SC Verdict on Article 370: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಎತ್ತಿ ಹಿಡಿದ ಸುಪ್ರೀಂ: ಸೆ. 30 ರೊಳಗೆ ಚುನಾವಣೆ ನಡೆಸಲು ನಿರ್ದೇಶನ

|

Updated on: Dec 11, 2023 | 12:08 PM

ಜಮ್ಮು ಮತ್ತು ಕಾಶ್ಮೀರ(Jammu And Kashmir)ದಿಂದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ತೀರ್ಪು ಪ್ರಕಟಿಸಿದೆ.

SC Verdict on Article 370: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ನಿರ್ಧಾರ ಎತ್ತಿ ಹಿಡಿದ ಸುಪ್ರೀಂ: ಸೆ. 30 ರೊಳಗೆ ಚುನಾವಣೆ ನಡೆಸಲು ನಿರ್ದೇಶನ
ಸುಪ್ರೀಂಕೋರ್ಟ್​
Follow us on

ಜಮ್ಮು ಮತ್ತು ಕಾಶ್ಮೀರ(Jammu And Kashmir)ದಿಂದ ಸಂವಿಧಾನದ 370 ನೇ ವಿಧಿಯ ನಿಬಂಧನೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ 2019 ರ ನಿರ್ಧಾರದ ವಿರುದ್ಧ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ. ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಎತ್ತಿಹಿಡಿದಿದೆ.  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠವು ಈ ತೀರ್ಪು ಪ್ರಕಟಿಸಿದೆ.

​ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅಸೆಂಬ್ಲಿ ಚುನಾವಣೆಗಳನ್ನು ನಡೆಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಜಮ್ಮು ಮತ್ತು ಕಾಶ್ಮೀರ ಶಾಸಕಾಂಗ ಸಭೆಯಲ್ಲಿ ಸೆಪ್ಟೆಂಬರ್ 2024 ರೊಳಗೆ ಚುನಾವಣೆಗಳು ನಡೆಯುವಂತೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಜ್ಯತ್ವವನ್ನು ಮರುಸ್ಥಾಪಿಸಬೇಕು ಎಂದು ನಾವು ನಿರ್ದೇಶಿಸುತ್ತೇವೆ ಎಂದು ಸಿಜೆಐ ಡಿವೈ ಚಂದ್ರಚೂಡ್ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ,ಶೀಘ್ರದಲ್ಲೇ ಚುನಾವಣೆ ನಡೆಸಿ ಜಮ್ಮು ಮತ್ತು ಕಾಶ್ಮೀರದ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಚುನಾವಣೆಯನ್ನು ಹೆಚ್ಚು ಕಾಲ ತಡೆಹಿಡಿಯಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ಇದರೊಂದಿಗೆ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಪೀಠವು ಜಮ್ಮು ಮತ್ತು ಕಾಶ್ಮೀರಕ್ಕೆ ಮತ್ತೆ ರಾಜ್ಯ ಸ್ಥಾನಮಾನ ನೀಡುವಂತೆ ಕೇಂದ್ರ ಸರ್ಕಾರವನ್ನು ಕೇಳಿದೆ. ಇದಕ್ಕೆ ವಿಳಂಬ ಮಾಡಬೇಡಿ ಎಂದು ಮುಖ್ಯ ನ್ಯಾಯಮೂರ್ತಿ ತಿಳಿಸಿದ್ದಾರೆ.

370ನೇ ವಿಧಿ ರದ್ದು ತಾತ್ಕಾಲಿಕ ನಿಬಂಧನೆ ಎಂದು ಸಿಜೆಐ ಹೇಳಿದ್ದಾರೆ. ಸಂವಿಧಾನ ರಚನಾ ಸಭೆಯ ವಿಸರ್ಜನೆಯ ನಂತರವೂ ರಾಷ್ಟ್ರಪತಿಗಳ ಅಧಿಕಾರ ಯಥಾಸ್ಥಿತಿಯಲ್ಲಿರಲಿದೆ. 370 ನೇ ವಿಧಿಯನ್ನು ತೆಗೆದುಹಾಕುವ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದ ಏಕೀಕರಣಕ್ಕಾಗಿ ಎಂದು ಸಿಜೆಐ ಹೇಳಿದರು.

 

 

ರಾಷ್ಟ್ರಪತಿ ಆಳ್ವಿಕೆ ಹೇರಿದಾಗ ರಾಜ್ಯಗಳಲ್ಲಿ ಕೇಂದ್ರದ ಅಧಿಕಾರಗಳ ಮೇಲೆ ಮಿತಿಗಳಿವೆ ಎಂದು ಸಿಜೆಐ ಹೇಳಿದರು . ಆರ್ಟಿಕಲ್ 356 ರ ಅಡಿಯಲ್ಲಿ ಅಧಿಕಾರದ ಬಳಕೆಗೆ ಉತ್ತಮ ಕಾರಣ ಇರಬೇಕು.

370ನೇ ವಿಧಿ ರದ್ದಾದ ನಂತರ ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂದು ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿತ್ತು. ಐವರು ನ್ಯಾಯಮೂರ್ತಿಗಳಾದ ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು 16 ದಿನಗಳ ಕಾಲ ಅರ್ಜಿದಾರರು ಮತ್ತು ಕೇಂದ್ರದ ವಾದವನ್ನು ಆಲಿಸಿದ್ದರು. ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಈ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ರಾಷ್ಟ್ರಪತಿಗಳ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರದ ಒಪ್ಪಿಗೆಯೊಂದಿಗೆ ಸಂವಿಧಾನದ ಎಲ್ಲ ನಿಬಂಧನೆಗಳನ್ನು ರಾಷ್ಟ್ರಪತಿಗಳು ಜಮ್ಮು-ಕಾಶ್ಮೀರಕ್ಕೆ ಅನ್ವಯಿಸಬಹುದಿತ್ತು. ರಾಜ್ಯ ವಿಧಾನಸಭೆಯ ಒಪ್ಪಿಗೆಯನ್ನೂ ಪಡೆಯುವ ಅಗತ್ಯವಿಲ್ಲ ಎಂದು ಸಿಜೆಐ ಚಂದ್ರಚೂಡ್ ಹೇಳಿದರು.

ನಾಲ್ಕು ವರ್ಷಗಳ ಹಿಂದೆ 370ನೇ ವಿಧಿ ರದ್ದು ಮಾಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಕೇಂದ್ರದ ಈ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಇಂದು ತೀರ್ಪು ನೀಡಿದೆ.

ಆರ್ಟಿಕಲ್ 370 ರ ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಕಾಯ್ದೆ 2019 ಅನ್ನು ಪ್ರಶ್ನಿಸುವ ಹಲವಾರು ಅರ್ಜಿಗಳನ್ನು 2019 ರಲ್ಲಿ ಸಂವಿಧಾನ ಪೀಠಕ್ಕೆ ಉಲ್ಲೇಖಿಸಲಾಗಿದೆ. ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ.

ಆರ್ಟಿಕಲ್ 370 ರದ್ದತಿ ವಿರುದ್ಧ ವಾದ ಮಂಡಿಸಿದ ಅರ್ಜಿಗಳಲ್ಲಿ ಮುಖ್ಯವಾಗಿ ಎರಡು ಸವಾಲುಗಳನ್ನು ಎತ್ತಲಾಗಿತ್ತು. ಮೊದಲನೆಯದು ರಾಷ್ಟ್ರಪತಿ ಆದೇಶಗಳ ಸಾಂವಿಧಾನಿಕತೆಗೆ ಸಂಬಂಧಿಸಿದೆ. ಆದರೆ ಎರಡನೆಯ ಸವಾಲು ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸುವ ಬಗ್ಗೆ.

ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ರಚನಾ ಸಭೆಯ ಒಪ್ಪಿಗೆಯಿಲ್ಲದೆ ರಾಷ್ಟ್ರಪತಿಯ ಸಾಂವಿಧಾನಿಕ ನಿಬಂಧನೆ 370 ಅನ್ನು ಪರೋಕ್ಷವಾಗಿ ತಿದ್ದುಪಡಿ ಮಾಡಿದ್ದಾರೆ ಎಂದು ಅರ್ಜಿದಾರರು ಹೇಳಿದ್ದರು.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಈ ತೀರ್ಪು ನೀಡಿದೆ. ಪೀಠವು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೂ ಒಳಗೊಂಡಿತ್ತು.

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:47 am, Mon, 11 December 23