ಸುಪ್ರೀಂಕೋರ್ಟ್‌ಗೆ ಶೀಘ್ರದಲ್ಲೇ ಐವರು ನೂತನ ನ್ಯಾಯಾಧೀಶರ ನೇಮಕ: ಕೇಂದ್ರ ಸರ್ಕಾರ
Supreme Court: ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್ 13 ರಂದು ಶಿಫಾರಸು ಮಾಡಲಾಗಿದ್ದು, ಒಮ್ಮೆ ಅವರು ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಿಕೆ ಆಗಲಿದೆ
ಸುಪ್ರೀಂಕೋರ್ಟ್‌ಗೆ (Supreme Court) ಶೀಘ್ರದಲ್ಲೇ ಐವರು ನೂತನ ನ್ಯಾಯಾಧೀಶರನ್ನು ನೇಮಕ ಮಾಡಲಾಗುವುದು ಎಂದು ಸರ್ಕಾರ ಶುಕ್ರವಾರ ತಿಳಿಸಿದೆ. ಮೂವರು ಹೈಕೋರ್ಟ್(High Court) ಮುಖ್ಯ ನ್ಯಾಯಮೂರ್ತಿಗಳು ಮತ್ತು ಇಬ್ಬರು ಹೈಕೋರ್ಟ್ ನ್ಯಾಯಮೂರ್ತಿಗಳ ಹೆಸರನ್ನು ಭಾನುವಾರದೊಳಗೆ ಅಂತಿಮಗೊಳಿಸಲಾಗುವುದು ಎಂದು ಅಟಾರ್ನಿ ಜನರಲ್ ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿದ್ದಾರೆ. ಸುಪ್ರೀಂಕೋರ್ಟ್‌ಗೆ ಬಡ್ತಿ ಶಿಫಾರಸು ಮಾಡಲಾದ ಮೂವರು ಮುಖ್ಯ ನ್ಯಾಯಮೂರ್ತಿಗಳು- ರಾಜಸ್ಥಾನ ಹೈಕೋರ್ಟ್‌ನ ನ್ಯಾಯಮೂರ್ತಿ ಪಂಕಜ್ ಮಿಥಾಲ್, ಪಾಟ್ನಾ ಹೈಕೋರ್ಟ್‌ನ ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ಮಣಿಪುರ ಹೈಕೋರ್ಟ್‌ನಿಂದ ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್. ಇನ್ನಿಬ್ಬರು ನ್ಯಾಯಾಧೀಶರು ಪಾಟ್ನಾ ಹೈಕೋರ್ಟ್‌ನ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್‌ನ ಮನೋಜ್ ಮಿಶ್ರಾ.
ಎಲ್ಲಾ ಐದು ಹೆಸರುಗಳನ್ನು ಡಿಸೆಂಬರ್ 13 ರಂದು ಶಿಫಾರಸು ಮಾಡಲಾಗಿದ್ದು, ಒಮ್ಮೆ ಅವರು ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಉನ್ನತ ನ್ಯಾಯಾಲಯದ ನ್ಯಾಯಮೂರ್ತಿಗಳ ಸಂಖ್ಯೆ 32 ಕ್ಕೆ ಏರಿಕೆ ಆಗಲಿದೆ. ಮುಖ್ಯ ನ್ಯಾಯಮೂರ್ತಿ ಸೇರಿದಂತೆ 34 ನ್ಯಾಯಾಧೀಶರು ಅಲ್ಲಿರಬಹುದು. ಅಲಹಾಬಾದ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ರಾಜೇಶ್ ಬಿಂದಾಲ್ ಮತ್ತು ಗುಜರಾತ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರ ಹೆಸರನ್ನು ಮಂಗಳವಾರ ಕೊಲಿಜಿಯಂ ಶಿಫಾರಸು ಮಾಡಿದೆ.
ಇದನ್ನೂ ಓದಿ:
ಅವರ ಹೆಸರನ್ನು ಶಿಫಾರಸು ಮಾಡುವಾಗ ಡಿಸೆಂಬರ್‌ನಲ್ಲಿ ಶಿಫಾರಸು ಮಾಡಿದ ಹೆಸರುಗಳಿಗೆ ‘ಪ್ರಾಶಸ್ತ್ಯವಿರುತ್ತದೆ’ ಎಂದು ಸರ್ಕಾರ ಕಾನೂನು ಸಚಿವಾಲಯಕ್ಕೆ ತಿಳಿಸಿದೆ. ‘‘ಆದ್ದರಿಂದ ಡಿಸೆಂಬರ್ 13ರಂದು ಶಿಫಾರಸು ಮಾಡಿರುವ ಐವರು ನ್ಯಾಯಮೂರ್ತಿಗಳ ನೇಮಕವನ್ನು ಪ್ರತ್ಯೇಕವಾಗಿ ಮತ್ತು ಮೊದಲೇ ತಿಳಿಸಬೇಕು ಎಂದಿತ್ತು ಕೊಲಿಜಿಯಂ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:08 pm, Fri, 3 February 23