AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಮೊದಲೆಲ್ಲ ಗಂಡುಮಕ್ಕಳಿಗೆ ಮಾತ್ರ ಅಪ್ಪನ ಆಸ್ತಿಯಲ್ಲಿ ಪಾಲು ಎಂಬ ನಿಯಮವಿತ್ತು. ಆದರೆ, ಹೊಸ ಕಾನೂನು ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿನ ಅವಕಾಶ ನೀಡಿದೆ. ಹೀಗಿದ್ದರೂ, ಒಂದುವೇಳೆ ಮಗಳು ಸಮುದಾಯದಿಂದ ಹೊರಗೆ ವಿವಾಹವಾದರೆ ಅಥವಾ ಅಪ್ಪನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಆಕೆಗೆ ಆಸ್ತಿಯಲ್ಲಿ ಪಾಲು ನೀಡಲೇಬೇಕೆಂದೇನೂ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ ಅಪ್ಪನ ನಿರ್ಧಾರವೇ ಸರ್ವೋಚ್ಚವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್​ ಹೇಳಿದೆ.

ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Will
ಸುಷ್ಮಾ ಚಕ್ರೆ
|

Updated on:Dec 19, 2025 | 7:29 PM

Share

ನವದೆಹಲಿ, ಡಿಸೆಂಬರ್ 19: ಒಂದುವೇಳೆ ಮಗಳು ಅಪ್ಪನ ಇಚ್ಛೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಅಥವಾ ಬೇರೆ ಧರ್ಮದವನನ್ನು ಮದುವೆಯಾದರೆ ಆಕೆಗೆ ಅಪ್ಪನ ಆಸ್ತಿಯಲ್ಲಿ ಪಾಲು ಸಿಗುವುದಿಲ್ಲ. ಸಮುದಾಯದ ಹೊರಗೆ ಮದುವೆಯಾದರೆ ಅಥವಾ ಮಗಳು ಅಪ್ಪನಿಗೆ ನೋವುಂಟಾಗುವಂತೆ ವರ್ತಿಸಿದರೆ ಆ ತಂದೆ ತನ್ನ ಮಗಳನ್ನು ಆಸ್ತಿಯ ವಿಲ್‌ನಿಂದ ಹೊರಗಿಡಬಹುದು. ಇದರಲ್ಲಿ ಸುಪ್ರೀಂ ಕೋರ್ಟ್ (Supreme Court) ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳುವ ಮೂಲಕ ಮಹತ್ವದ ಆದೇಶ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಅಶಾನುದ್ದೀನ್ ಅಮಾನುಲ್ಲಾ ಮತ್ತು ಕೆ. ವಿನೋದ್ ಚಂದ್ರನ್ ನೇತೃತ್ವದ ನ್ಯಾಯ ಪೀಠವು ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯವು ಶೈಲಾ ಜೋಸೆಫ್‌ಗೆ ಅವರ ತಂದೆ ಎನ್.ಎಸ್. ಶ್ರೀಧರನ್ ಅವರ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ತೀರ್ಪನ್ನು ರದ್ದುಗೊಳಿಸಿದೆ. ಆ ಮಹಿಳೆ ಬೇರೆ ಧರ್ಮದ ಯುವಕನನ್ನು ವಿವಾಹವಾಗಿದ್ದರು. ಹೀಗಾಗಿ, ಶ್ರೀಧರನ್ ತನ್ನ ಮಗಳನ್ನು ದೂರವೇ ಇಟ್ಟಿದ್ದರು. ತಮ್ಮ ವಿಲ್​ನಲ್ಲಿ ಕೂಡ ಆಕೆಗೆ ಪಾಲು ಬರೆದಿರಲಿಲ್ಲ.

ಇದನ್ನೂ ಓದಿ: Supreme Court: ಮಕ್ಕಳಿಗೆ ಸಣ್ಣ ವಯಸ್ಸಿನಿಂದಲೇ ಲೈಂಗಿಕ ಶಿಕ್ಷಣ ನೀಡಬೇಕು; ಸುಪ್ರೀಂ ಕೋರ್ಟ್‌ ಆದೇಶ

ಇದನ್ನು ವಿರೋಧಿಸಿ, ತನ್ನ ತಂದೆಯ ಆಸ್ತಿಯಲ್ಲಿ ತನಗೂ ಪಾಲು ಬೇಕೆಂದು ಆಕೆ ಕಾನೂನು ಮೊರೆಹೋಗಿದ್ದರು. ಕೆಳ ನ್ಯಾಯಾಲಯಗಳು ಆ ವಿಲ್ ಬಗ್ಗೆ ಅನುಮಾನಗಳನ್ನು ವ್ಯಕ್ತಪಡಿಸಿದ್ದವು. ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಅವರ ಇತರ 8 ಸಹೋದರರೊಂದಿಗೆ ಸಮಾನ ಪಾಲು ನೀಡಬೇಕೆಂದು ತೀರ್ಪು ನೀಡಿತ್ತು. ಆದರೆ, ಸುಪ್ರೀಂ ಕೋರ್ಟ್ ಕೆಳ ನ್ಯಾಯಾಲಯದ ಈ ತೀರ್ಪನ್ನು ರದ್ದುಗೊಳಿಸಿದೆ. ವಿಲ್ ಪ್ರಕಾರ ಶೈಲಾ ಅವರಿಗೆ ಅವರ ತಂದೆಯ ಆಸ್ತಿಯಲ್ಲಿ ಯಾವುದೇ ಹಕ್ಕಿಲ್ಲ ಎಂದು ತೀರ್ಪು ನೀಡಿದೆ.

“ಇದು ಆಕೆಯ ತಂದೆ ಸ್ವಇಚ್ಛೆಯಿಂದ ಬರೆದಿರುವ ವಿಲ್. ಇದರಲ್ಲಿ ಯಾವುದೇ ಹಸ್ತಕ್ಷೇಪ ಸಾಧ್ಯವಿಲ್ಲ. ಹೈಕೋರ್ಟ್ ಮತ್ತು ವಿಚಾರಣಾ ನ್ಯಾಯಾಲಯದ ತೀರ್ಪನ್ನು ರದ್ದುಗೊಳಿಸಲಾಗಿದೆ. ಶೈಲಾ ತನ್ನ ತಂದೆಯ ಆಸ್ತಿಗಳ ಮೇಲೆ ಯಾವುದೇ ಹಕ್ಕನ್ನು ಹೊಂದಿರುವುದಿಲ್ಲ. ಎಲ್ಲ ಆಸ್ತಿಯನ್ನೂ ಆಕೆಯ ತಂದೆಯ ಇಚ್ಛೆಯ ಪ್ರಕಾರವೇ ಆಕೆಯ ಇತರ ಸಹೋದರರಿಗೆ ಉಯಿಲು (ವಿಲ್) ಮೂಲಕ ನೀಡಲಾಗಿದೆ” ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: ಏರ್ ಇಂಡಿಯಾ ಅಪಘಾತದ ಬಗ್ಗೆ ನ್ಯಾಯಾಂಗ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್ ಮೊರೆಹೋದ ಮೃತ ಪೈಲಟ್​ನ ತಂದೆ

ಲಿಂಗ ಸಮಾನತೆಗೂ ಈ ಪ್ರಕರಣಕ್ಕೂ ಸಂಬಂಧವಿಲ್ಲ. ಆ ಪ್ರಕಾರ ಹೇಳುವುದಾದರೆ ಮಹಿಳೆಗೂ ಆಸ್ತಿಯಲ್ಲಿ ಸಮಾನ ಹಕ್ಕಿದೆ. ಆದರೆ, ಈ ಪ್ರಕರಣದಲ್ಲಿ ವಿಲ್ ಬರೆದ ವ್ಯಕ್ತಿಯ ಇಚ್ಛೆ ಮುಖ್ಯವಾಗಿದೆ. ಅವರೇನಾದರೂ ವಿಲ್ ಬರೆಯದೇ ಇದ್ದಿದ್ದರೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಗಳಿಗೂ ಪಾಲು ಇರುತ್ತಿತ್ತು. ಆದರೆ, ಅವರು ಮಗಳಿಗೆ ಆಸ್ತಿ ಸಿಗಬಾರದು ಎಂಬ ಕಾರಣಕ್ಕೆ ಉದ್ದೇಶಪೂರ್ವಕವಾಗಿ ವಿಲ್ ಬರೆದಿರುವುದರಿಂದ ಮತ್ತು ಇದು ಅವರ ಕೊನೆಯ ವಿಲ್ ಆಗಿರುವುದರಿಂದ ಅವರ ನಿರ್ಧಾರವೇ ಅಂತಿಮವಾಗಿರುತ್ತದೆ. ಕಾನೂನು ಇದರಲ್ಲಿ ಮಧ್ಯಪ್ರವೇಶಿಸುವುದಿಲ್ಲ” ಎಂದು ನ್ಯಾಯಪೀಠವು ಸ್ಪಷ್ಟಪಡಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:27 pm, Fri, 19 December 25

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ