EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು.

EWS Quota: ಅರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರ ಮೀಸಲಾತಿ; ಕೇಂದ್ರದ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Nov 07, 2022 | 11:22 AM

ದೆಹಲಿ: ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವ ಕೇಂದ್ರ ಸರ್ಕಾರದ ಕಾನೂನನ್ನು (Economically Weaker Sections – EWS) ಸುಪ್ರೀಂಕೋರ್ಟ್ ಸೋಮವಾರ ಎತ್ತಿ ಹಿಡಿದಿದೆ. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ 10ರಷ್ಟು ಮೀಸಲಾತಿ ಒದಗಿಸುವುದಕ್ಕೆ ಸಂಬಂಧಿಸುವ ಕಾನೂನಿನ ಸಿಂಧುತ್ವಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ಈ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಪರಿಶೀಲಿಸಿತು. ಐವರು ನ್ಯಾಯಮೂರ್ತಿಗಳಿದ್ದ ನ್ಯಾಯಪೀಠದಲ್ಲಿ ನಾಲ್ವರು ಮೀಸಲಾತಿ ಪರವಾಗಿ ಹಾಗೂ ಒಬ್ಬರು ಭಿನ್ನಮತದ ತೀರ್ಪು ನೀಡಿದರು. ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ, ತ್ರಿವೇದಿ, ಫಾರ್ದಿವಾಲ, ಯು.ಯು.ಲಲಿತ್ ಮೀಸಲಾತಿ ಪರವಾಗಿ ತೀರ್ಪು ಕೊಟ್ಟರು. ನ್ಯಾಯಮೂರ್ತಿ ಎಸ್.ರವೀಂದ್ರ ಭಟ್ ಭಿನ್ನಮತ ತೀರ್ಪು ನೀಡಿದರು.

ಆರ್ಥಿಕ ಮಾನದಂಡಗಳನ್ನು ಆಧರಿಸಿದ ಮೀಸಲಾತಿ ನಿಯಮಗಳನ್ನು ರೂಪಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆಯೇ? ಹೀಗೆ ಮಾಡಿದರೆ ಸಂವಿಧಾನದ 103ನೇ ತಿದ್ದುಪಡಿಯು ಸಂವಿಧಾನದ ಮೂಲ ಆಶಯದ ಉಲ್ಲಂಘನೆಯಾಗುತ್ತದೆಯೇ? ಖಾಸಗಿ ಸಂಸ್ಥೆಗಳಿಗೆ ನೇಮಕಾತಿ ಅಥವಾ ದಾಖಲಾತಿಗೆ ಸಂಬಂಧಿಸಿದ ವಿಚಾರದಲ್ಲಿ  ನಿರ್ದೇಶನ ನೀಡಲು ಸರ್ಕಾರಗಳಿಗೆ ವಿಶೇಷ ಅಧಿಕಾರ ನೀಡಲು ಅವಕಾಶವಿದೆಯೇ ಎಂಬ ಅಂಶಗಳನ್ನೂ ನ್ಯಾಯಾಲಯವು ಪರಿಶೀಲನೆಗೆ ಒಳಪಡಿಸಿತು.

ಸಂವಿಧಾನದ 15 (6) ಮತ್ತು 16 (6) 103ನೇ ತಿದ್ದುಪಡಿಯ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶೇ 10ರ ಮೀಸಲಾತಿ ನೀಡಲು ಅನುವು ಮಾಡಿಕೊಳ್ಳಲಾಯಿತು. ಪರಿಶಿಷ್ಟ ಜಾತಿ (ಎಸ್​ಸಿ), ಪರಿಶಿಷ್ಟ ವರ್ಗ (ಎಸ್​ಟಿ) ಮತ್ತು ಇತರ ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರದ ವ್ಯಕ್ತಿಗಳ ಕುಟುಂಬದ ವಾರ್ಷಿಕ ಆದಾಯವು ₹ 8 ಲಕ್ಷಕ್ಕೂ ಕಡಿಮೆಯಿದ್ದರೆ ಈ ಕಾನೂನಿನ ಅನ್ವಯ ಮೀಸಲಾತಿ ನೀಡಲು ಅವಕಾಶ ಸಿಗುತ್ತದೆ.

ಸಂವಿಧಾನದ 103ನೇ ತಿದ್ದುಪಡಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ ಪರಿಗಣಿಸಿದ ಮತ್ತೊಂದು ಅಂಶ ಶೇ 50ರ ಮೀಸಲಾತಿ ನಿಯಮ. 1992ರ ಇಂದ್ರಾ ಸಾಹ್ನಿ ಪ್ರಕರಣದಲ್ಲಿ (ಮಂಡಲ್ ಆಯೋಗ ಪ್ರಕರಣ) 9 ಸದಸ್ಯರಿದ್ದ ನ್ಯಾಯಪೀಠವು ಮೀಸಲಾತಿಯ ಒಟ್ಟು ಪ್ರಮಾಣ ಶೇ 50 ಮೀರಬಾರದು. ವಿಶೇಷ ಸಂದರ್ಭದಲ್ಲಿ ಈ ನಿರ್ಬಂಧಕ್ಕೆ ವಿನಾಯ್ತಿಯಿದೆ ಎಂದು ಹೇಳಿತ್ತು. ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ನಿವೃತ್ತಿಗೆ ಒಂದು ದಿನ ಮೊದಲು ಈ ಮಹತ್ವದ ತೀರ್ಪು ಬಂದಿದೆ. ಲಲಿತ್ ಅವರು ನಾಳೆ (ನ 8) ನಿವೃತ್ತರಾಗಲಿದ್ದಾರೆ.

Published On - 11:10 am, Mon, 7 November 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್