Uddhav Thackeray: ಉದ್ಧವ್ ಠಾಕ್ರೆ ಬಣದ ಮನವಿ ತಿರಸ್ಕರಿಸಿದ ಸುಪ್ರೀಂ

ಸುಪ್ರೀಂಕೋರ್ಟ್​​ನಲ್ಲಿ ಮಾಜಿ ಸಿಎಂ ಉದ್ಧವ್ ಠಾಕ್ರೆಗೆ ಹಿನ್ನಡೆ ಉಂಟಾಗಿದ್ದು, ಶಿವಸೇನೆಯ ಹೆಸರು ಮತ್ತು ಚಿಹ್ನೆ ಶಿಂಧೆ ಬಣಕ್ಕೆ ನೀಡುವ ಬಗ್ಗೆ ಚುನಾವಣಾ ಆಯೋಗದ ಆದೇಶವನ್ನು ತಡೆಯಿಡಿಯುವಂತೆ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು.

Uddhav Thackeray: ಉದ್ಧವ್ ಠಾಕ್ರೆ ಬಣದ ಮನವಿ ತಿರಸ್ಕರಿಸಿದ ಸುಪ್ರೀಂ
ಸುಪ್ರೀಂಕೋರ್ಟ್​
Follow us
|

Updated on:Feb 22, 2023 | 6:12 PM

ದೆಹಲಿ: ಸುಪ್ರೀಂಕೋರ್ಟ್​​ನಲ್ಲಿ ಮಾಜಿ ಸಿಎಂ ಉದ್ಧವ್ ಠಾಕ್ರೆಗೆ (Uddhav Thackeray) ಹಿನ್ನಡೆ ಉಂಟಾಗಿದ್ದು, ಶಿವಸೇನೆಯ ಹೆಸರು ಮತ್ತು ಚಿಹ್ನೆ ಶಿಂಧೆ ಬಣಕ್ಕೆ ನೀಡುವ ಬಗ್ಗೆ ಚುನಾವಣಾ ಆಯೋಗದ ಆದೇಶವನ್ನು ತಡೆಯಿಡಿಯುವಂತೆ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಇದೀಗ ಈ ಬಗ್ಗೆ ವಿಚಾರಣೆ ನಡೆಸಿದ ಸುಪ್ರೀಂ, ಚುನಾವಣಾ ಆಯೋಗದ ಆದೇಶವನ್ನು ನಿರ್ಬಂಧಿಸಲು ಬರುವುದಿಲ್ಲ ಎಂದು ಅರ್ಜಿಯನ್ನು ಸುಪ್ರೀಂ ತಿರಸ್ಕರಿಸಿದೆ. ಶಿಂಧೆ ಬಣಕ್ಕೆ ಶಿವಸೇನೆ ಪಕ್ಷದ ಹೆಸರು, ಚಿಹ್ನೆ ನೀಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಲಾಗಿತ್ತು. ಶಿವಸೇನೆಯ ಹೆಸರು ಮತ್ತು ಚಿಹ್ನೆಯ ಆದೇಶಕ್ಕೆ ತಡೆ ನೀಡುವಂತೆ ಉದ್ಧವ್ ಠಾಕ್ರೆ ಬಣದ ಮನವಿಯನ್ನು ಸುಪ್ರೀಂ ಇಂದು ತಿರಸ್ಕರಿಸಿದೆ. ಪಕ್ಷದ ಆಂತರಿಕ ವಿಚಾರಗಳನ್ನು ನಿರ್ಧರಿಸಲು ಶಿವಸೇನೆ ಸ್ವತಂತ್ರವಾಗಿದೆ ಎಂದು ಅದು ಆದೇಶಿಸಿದೆ. ವಾದ ಮಂಡನೆ ಬಳಿಕ 2 ವಾರಗಳ ಬಳಿಕ ಕೋರ್ಟ್ ಮರು ವಿಚಾರಣೆ ನಡೆಸಲಿದೆ ಎಂದು ಹೇಳಲಾಗಿದೆ.

ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ. ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂದೆ ಬಣಕ್ಕೆ ನೀಡುವ ಮೂಲಕ ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿತ್ತು. ಶಿಂದೆ ಬಣಕ್ಕೆ ಚುನಾವಣಾ ಚಿಹ್ನೆ ‘ಬಿಲ್ಲು-ಬಾಣ’ ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು  ತಿರಸ್ಕರಿಸಿದೆ.

ಇದನ್ನೂ ಓದಿ: Shiva Sena: ಶಿವಸೇನೆ ಚಿಹ್ನೆಯ ಗದ್ದಲದ ನಡುವೆ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲಿರುವ ಸಿಎಂ ಏಕನಾಥ್ ಶಿಂದೆ

ಚುನಾವಣಾ ಆಯೋಗ, ಶಿಂಧೆ ಬಣದ ಪರವಾಗಿ ತೀರ್ಪು ನೀಡುವಾಗ, ಉದ್ಧವ್ ಠಾಕ್ರೆ ನೇತೃತ್ವದ ಪಕ್ಷ ಮಾಡಿದ ತಪ್ಪನ್ನು ಎತ್ತಿ ತೋರಿಸಿದೆ. 2018ರಲ್ಲಿ ಶಿವಸೇನಾ ಪಕ್ಷದ ಸಂವಿಧಾನ ಬದಲಾವಣೆ ಕುರಿತು ಚುನಾವಣಾ ಆಯೋಗಕ್ಕೆ ತಿಳಿಸಿರಲಿಲ್ಲ ಎಂದು ಆಯೋಗ ಹೇಳಿದೆ. 2018 ರಲ್ಲಿ ಶಿವಸೇನೆ ಪಕ್ಷವು ಪಕ್ಷದ ಸಂವಿಧಾನದಲ್ಲಿ ಮಾಡಿದ ಬದಲಾವಣೆಗಳು ಪ್ರಜಾಪ್ರಭುತ್ವದ ಪರವಾಗಿಲ್ಲ ಎಂದು ಆಯೋಗವು ಕಂಡುಹಿಡಿದಿದೆ.

Published On - 5:47 pm, Wed, 22 February 23

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​