AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9ನೇ ತರಗತಿಯಿಂದಲೇ ಏಕೆ?; ಸಿಬಿಎಸ್​ಇ ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಆಕ್ಷೇಪ

ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) ಅಡಿಯಲ್ಲಿ 9ನೇ ತರಗತಿಯಿಂದ ಮೂರನೇ ಭಾಷೆಯನ್ನು ಕಡ್ಡಾಯವಾಗಿ ಪರಿಚಯಿಸುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಇಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬೋರ್ಡ್ ಪರೀಕ್ಷೆಗಳಿಗೆ ಸಿದ್ಧರಾಗುತ್ತಿರುವ ವಿದ್ಯಾರ್ಥಿಗಳ ಮೇಲೆ ಇದು ಅನಗತ್ಯ ಮಾನಸಿಕ ಒತ್ತಡ ಉಂಟುಮಾಡುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಸಿಬಿಎಸ್​ಇ ತನ್ನ ಹೊಸ ಆದೇಶದಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮೂರನೇ ಭಾಷೆಯನ್ನು ಕಡ್ಡಾಯ ಅರ್ಹತಾ ವಿಷಯವನ್ನಾಗಿ ಮಾಡಿತ್ತು. ಇದು 10ನೇ ತರಗತಿಯ ಮುಖ್ಯ ಬೋರ್ಡ್ ಪರೀಕ್ಷೆಯ ಅಂಕಗಳಿಗೆ ಸೇರದಿದ್ದರೂ, 2025-26ರ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳು ಶಾಲಾ ಮಟ್ಟದ ಆಂತರಿಕ ಮೌಲ್ಯಮಾಪನದಲ್ಲಿ ಕಡ್ಡಾಯವಾಗಿ ಉತ್ತೀರ್ಣರಾಗಬೇಕಿತ್ತು.

9ನೇ ತರಗತಿಯಿಂದಲೇ ಏಕೆ?; ಸಿಬಿಎಸ್​ಇ ತ್ರಿಭಾಷಾ ನೀತಿಗೆ ಸುಪ್ರೀಂ ಕೋರ್ಟ್ ಆಕ್ಷೇಪ
Supreme CourtImage Credit source: Getty Image
ಸುಷ್ಮಾ ಚಕ್ರೆ
|

Updated on:Jul 16, 2026 | 4:52 PM

Share

ನವದೆಹಲಿ, ಜುಲೈ 16: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿ (CBSE) 9ನೇ ತರಗತಿಯಿಂದ ಜಾರಿಗೆ ತರಲು ಉದ್ದೇಶಿಸಿರುವ ಮೂರು ಭಾಷಾ ನೀತಿಯನ್ನು (ತ್ರಿಭಾಷಾ ನೀತಿ) ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಇದು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡಕ್ಕೆ ಕಾರಣವಾಗಲಿದೆ ಎಂದಿರುವ ಸುಪ್ರೀಂ ಕೋರ್ಟ್ ಈ ನೀತಿಯನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. 9ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಈಗಾಗಲೇ ಬೋರ್ಡ್ ಪರೀಕ್ಷೆಗಳ (ಎಸ್​ಎಸ್​ಎಲ್​ಸಿ) ಸಿದ್ಧತೆಯಲ್ಲಿರುತ್ತಾರೆ. ಗಣಿತ, ವಿಜ್ಞಾನದಂತಹ ಕಠಿಣ ವಿಷಯಗಳ ಒತ್ತಡದಲ್ಲಿರುತ್ತಾರೆ. ಇಂತಹ ಹಂತದಲ್ಲಿ ದಿಢೀರನೆ ಸಿಬಿಎಸ್​ಇ ಮೂರನೇ ಭಾಷೆಯನ್ನು ಕಡ್ಡಾಯವಾಗಿ ಕಲಿಯುವಂತೆ ಮಾಡುವುದು ಎಷ್ಟು ಸಮಂಜಸ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಈ ನೀತಿ ವಿದ್ಯಾರ್ಥಿಗಳ ಮೇಲೆ ಅನಗತ್ಯ ಮಾನಸಿಕ ಒತ್ತಡವನ್ನು ಉಂಟುಮಾಡುತ್ತದೆ ಎಂದು ಕಳವಳ ವ್ಯಕ್ತಪಡಿಸಿರುವ ನ್ಯಾಯಾಲಯ, ಮೂರನೇ ಭಾಷೆಯನ್ನು 9ನೇ ತರಗತಿಯ ಬದಲಿಗೆ 6ನೇ ತರಗತಿಯಿಂದಲೇ ಜಾರಿಗೆ ತರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಬಿ. ವಿ. ನಾಗರತ್ನ ಸಿಬಿಎಸ್‌ಇಯ ನಿರ್ಧಾರವನ್ನು ಪ್ರಶ್ನಿಸಿದ್ದು, “10ನೇ ತರಗತಿಯ ಬೋರ್ಡ್ ಪರೀಕ್ಷೆಗಳ ಹಿನ್ನೆಲೆಯಲ್ಲಿ 8ನೇ ತರಗತಿಯ ಮುಕ್ತಾಯದಿಂದಲೇ ವಿದ್ಯಾರ್ಥಿಗಳ ಮೇಲೆ ಒತ್ತಡ ಆರಂಭವಾಗಿರುತ್ತದೆ. ಇಂತಹ ಸಂದರ್ಭದಲ್ಲಿ 9ನೇ ತರಗತಿಯಲ್ಲಿ ಹೊಸ ಭಾಷೆಯನ್ನು ಹೇರುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಿಬಿಎಸ್‌ಇ ನೂತನ ಅಧ್ಯಕ್ಷರಾಗಿ ಐಎಎಸ್​ ಅಧಿಕಾರಿ ಲೋಖಂಡೆ ಸೀತಾರಾಮ್ ನೇಮಕ

“ವಿದ್ಯಾರ್ಥಿಗಳು 3 ಭಾಷೆಗಳನ್ನು ಕಲಿಯುವುದು ಒಳ್ಳೆಯದೇ. ಆದರೆ ಅದನ್ನು 9ನೇ ತರಗತಿಯಿಂದಲೇ ಏಕೆ ಆರಂಭಿಸಬೇಕು? ಪ್ರಾಥಮಿಕ ಅಥವಾ ಪೂರ್ವ ಪ್ರಾಥಮಿಕ ಹಂತದಲ್ಲೇ ಮಕ್ಕಳು ಹೊಸ ಭಾಷೆಗಳನ್ನು ಸುಲಭವಾಗಿ ಕಲಿಯಬಲ್ಲರು. 9ನೇ ತರಗತಿಯಲ್ಲಿ 3ನೇ ಭಾಷೆಯನ್ನು ಹೇರಿದರೆ ವಿದ್ಯಾರ್ಥಿಗಳಿಗೆ ಇದು ಅತಿಯಾದ ಒತ್ತಡ ಉಂಟುಮಾಡುತ್ತದೆ” ಎಂದಿದ್ದಾರೆ.

ಏನಿದು ಸಿಬಿಎಸ್‌ಇಯ ತ್ರಿಭಾಷಾ ನೀತಿ?:

ರಾಷ್ಟ್ರೀಯ ಶಿಕ್ಷಣ ನೀತಿ (NEP) ಅಡಿಯಲ್ಲಿ ಸಿಬಿಎಸ್‌ಇ ಹೊಸ ಬದಲಾವಣೆಯನ್ನು ತರಲು ಮುಂದಾಗಿತ್ತು. ಇದರ ಪ್ರಕಾರ, 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಒಟ್ಟು 3 ಭಾಷೆಗಳನ್ನು ಕಲಿಯಬೇಕಾಗುತ್ತದೆ. ಈ ಮೂರು ಭಾಷೆಗಳಲ್ಲಿ ಕನಿಷ್ಠ ಎರಡು ಭಾಷೆಗಳು ಭಾರತೀಯ ಮೂಲದ ಭಾಷೆಗಳಾಗಿರಬೇಕು. (ಉದಾಹರಣೆಗೆ: ಹಿಂದಿ, ಸಂಸ್ಕೃತ, ಕನ್ನಡ, ತಮಿಳು ಇತ್ಯಾದಿ).

2026-27ನೇ ಶೈಕ್ಷಣಿಕ ಸಾಲಿನ 10ನೇ ತರಗತಿ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಹಳೆಯ ನಿಯಮವೇ ಮುಂದುವರಿಯಲಿದ್ದು, ಕೇವಲ ಎರಡು ಭಾಷೆಗಳನ್ನು ಮಾತ್ರ ಓದುತ್ತಾರೆ. ಇವರಿಗೆ ಮೂರನೇ ಭಾಷೆಯ ನಿಯಮ ಅನ್ವಯಿಸುವುದಿಲ್ಲ. ಆದರೆ, 9ನೇ ತರಗತಿ ವಿದ್ಯಾರ್ಥಿಗಳು ಮೂರು ಭಾಷೆಗಳನ್ನು ಕಲಿಯಬೇಕಾಗುತ್ತದೆ. ಇವರು ಮುಂದಿನ ವರ್ಷ (೨೦೨೭-೨೮ರಲ್ಲಿ) 10ನೇ ತರಗತಿಗೆ ಹೋದಾಗ ಈ ಮೂರನೇ ಭಾಷೆಗೆ ಯಾವುದೇ ಸಿಬಿಎಸ್‌ಇ ಬೋರ್ಡ್ ಪರೀಕ್ಷೆ ಇರುವುದಿಲ್ಲ, ಕೇವಲ ಶಾಲಾ ಮಟ್ಟದ ಮೌಲ್ಯಮಾಪನವಿರುತ್ತದೆ.

ಇದನ್ನೂ ಓದಿ: ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಹೊಸ ರೂಲ್ಸ್: 9ನೇ ತರಗತಿಯಿಂದ 3 ಭಾಷೆಗಳ ಅಧ್ಯಯನ ಕಡ್ಡಾಯ; ಕನಿಷ್ಠ 2 ಭಾರತೀಯ ಭಾಷೆಗಳಿರಬೇಕು!

ಈಗಾಗಲೇ ಗಣಿತ, ಸಮಾಜ ವಿಜ್ಞಾನ, ಮತ್ತು ವಿಜ್ಞಾನ ವಿಷಯಗಳ ಹೊರೆ ಇರುವಾಗ, ಮತ್ತೊಂದು ಭಾಷೆಯನ್ನು ಹೆಚ್ಚುವರಿಯಾಗಿ ಕಲಿಯುವುದು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ದಿಢೀರನೆ ಹೊಸ ಭಾಷೆಯನ್ನು ಕಲಿಯುವುದು ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಷ್ಟವಾಗಬಹುದು ಎಂದು ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.

ಸುಪ್ರೀಂ ಕೋರ್ಟ್ ನೀಡಿದ ಸೂಚನೆ ಏನು?:

ಈ ತ್ರಿಭಾಷಾ ನೀತಿಯು ವಿದ್ಯಾರ್ಥಿಗಳಿಗೆ ಹೊರೆಯಾಗದಂತೆ ತಡೆಯಲು, ಇದರ ಪ್ರಾಯೋಗಿಕತೆ ಮತ್ತು ಸಮಯದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವಾಲಯಕ್ಕೆ ನಿರ್ದೇಶನ ನೀಡಿದೆ. ಭಾಷಾ ಕಲಿಕೆಯನ್ನು ಪ್ರಾಥಮಿಕ ಹಂತದಿಂದಲೇ ಹಂತಹಂತವಾಗಿ ಜಾರಿಗೆ ತರುವುದು ಹೆಚ್ಚು ಸೂಕ್ತ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 16 July 26

Follow Us
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ
ಕಾಮನ್‌ವೆಲ್ತ್ ಗೇಮ್ಸ್ ಕ್ರೀಡಾಪಟುಗಳಿಗೆ ಲಕ್ಷ ಲಕ್ಷ ಪ್ರೋತ್ಸಾಹಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ