿಂದ ಭಾರತಕ್ಕೆ ಬಂದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚುವ ಗುರಿಯನ್ನು ಈ ಕಾನೂನು ಹೊಂದಿದೆ.

ಮಾರ್ಚ್ 19ರಂದು ಸಿಎಎ ನಿಯಮಗಳಿಗೆ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲಿದೆ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ

Updated on: Mar 15, 2024 | 1:00 PM

ದೆಹಲಿ ಮಾರ್ಚ್ 15: ಪೌರತ್ವ ತಿದ್ದುಪಡಿ ಕಾಯ್ದೆ (CAA), 2019 ರ ತಡೆ ಕೋರಿ ಸಲ್ಲಿಸಲಾದ ಅರ್ಜಿಗಳನ್ನು ಮಾರ್ಚ್ 19 ರಂದು ಸುಪ್ರೀಂಕೋರ್ಟ್ (Supreme Court) ವಿಚಾರಣೆ ನಡೆಸಲಿದೆ. ಈ ವಿಷಯವನ್ನು ಹಿರಿಯ ವಕೀಲ ಕಪಿಲ್ ಸಿಬಲ್ (Kapil Sibal) ಅವರು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ (DY Chandrachud) ಅವರ ಮುಂದೆ ಪ್ರಸ್ತಾಪಿಸಿದ್ದು, ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲಾಗುವುದು ಎಂದು ಸಿಜೆಐ ಹೇಳಿದ್ದಾರೆ.

2019 ರಿಂದ ಸುಪ್ರೀಂಕೋರ್ಟ್​ನಲ್ಲಿ  ಸಲ್ಲಿಸಲಾದ ಇನ್ನೂರಕ್ಕೂ ಹೆಚ್ಚು ಅರ್ಜಿಗಳು ಸಿಎಎ ಕಾನೂನಿನ ವಿವಿಧ ನಿಬಂಧನೆಗಳನ್ನು ಪ್ರಶ್ನಿಸಿವೆ. ಡಿಸೆಂಬರ್ 31, 2014 ರಂದು ಅಥವಾ ಅದಕ್ಕೂ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಧಾರ್ಮಿಕ ಕಿರುಕುಳದ ಕಾರಣದಿಂದ ಭಾರತಕ್ಕೆ ಬಂದ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವವನ್ನು ತ್ವರಿತವಾಗಿ ಪತ್ತೆಹಚ್ಚುವ ಗುರಿಯನ್ನು ಈ ಕಾನೂನು ಹೊಂದಿದೆ.
ಡಿಸೆಂಬರ್ 2019 ರಲ್ಲಿ ಸಿಎಎ ಅನ್ನು ಸಂಸತ್ ಅಂಗೀಕರಿಸಿದರೆ, ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿತ್ತು.

ಕಾಯ್ದೆಯ ಅಧಿಸೂಚನೆಯನ್ನು ವಿರೋಧ ಪಕ್ಷ ನಾಯಕರು ಟೀಕಿಸಿದ್ದಾರೆ. ಈ ಅಧಿಸೂಚಿತ ನಿಯಮಗಳು “ಅಸಂವಿಧಾನಿಕ”, “ತಾರತಮ್ಯ”ದಿಂದ ಕೂಡಿದ್ದು ಸಂವಿಧಾನದಲ್ಲಿ ಪ್ರತಿಪಾದಿಸಲಾದ “ಪೌರತ್ವದ ಜಾತ್ಯತೀತ ತತ್ವ” ದ ಉಲ್ಲಂಘನೆಯಾಗಿದೆ ಎಂದು ವಿಪಕ್ಷ ಪ್ರತಿಪಾದಿಸಿದೆ.

ಮುಸ್ಲಿಮರನ್ನು ಅದರ ವ್ಯಾಪ್ತಿಯಿಂದ ಹೊರಗಿಡುವ ಮೂಲಕ ಮತ್ತು ಪೌರತ್ವವನ್ನು ಧಾರ್ಮಿಕ ಗುರುತಿಗೆ ಜೋಡಿಸುವ ಮೂಲಕ, ಕಾನೂನು ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಜಾತ್ಯತೀತ ತತ್ವಗಳನ್ನು ದುರ್ಬಲಗೊಳಿಸುತ್ತದೆ ಎಂದು ವಿಮರ್ಶಕರು ವಾದಿಸಿದ್ದಾರೆ.
ಆದಾಗ್ಯೂ, ಸಿಎಎ ಪೌರತ್ವವನ್ನು ನೀಡುವುದಾಗಿದೆ. ದೇಶದ ಯಾವುದೇ ನಾಗರಿಕರು ಪೌರತ್ವವನ್ನು ಕಳೆದುಕೊಳ್ಳುವುದಿಲ್ಲ ಎಂದು ಕೇಂದ್ರವು ಸಮರ್ಥಿಸಿಕೊಂಡಿದೆ.

ಗುರುವಾರ ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನ್ನು ವಾಪಸ್ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ. ಬಿಜೆಪಿ ನೇತೃತ್ವದ ಸರ್ಕಾರವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Lok Sabha election: ಮಾ.16ಕ್ಕೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ

“ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನು ಖಚಿತಪಡಿಸಿಕೊಳ್ಳಲು ಇದು ನಮ್ಮ ಸಾರ್ವಭೌಮ ಹಕ್ಕು, ನಾವು ಅದರಲ್ಲಿ ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ. ಸಿಎಎ ಅನ್ನು ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ” ಎಂದು ಎಎನ್ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಶಾ ಹೇಳಿದ್ದಾರೆ. “ವಿರೋಧ ಪಕ್ಷಗಳಿಗೆ ಬೇರೆ ಕೆಲಸವಿಲ್ಲ. ಹೇಳೋದು ಒಂದು ಮಾಡುವುದು ಇನ್ನೊಂದು ಮಾಡುವ ಇತಿಹಾಸ ಅವರದು. ಆದರೆ, ಪ್ರಧಾನಿ ಮೋದಿ ಹಾಗೂ ಬಿಜೆಪಿ ಇತಿಹಾಸವೇ ಬೇರೆ. ಬಿಜೆಪಿ ಅಥವಾ ಪ್ರಧಾನಿ ಮೋದಿ ಹೇಳೋದು ಕಲ್ಲಿನಲ್ಲಿ ಕೆತ್ತಿದಂತೆ. ಪ್ರತಿ ಗ್ಯಾರಂಟಿಯನ್ನು ಮೋದಿ ಈಡೇರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:59 pm, Fri, 15 March 24

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us