Jallikattu: ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.

Jallikattu: ಕಂಬಳ, ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನು ಎತ್ತಿ ಹಿಡಿದ ಸುಪ್ರೀಂಕೋರ್ಟ್​
ಜಲ್ಲಿಕಟ್ಟು
Follow us
ನಯನಾ ರಾಜೀವ್
|

Updated on:May 18, 2023 | 11:51 AM

ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ. ತಮ್ಮ ನಿರ್ಧಾರವು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಂಬಳ ಹಾಗೂ ಗೂಳಿ ಓಟದ ಮೇಲಿನ ಕಾನೂನುಗಳಿಗೆ ಅನ್ವಯಿಸುತ್ತದೆ ಹಾಗೂ ಈ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಪೀಠವು ಹೇಳಿದೆ.

ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಪರಂಪರೆಯ ಭಾಗವೆಂದು ಶಾಸಕಾಂಗವು ಘೋಷಿಸಿದಾಗ, ನ್ಯಾಯಾಂಗವು ವಿಭಿನ್ನ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಹೇಳಿದೆ. ತಮಿಳುನಾಡಿನಲ್ಲಿ ಪೊಂಗಲ್ ಸುಗ್ಗಿಯ ಹಬ್ಬದಲ್ಲಿ ಸಾಂಪ್ರದಾಯಿಕವಾಗಿ ಆಡಲಾಗುತ್ತದೆ, ಜಲ್ಲಿಕಟ್ಟು ಒಂದು ಗೂಳಿಯನ್ನು ಪಳಗಿಸುವ ಕ್ರೀಡೆಯಾಗಿದೆ.

ನ್ಯಾ. ಕೆಎಂ ಜೋಸೆಫ್, ನ್ಯಾ. ಅಜಯ್ ರಸ್ತೋಗಿ, ನ್ಯಾ. ಅನಿರುದ್ಧ ಬೋಸ್, ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿಟಿ ರವಿಕುಮಾರ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಪ್ರಕಟವಾದ ಕಾರಣ ಪಟ್ಟಿಯ ಪ್ರಕಾರ, ನ್ಯಾಯಮೂರ್ತಿ ಅನಿರುದ್ಧ ಬೋಸ್ ಅವರು ಒಂದೇ ತೀರ್ಪು ಪ್ರಕಟಿಸಲಿದ್ದಾರೆ. ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಕ್ರೀಡೆಗೆ ಅನುಮತಿ ನೀಡಿದ ರಾಜ್ಯ ಕಾನೂನನ್ನು ಪ್ರಶ್ನಿಸಿ ಪ್ರಾಣಿ ಹಕ್ಕುಗಳ ಸಂಸ್ಥೆ ಪೆಟಾ ಸುಪ್ರೀಂಗೆ ಅರ್ಜಿ ಸಲ್ಲಿಸಿತ್ತು.

ಜಲ್ಲಿಕಟ್ಟು ಕ್ರೀಡೆಯನ್ನು ಎರುತಝುವುತಲ್ ಅಂತಲೂ ಕರೆಯುತ್ತಾರೆ. ಇದು ಪೊಂಗಲ್ ಸುಗ್ಗಿಯ ಹಬ್ಬದ ಭಾಗವಾಗಿ ತಮಿಳುನಾಡಿನಲ್ಲಿ ಗೂಳಿ ಪಳಗಿಸುವ ಕ್ರೀಡೆ ಆಗಿದೆ. ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ತೀರ್ಪು ಪ್ರಕಟಿಸಿದೆ. 2017ರಲ್ಲಿ ಪ್ರಾಣಿಗಳ ಮೇಲಿನ ಹಿಂಸೆ ತಡೆಯುವಂತೆ ಸಲ್ಲಿಸಿದ್ದ ಅರ್ಜಿಗಳಿಗೆ ಸಂಬಂಧಿಸಿದ ಗಣನೀಯ ಪ್ರಶ್ನೆಗಳನ್ನು ಎತ್ತಲಾಗಿತ್ತು. ಆದ ಕಾರಣ ದೊಡ್ಡ ಪೀಠದಿಂದ ಈ ವಿಚಾರವನ್ನು ತೀರ್ಮಾನಿಸಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು. ಅಲ್ಲದೆ ದೊಡ್ಡ ಪೀಠದಿಂದ ನಿರ್ಣಯಿಸಬೇಕಾದ ಐದು ಪ್ರಶ್ನೆಗಳನ್ನು ರೂಪಿಸಿತ್ತು.

ಜಲ್ಲಿಕಟ್ಟಿನಲ್ಲಿ ಯಾರೂ ಯಾವುದೇ ಆಯುಧವನ್ನು ಬಳಸುವುದಿಲ್ಲ. 2014ರ ತನ್ನ ತೀರ್ಪಿನಲ್ಲಿ, ಜಲ್ಲಿಕಟ್ಟು ಕಾರ್ಯಕ್ರಮಗಳು ಅಥವಾ ಎತ್ತಿನ-ಗಾಡಿ ಓಟದ ಪ್ರದರ್ಶನಕ್ಕಾಗಿ ಎತ್ತುಗಳನ್ನು ಬಳಸಲಾಗುವುದಿಲ್ಲ ಎಂದು ಹೇಳಿದೆ. ಮತ್ತು ದೇಶಾದ್ಯಂತ ಈ ಉದ್ದೇಶಗಳಿಗಾಗಿ ಎತ್ತುಗಳ ಬಳಕೆಯನ್ನು ನಿಷೇಧಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:38 am, Thu, 18 May 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ