AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸೆಂಗಾರ್ ಅವರಿಗೆ ನೀಡಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಅವರ ಜಾಮೀನು ರದ್ದುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿರುವುದರಿಂದ ಕುಲದೀಪ್ ಸೆಂಗಾರ್​​ಗೆ ಭಾರೀ ಮುಖಭಂಗವಾಗಿದೆ. ಕುಲದೀಪ್ ಸೆಂಗಾರ್‌ಗೆ ಪರಿಹಾರ ನೀಡುವ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ತಡೆ ನೀಡುವಂತೆ ಕೋರಿ ಸಿಬಿಐ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಉನ್ನಾವ್ ಲೈಂಗಿಕ ದೌರ್ಜನ್ಯ ಪ್ರಕರಣ; ಕುಲದೀಪ್ ಸೆಂಗಾರ್ ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟ್ ತಡೆ
Kuldeep Sengar
ಸುಷ್ಮಾ ಚಕ್ರೆ
|

Updated on: Dec 29, 2025 | 5:52 PM

Share

ನವದೆಹಲಿ, ಡಿಸೆಂಬರ್ 29: ಉನ್ನಾವ್ (Unnao Case) ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಈ ಮೂಲಕ ಕುಲದೀಪ್ ಸೆಂಗಾರ್​​ಗೆ ಭಾರೀ ಹಿನ್ನಡೆಯಾಗಿದೆ. ದೆಹಲಿ ಹೈಕೋರ್ಟ್ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ಈ ಹಿಂದಿನ ಶಿಕ್ಷೆಯನ್ನು ಎತ್ತಿಹಿಡಿದಿದೆ. ಹೈಕೋರ್ಟ್ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಸೆಂಗಾರ್‌ಗೆ ನೋಟಿಸ್ ನೀಡಿದೆ.

ಕುಲದೀಪ್ ಸೆಂಗಾರ್ ಅವರ ಶಿಕ್ಷೆಯನ್ನು ಅಮಾನತುಗೊಳಿಸಿದ ಡಿಸೆಂಬರ್ 23ರ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅಗಸ್ಟೀನ್ ಜಾರ್ಜ್ ಮಸಿಹ್ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ಪೀಠವು ವಿಚಾರಣೆ ನಡೆಸಿತು.

ಇದನ್ನೂ ಓದಿ: ಉನ್ನಾವ್ ಅತ್ಯಾಚಾರ ಪ್ರಕರಣ; ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್​​ಗೆ ಬಿಗ್ ರಿಲೀಫ್

2019ರ ಡಿಸೆಂಬರ್‌ನಲ್ಲಿ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಕುಲದೀಪ್ ಸಿಂಗ್ ಸೆಂಗಾರ್ ತಪ್ಪಿತಸ್ಥರಾಗಿದ್ದು, ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನ್ಯಾಯಾಲಯವು ಅವರಿಗೆ 25 ಲಕ್ಷ ರೂ. ದಂಡವನ್ನೂ ವಿಧಿಸಿದೆ. ಡಿಸೆಂಬರ್ 23ರಂದು ದೆಹಲಿ ಹೈಕೋರ್ಟ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿತ್ತು. ನ್ಯಾಯಮೂರ್ತಿ ಸುಬ್ರಮಣ್ಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶವನ್ನು ನೀಡಿತ್ತು.

ಈ ಹಿನ್ನೆಲೆಯಲ್ಲಿ ಕುಲದೀಪ್ ಸೆಂಗಾರ್‌ಗೆ ಪರಿಹಾರ ನೀಡುವ ದೆಹಲಿ ಹೈಕೋರ್ಟ್‌ನ ನಿರ್ಧಾರಕ್ಕೆ ತಡೆ ನೀಡುವಂತೆ ಕೋರಿ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ