Sign In

By signing in or creating an account, you agree with Associated Broadcasting Company's Terms & Conditions and Privacy Policy.

UP Madrasa Education Act: ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್​

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದೆ.

UP Madrasa Education Act: ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಸಿಂಧುತ್ವ ಎತ್ತಿ ಹಿಡಿದ ಸುಪ್ರೀಂಕೋರ್ಟ್​
ಮದರಸಾ Image Credit source: Aljazeera
Follow us
ನಯನಾ ರಾಜೀವ್
|

Updated on:Nov 05, 2024 | 12:13 PM

ಉತ್ತರ ಪ್ರದೇಶ ಮದರಸಾ ಶಿಕ್ಷಣ ಕಾಯ್ದೆಯ ಮಹತ್ವವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಉತ್ತರ ಪ್ರದೇಶದ ಮದರಸಾ ಕಾನೂನನ್ನು ಅಸಂವಿಧಾನಿಕ ಎಂದು ಘೋಷಿಸಿದ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್ ಮಂಗಳವಾರ ಪ್ರಕಟಿಸಿದೆ.

ತನ್ನ ಆದೇಶದಲ್ಲಿ, ನ್ಯಾಯಾಲಯವು ಕಾನೂನನ್ನು ಸಾಂವಿಧಾನಿಕ ಎಂದು ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ಹೈಕೋರ್ಟ್ ತೀರ್ಪಿನ ವಿರುದ್ಧ ಅಂಜುಮ್ ಕಡಾರಿ ಸಲ್ಲಿಸಿದ ಪ್ರಮುಖ ಸೇರಿದಂತೆ ಎಂಟು ಅರ್ಜಿಗಳ ತೀರ್ಪನ್ನು ಅಕ್ಟೋಬರ್ 22 ರಂದು ಕಾಯ್ದಿರಿಸಿತ್ತು.

ಮಾರ್ಚ್ 22 ರಂದು, ಅಲಹಾಬಾದ್ ಹೈಕೋರ್ಟ್ ಈ ಕಾಯ್ದೆಯನ್ನು ಅಸಂವಿಧಾನಿಕ ಮತ್ತು ಜಾತ್ಯತೀತತೆಯ ತತ್ವದ ಉಲ್ಲಂಘನೆ ಎಂದು ಘೋಷಿಸಿತ್ತು. ಏಪ್ರಿಲ್ 5 ರಂದು, ಸಿಜೆಐ ನೇತೃತ್ವದ ಪೀಠವು ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್, 2004 ಅನ್ನು ರದ್ದುಗೊಳಿಸಿದ ಹೈಕೋರ್ಟ್ ತೀರ್ಪಿಗೆ ತಡೆಯಾಜ್ಞೆ ನೀಡುವ ಮೂಲಕ ಸುಮಾರು 17 ಲಕ್ಷ ಮದರಸಾ ವಿದ್ಯಾರ್ಥಿಗಳಿಗೆ ಉಸಿರು ನೀಡಿತ್ತು.

ಮತ್ತಷ್ಟು ಓದಿ: Haldwani Riots: ಹಲ್ದ್ವಾನಿಯಲ್ಲಿ ಮದರಸಾ ನೆಲಸಮ, ಭುಗಿಲೆದ್ದ ಹಿಂಸಾಚಾರ, 4 ಮಂದಿ ಸಾವು, 200 ಜನರಿಗೆ ಗಾಯ

ಉತ್ತರ ಪ್ರದೇಶ ಬೋರ್ಡ್ ಆಫ್ ಮದರಸಾ ಎಜುಕೇಶನ್ ಆಕ್ಟ್ 2004′ ರ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಈ ಕಾನೂನನ್ನು ಅಸಾಂವಿಧಾನಿಕ ಎಂದು ಘೋಷಿಸಿತ್ತು. ಇದೀಗ ಸುಪ್ರೀಂ ಕೋರ್ಟ್‌ನ ತೀರ್ಪಿನಿಂದ ಮದರಸಾಗಳಿಗೆ ಸರ್ಕಾರಿ ಮಾನ್ಯತೆ ಸಿಗಲು ದಾರಿ ಸುಗಮವಾಗಿದೆ. ಮದರಸಾಗಳ ಶಿಕ್ಷಣ ಮಟ್ಟವನ್ನು ಸುಧಾರಿಸಲು ಮತ್ತು ಅವರಿಗೆ ಮಾನ್ಯತೆ ನೀಡಲು ಈ ಕಾಯ್ದೆಯನ್ನು ಮಾಡಲಾಗಿದೆ.

ಶಿಕ್ಷಣದ ಗುಣಮಟ್ಟವನ್ನು ನಿಗದಿಪಡಿಸುವುದು ಸರ್ಕಾರದ ಹಕ್ಕು ಎಂದು ನ್ಯಾಯಾಲಯ ಹೇಳಿದೆ. ಈ ನಿರ್ಧಾರವು ಉತ್ತರ ಪ್ರದೇಶದ ಮದರಸಾಗಳಿಗೆ ಹೊಸ ದಿಕ್ಕನ್ನು ನೀಡಿದ್ದು, ಈ ಮೂಲಕ ತಮ್ಮ ವಿದ್ಯಾರ್ಥಿಗಳ ಭವಿಷ್ಯವನ್ನು ಸುಧಾರಿಸಲು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:08 pm, Tue, 5 November 24