ಅತ್ಯಾಚಾರ ಸೇರಿದಂತೆ ಅತಿ ತುರ್ತು ಪ್ರಕರಣಗಳ ವಿಚಾರಣೆಗೆ ಮಾರ್ಗಸೂಚಿ ಸಿದ್ಧಪಡಿಸಿದ ಸುಪ್ರೀಂಕೋರ್ಟ್​

ಅತಿ ತುರ್ತು ಪ್ರಕರಣಗಳ ವಿಚಾರಣೆಗೆ ಸುಪ್ರೀಂಕೋರ್ಟ್​ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸೂಚನೆ ಮೇರೆಗೆ ಅತಿ ತುರ್ತಾದ ಪ್ರಕರಣಗಳಲ್ಲಿ ಅರ್ಜಿದಾರರ ನೆರವಿಗೋಸ್ಕರ ಇಂತಹ ಮಾರ್ಗಸೂಚಿಯನ್ನು ಜಾರಿ ಮಾಡಲು ನಿರ್ಧರಿಸಲಾಗಿದೆ.

ಅತ್ಯಾಚಾರ ಸೇರಿದಂತೆ ಅತಿ ತುರ್ತು ಪ್ರಕರಣಗಳ ವಿಚಾರಣೆಗೆ ಮಾರ್ಗಸೂಚಿ ಸಿದ್ಧಪಡಿಸಿದ ಸುಪ್ರೀಂಕೋರ್ಟ್​
ಸುಪ್ರೀಂಕೋರ್ಟ್​
Follow us
ನಯನಾ ರಾಜೀವ್
|

Updated on: Aug 22, 2023 | 2:23 PM

ಅತಿ ತುರ್ತು ಪ್ರಕರಣಗಳ ವಿಚಾರಣೆಗೆ ಸುಪ್ರೀಂಕೋರ್ಟ್​ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸೂಚನೆ ಮೇರೆಗೆ ಅತಿ ತುರ್ತಾದ ಪ್ರಕರಣಗಳಲ್ಲಿ ಅರ್ಜಿದಾರರ ನೆರವಿಗೋಸ್ಕರ ಇಂತಹ ಮಾರ್ಗಸೂಚಿಯನ್ನು ಜಾರಿ ಮಾಡಲು ನಿರ್ಧರಿಸಲಾಗಿದೆ. ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭವಾಗುತ್ತಿದ್ದಂತೆ ಸುಪ್ರೀಂಕೋರ್ಟ್​ ರೂಮಿನಲ್ಲಿಯೇ ಪ್ರಕರಣವನ್ನು ಉಲ್ಲೇಖಿಸಲು ಅಥವಾ ಊಟದ ಸಮಯದಲ್ಲಿ ಕೋರ್ಟ್​ ಗಮನಕ್ಕೆ ವಿಚಾರವನ್ನು ತರಲು ಹಾಗೆಯೇ ಇ-ಮೇಲ್ ಮೂಲಕವೂ ತುರ್ತು ಪ್ರಕರಣಗಳ ವಿಚಾರಣೆಗೆ ಮನವಿ ಮಾಡುವ ಸಂಬಂಧ ಹೊಸ ಮಾರ್ಗಸೂಚಿಯನ್ನು ಸುಪ್ರೀಂಕೋರ್ಟ್​ ತರಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ತೀಸ್ತಾ ಸೆಟಲ್ವಾಡ ಪ್ರಕರಣದಲ್ಲಿ ಶನಿವಾರ ರಾತ್ರಿ ಅರ್ಜಿಯ ತುರ್ತು ವಿಚಾರಣೆ ನಡೆಸಿದ ಬಳಿಕ ನ್ಯಾಯಾಂಗದಲ್ಲಿ ಸಾಕಷ್ಟು ಚರ್ಚೆಗಳು ನಡೆದಿದ್ದವು. ತುರ್ತು ಪ್ರಕರಣ ಎನ್ನುವುದರ ವ್ಯಾಪ್ತಿ ಹಾಗೂ ಅದರ ಪರಿಮಿತಿಯ ಬಗ್ಗೆ ಸಾಕಷ್ಟು ವಾದಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಇಂತಹ ಯಾವುದೇ ವಿವಾದಗಳಿಗೆ ತೆರೆ ಎಳೆಯುವ ಉದ್ದೇಶವಾಗಿ ಈ ತುರ್ತು ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಲು ಮುಖ್ಯ ನ್ಯಾಯಮೂರ್ತಿಗಳು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಅತ್ಯಾಚಾರ ಸಂತ್ರಸ್ತ ಮಹಿಳೆಗೆ ಗರ್ಭಪಾತ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ಅನುಮತಿ ನೀಡಿದೆ. ಮದುವೆಗೆ ಮುನ್ನವೇ ಗರ್ಭಿಣಿಯಾಗುವುದು ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸಂಸತ್ರಸ್ತೆ ಗರ್ಭಿಣಿಯಾಗಿ 27 ವಾರಗಳಿಗಿಂತ ಹೆಚ್ಚು ಸಮಯವಾಗಿದೆ. ಸಂತ್ರಸ್ತೆಯ ವೈದ್ಯಕೀಯ ವರದಿಯನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಬಿ.ವಿ.ನಾಗರತ್ನ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ನ್ಯಾಯಪೀಠ, ಸಂತ್ರಸ್ತೆಯ ಗರ್ಭಪಾತ ಮಾಡದಂತೆ ಗುಜರಾತ್ ಹೈಕೋರ್ಟ್ ನೀಡಿರುವ ಆದೇಶ ಸರಿಯಲ್ಲ ಎಂದು ಹೇಳಿದೆ. ಭಾರತೀಯ ಸಮಾಜದಲ್ಲಿ, ಮದುವೆಯ ನಂತರ ಗರ್ಭಧಾರಣೆಯು ದಂಪತಿಗಳಿಗೆ ಮಾತ್ರವಲ್ಲದೆ ಕುಟುಂಬ ಮತ್ತು ಸ್ನೇಹಿತರಲ್ಲಿ ಸಂತೋಷ ಮತ್ತು ಸಂಭ್ರ ಮನೆಮಾಡುತ್ತದೆ.

ಮತ್ತಷ್ಟು ಓದಿ: ಹಾಸನ: 14 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ನಾಲ್ವರು ಅರೆಸ್ಟ್

ಮದುವೆಗೆ ಮುಂಚೆ ಗರ್ಭಾವಸ್ಥೆಯು ಹಾನಿಕಾರಕವಾಗಿದೆ ಮತ್ತು ಗರ್ಭಿಣಿಯರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ವೈದ್ಯಕೀಯ ವರದಿಯನ್ನು ಗಮನದಲ್ಲಿಟ್ಟುಕೊಂಡು ಸಂತ್ರಸ್ತ ಮಹಿಳೆಗೆ ಗರ್ಭಧಾರಣೆಯನ್ನು ಅಂತ್ಯಗೊಳಿಸಲು ನಾವು ಅವಕಾಶ ನೀಡುತ್ತೇವೆ ಎಂದು ಪೀಠ ಹೇಳಿದೆ.

ಅತ್ಯಾಚಾರ ಸಂತ್ರಸ್ತೆ ಗರ್ಭಪಾತಕ್ಕೆ ಅನುಮತಿ ಕೋರಿದ್ದರು, ಅದರ ಮೇಲೆ ಗುಜರಾತ್ ಹೈಕೋರ್ಟ್ ಶನಿವಾರ ಆಕೆಗೆ ಪರಿಹಾರ ನೀಡಲು ನಿರಾಕರಿಸಿತು.

ಸಂತ್ರಸ್ತೆಯ ಗರ್ಭಪಾತದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್, ಆಕೆಯ ಮರು ವೈದ್ಯಕೀಯ ಪರೀಕ್ಷೆಗೆ ಆದೇಶಿಸಿತ್ತು ಮತ್ತು ಆಗಸ್ಟ್ 20 ರೊಳಗೆ ಆಸ್ಪತ್ರೆಯಿಂದ ವರದಿ ಕೇಳಿತ್ತು.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿವಿ ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ವಲ್ ಭುಯಾನ್ ಅವರ ಪೀಠವು ಶನಿವಾರ ಆದೇಶದ ಬಗ್ಗೆ ಮಾಹಿತಿ ಪಡೆದ ನಂತರ ಗುಜರಾತ್ ಹೈಕೋರ್ಟ್‌ನಲ್ಲಿ ಏನಾಗುತ್ತಿದೆ? ಭಾರತದ ಯಾವುದೇ ನ್ಯಾಯಾಲಯವು ಸುಪ್ರೀಂ ಕೋರ್ಟ್‌ನ ಆದೇಶದ ವಿರುದ್ಧ ಹೋಗಲು ಸಾಧ್ಯವಿಲ್ಲ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ