ನವದೆಹಲಿ: ಇದೀಗ ರದ್ದಾದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನ ಬಂಧನವನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯ ಕುರಿತು ಶುಕ್ರವಾರ (ಜುಲೈ 12) ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಲಿದೆ.
ನಿನ್ನೆಯಷ್ಟೇ ಅಬಕಾರಿ ನೀತಿ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಇಡಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ನೀಡಿದ ಸಮನ್ಸ್‌ಗಳನ್ನು ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೆಪ್ಟೆಂಬರ್ 9ರಂದು ವಿಚಾರಣೆಗೆ ಪಟ್ಟಿ ಮಾಡಿತ್ತು.
ಇದನ್ನೂ ಓದಿ: ಅಬಕಾರಿ ನೀತಿ ಪ್ರಕರಣ: ಅರವಿಂದ್ ಕೇಜ್ರಿವಾಲ್‌ಗೆ ಪ್ರೊಡಕ್ಷನ್ ವಾರಂಟ್ ಜಾರಿ ಮಾಡಿದ ದೆಹಲಿ ಕೋರ್ಟ್
ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು. ಇದೀಗ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ತನ್ನ ವಶಕ್ಕೆ ಪಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ