AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಸರ್ಕಾರಗಳಿಗೆ 24 ಗಂಟೆಗಳ ಡೆಡ್​ಲೈನ್ ಕೊಟ್ಟು, ವಾರ್ನ್​ ಮಾಡಿದ ಸುಪ್ರೀಂಕೋರ್ಟ್​​

Delhi Pollution: ಸುಪ್ರೀಂಕೋರ್ಟ್​ನಲ್ಲಿ ದೆಹಲಿ ಸರ್ಕಾರದ ಪರ ಅಭಿಷೇಕ್ ಮನು ಸಿಂಘ್ವಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಾಲಿಸಿಟರ್​ ಜನರಲ್ ತುಷಾರ್ ಮೆಹ್ತಾ ವಾದ ಮಂಡನೆ ಮಾಡುತ್ತಿದ್ದಾರೆ. ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ. 

ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; ನಿಯಂತ್ರಣ ಕ್ರಮಗಳ ಅನುಷ್ಠಾನಕ್ಕೆ ಸರ್ಕಾರಗಳಿಗೆ 24 ಗಂಟೆಗಳ ಡೆಡ್​ಲೈನ್ ಕೊಟ್ಟು, ವಾರ್ನ್​ ಮಾಡಿದ ಸುಪ್ರೀಂಕೋರ್ಟ್​​
ದೆಹಲಿ ಮಾಲಿನ್ಯದ ಚಿತ್ರಣ
TV9 Web
| Edited By: |

Updated on:Dec 02, 2021 | 1:00 PM

Share

ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಕಡಿಮೆಯಾಗಿದೆ ಎಂದು ಸರ್ಕಾರ ಪ್ರತಿಪಾದಿಸುತ್ತಿದೆ. ಆದರೆ ಇಲ್ಲಿ ಸ್ವಲ್ಪವೂ ಮಾಲಿನ್ಯ ಕಡಿಮೆಯಾಗಿಲ್ಲ. ಬದಲಾಗಿ ಹೆಚ್ಚಾಗಿದೆ ಎಂದು ಇಂದು ಸುಪ್ರೀಂಕೋರ್ಟ್ ಹೇಳಿದೆ. ಅಷ್ಟೇ ಅಲ್ಲ, ಕೈಗಾರಿಕಾ ಮತ್ತು ವಾಹನಗಳಿಂದ ಉಂಟಾಗುತ್ತಿರುವ ಮಾಲಿನ್ಯದ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಮತ್ತು ದೆಹಲಿ ಆಪ್​ ಸರ್ಕಾರಕ್ಕೆ 24 ಗಂಟೆಗಳ ಡೆಡ್​​ಲೈನ್​​ನ್ನೂ ನೀಡಿದೆ.  ದೆಹಲಿಯಲ್ಲಿ ಕಳೆದ ಹಲವು ದಿನಗಳಿಂದಲೂ ಮಾಲಿನ್ಯ ಮಟ್ಟ ಏರಿಕೆಯಾಗಿದ್ದು, ವಾಯುಗುಣಮಟ್ಟ ಸೂಚ್ಯಂಕ 500ಕ್ಕೆ ತಲುಪಿದ್ದು, ಮಾಲಿನ್ಯ ಅತ್ಯಂತ ಗಂಭೀರ ಸ್ವರೂಪದ ಹಂತ ತಲುಪಿದೆ.

ಇನ್ನು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ಪಿಐಎಲ್​​ಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್​ ಸಿಜೆಐ ಎನ್​.ವಿ.ರಮಣ, ನ್ಯಾಯಮೂರ್ತಿಗಳಾದ ಸೂರ್ಯಕಾಂತ್​ ಮತ್ತು ಡಿ.ವೈ.ಚಂದ್ರಚೂಡ್​ ಅವರನ್ನೊಳಗೊಂಡ ಪೀಠ, ಇಂದು ಕೂಡ ದೆಹಲಿ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.  ಮಾಲಿನ್ಯ ತಡೆಗಟ್ಟಲು ಏನೇನೂ ಮಾಡಲಾಗಿಲ್ಲ. ಹಾಗಾಗಿ ಮಾಲಿನ್ಯ ಹೆಚ್ಚುತ್ತಲೇ ಇದೆ..ಕೇವಲ ಸಮಯ ಹಾಳು ಮಾಡಲಾಗುತ್ತಿದೆಯಷ್ಟೇ ಎಂಬುದು ನಮ್ಮ ಭಾವನೆ ಎಂದು ಸಿಜೆಐ ಎನ್​.ವಿ ರಮಣ ಇಂದು ಹೇಳಿದ್ದಾರೆ. ಅಂದಹಾಗೆ, ದೆಹಲಿ ಮತ್ತು ಸುತ್ತಲಿನ ನಗರಗಳಲ್ಲಿ ಮಾಲಿನ್ಯ ಮಟ್ಟ ಏರಿಕೆಯಾಗುತ್ತಿರುವ ಕಾರಣಕ್ಕೆ ಸುಪ್ರೀಂಕೋರ್ಟ್​ ನಿರಂತರವಾಗಿ ಕಳೆದ ನಾಲ್ಕು ವಾರಗಳಿಂದ ಅಸಮಾಧಾನ ವ್ಯಕ್ತಪಡಿಸುತ್ತಲೇ ಬರುತ್ತಿದೆ.

ಇಂದಿನ ವಿಚಾರಣೆ ವೇಳೆ ಎನ್​.ವಿ.ರಮಣ ಇನ್ನೂ ಖಡಕ್​ ಆಗಿಯೇ ಸರ್ಕಾರಗಳಿಗೆ ಬಿಸಿ ಮುಟ್ಟಿಸಿದ್ದಾರೆ. ನೀವು ಆನ್​ಲೈನ್​ ಕ್ಲಾಸ್​ಗಳು, ವರ್ಕ್​ ಫ್ರಂ ಹೋಂ ಪದ್ಧತಿ ಮೂಲಕ ಮಾಲಿನ್ಯ ಮಟ್ಟ ನಿಯಂತ್ರಣ ಮಾಡುವುದಾಗಿ ಹೇಳಿದ್ದಿರಿ. ಆದರೆ ಅದೂ ಕೂಡ ಆಯ್ಕೆ ಎಂದು ಹೇಳುತ್ತೀರಿ. ಹೀಗೆ ಹೇಳಿದರೆ ಯಾರು ಮನೆಯಲ್ಲಿ ಇರುತ್ತಾರೆ? ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಪಟ್ಟಂತೆ ನಾಳೆಯೊಳಗೆ ಕಠಿಣ ಕ್ರಮ ವಹಿಸಬೇಕು. ನಾವು ನಿಮಗೆ 24 ತಾಸುಗಳ ಗಡುವು ಕೊಡುತ್ತಿದ್ದೇವೆ. ಅದಾಗದೆ ಇದ್ದರೆ, ಮುಂದಿನ ಆದೇಶ ನಾವೇ ಹೊರಡಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ದೀಪಾವಳಿ ನಂತರದ ದಿನಗಳಿಂದ ವಾಯುಮಾಲಿನ್ಯ ಏರುತ್ತಿದೆ. ರೈತರು ಕೊಯ್ಲಿನ ಬಳಿಕ ಕಳೆಗೆ ಬೆಂಕಿ ಹಾಕುವುದರಿಂದ ಮಾಲಿನ್ಯ ಹೆಚ್ಚುತ್ತದೆ ಎಂದು ಸರ್ಕಾರಗಳು ಸುಪ್ರೀಂಕೋರ್ಟ್​ಗೆ ಹೇಳಿದ್ದವು. ಆದರೆ ಇದನ್ನು ಸಂಪೂರ್ಣವಾಗಿ ಒಪ್ಪಲು ಸುಪ್ರೀಂಕೋರ್ಟ್​ ನಿರಾಕರಿಸಿತ್ತು. ಪಟಾಕಿ ನಿಷೇಧವಾಗಿದೆ..ದೀಪವಾಳಿ ಮುಗಿದಿದೆ ಆದರೂ ಅನೇಕರು ಪಟಾಕಿ ಹೊಡೆಯುತ್ತಿದ್ದಾರೆ. ಆದರೆ ನೀವು ರೈತರ ಮೇಲೆ ತಪ್ಪು ಹೊರೆಸುತ್ತಿದ್ದೀರಿ ಎಂದು ನ್ಯಾಯಮೂರ್ತಿಗಳು ತಿರುಗೇಟು ನೀಡಿದ್ದರು. ವಾಹನದ ಹೊಗೆ, ಕೈಗಾರಿಕೆಗಳಿಂದ ಹೊರಸೂಸುವ ವಿಷಾನಿಲಯ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳುವಂತೆ ಹಿಂದಿನ ವಿಚಾರಣೆ ವೇಳೆಯೂ ಸರ್ಕಾರಗಳಿಗೆ ಮಾರ್ಗದರ್ಶನ ನೀಡಲಾಗಿತ್ತು. ಇನ್ನು ಸುಪ್ರೀಂಕೋರ್ಟ್​ನಲ್ಲಿ ದೆಹಲಿ ಸರ್ಕಾರದ ಪರ ಅಭಿಷೇಕ್ ಮನು ಸಿಂಘ್ವಿ ಮತ್ತು ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಸಾಲಿಸಿಟರ್​ ಜನರಲ್ ತುಷಾರ್ ಮೆಹ್ತಾ ವಾದ ಮಂಡನೆ ಮಾಡುತ್ತಿದ್ದಾರೆ. ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

ಇದನ್ನೂ ಓದಿ: ರಸ್ತೆ ಗುಂಡಿಗೆ ಸವಾರ ಬಲಿ? ಟ್ರಾಫಿಕ್ ಪೊಲೀಸ್ ಹಾಗೂ ಬಿಬಿಎಂಪಿ ನಡುವೆ ಆರೋಪ ಪ್ರತ್ಯಾರೋಪ, ಬಿಬಿಎಂಪಿ ಎಇಇ ಮೇಲೆ ಎಫ್ಐಆರ್ ದಾಖಲು

Published On - 12:45 pm, Thu, 2 December 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ