AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arvind Kejriwal: ಅಬಕಾರಿ ನೀತಿ ಹಗರಣ; ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿತ್ತು. ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅವರಿಗೆ ನೀಡಿದ ಸಮನ್ಸ್‌ಗಳನ್ನು ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 9ರಂದು ವಿಚಾರಣೆಗೆ ಪಟ್ಟಿ ಮಾಡಿತ್ತು.

Arvind Kejriwal: ಅಬಕಾರಿ ನೀತಿ ಹಗರಣ; ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ನಾಳೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಅರವಿಂದ್ ಕೇಜ್ರಿವಾಲ್
ಸುಷ್ಮಾ ಚಕ್ರೆ
|

Updated on: Jul 11, 2024 | 9:02 PM

Share

ನವದೆಹಲಿ: ಇದೀಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಕುರಿತು ಶುಕ್ರವಾರ (ಜುಲೈ 12) ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.

ನಿನ್ನೆಯಷ್ಟೇ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ ಸಮನ್ಸ್‌ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 9ರಂದು ವಿಚಾರಣೆಗೆ ಪಟ್ಟಿ ಮಾಡಿತ್ತು.

ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಪ್ರೊಡಕ್ಷನ್ ವಾರಂಟ್ ಜಾರಿ ಮಾಡಿದ ದೆಹಲಿ ಕೋರ್ಟ್

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು. ಇದೀಗ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ತನ್ನ ವಶಕ್ಕೆ ಪಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?