ದೆಹಲಿಯಲ್ಲಿ ಆಮ್ಲಜನಕ ‘ಹೆಚ್ಚಿಗೆ  ಬಳಕೆ’ ವರದಿಯನ್ನು ಸುಪ್ರೀಂಕೋರ್ಟ್  ಸಮಿತಿ ಅನುಮೋದಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಮನೀಶ್ ಸಿಸೋಡಿಯಾ

Manish Sisodia: ದೆಹಲಿಯಲ್ಲಿ ಆಮ್ಲಜನಕದ ಬೇಡಿಕೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯೊಂದರಲ್ಲಿ ಉಲ್ಲೇಖಿಸಲಾಗಿದೆ. ಅಂತಹ ಯಾವುದೇ ವರದಿ ಇಲ್ಲ. ಬಿಜೆಪಿ ಹಂಚಿಕೊಳ್ಳುತ್ತಿರುವ ವರದಿ ಎಲ್ಲೂ ಅಸ್ತಿತ್ವದಲ್ಲಿಲ್ಲ. ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಮನೀಶ್ ಸಿಸೋಡಿಯಾ ಹೇಳಿದ್ದಾರೆ.

ದೆಹಲಿಯಲ್ಲಿ ಆಮ್ಲಜನಕ 'ಹೆಚ್ಚಿಗೆ  ಬಳಕೆ' ವರದಿಯನ್ನು ಸುಪ್ರೀಂಕೋರ್ಟ್  ಸಮಿತಿ ಅನುಮೋದಿಸಿಲ್ಲ, ಬಿಜೆಪಿ ಸುಳ್ಳು ಹೇಳುತ್ತಿದೆ: ಮನೀಶ್ ಸಿಸೋಡಿಯಾ
ಮನೀಶ್ ಸಿಸೋಡಿಯಾ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 25, 2021 | 2:07 PM

ದೆಹಲಿ: ಸುಪ್ರೀಂಕೋರ್ಟ್‌ನ ಆಮ್ಲಜನಕ ಲೆಕ್ಕಪರಿಶೋಧನಾ ಸಮಿತಿಯ ಸದಸ್ಯರು ಮಧ್ಯಂತರ ವರದಿಗೆ “ಸಹಿ ಮಾಡಿಲ್ಲ ಅಥವಾ ಅನುಮೋದಿಸಿಲ್ಲ” ಎಂದು ದೆಹಲಿ ಸರ್ಕಾರ ಶುಕ್ರವಾರ ಹೇಳಿದೆ. ದೇಶದಲ್ಲಿ ಕೊವಿಡ್ ಎರಡನೇ ಅಲೆಯ ಉತ್ತುಂಗದಲ್ಲಿದ್ದಾಗ ದೆಹಲಿ ವೈದ್ಯಕೀಯ ಆಮ್ಲಜನಕವನ್ನು ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಬಳಸಿಕೊಂಡಿದೆ ಎಂದು ಮಧ್ಯಂತರ ವರದಿಯಲ್ಲಿ ಹೇಳಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಜೆಪಿ ಪಕ್ಷ ಶೇರ್ ಮಾಡಿರುವ ವರದಿ ಬಿಜೆಪಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಸಿದ್ಧಪಡಿಸಿರುವುದು. ಸುಪ್ರೀಂಕೋರ್ಟ್  ಸಮಿತಿ ಸಿದ್ಧಪಡಿಸಿದ ಮಧ್ಯಂತರ ವರದಿಯನ್ನು ಈಗಾಗಲೇ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದಿದ್ದಾರೆ.

“ದೆಹಲಿಯಲ್ಲಿ ಆಮ್ಲಜನಕದ ಬೇಡಿಕೆಯನ್ನು ಹೆಚ್ಚಿಸಲಾಗಿದೆ ಎಂದು ವರದಿಯೊಂದರಲ್ಲಿ ಉಲ್ಲೇಖಿಸಲಾಗಿದೆ. ಅಂತಹ ಯಾವುದೇ ವರದಿ ಇಲ್ಲ. ಬಿಜೆಪಿ ಹಂಚಿಕೊಳ್ಳುತ್ತಿರುವ ವರದಿ ಎಲ್ಲೂ ಅಸ್ತಿತ್ವದಲ್ಲಿಲ್ಲ. ಅವರು ಸುಳ್ಳು ಹೇಳುತ್ತಿದ್ದಾರೆ. ನಾವು ಮಾತನಾಡಿದ ಸಮಿತಿಯ ಸದಸ್ಯರು ಯಾವುದೇ ವರದಿಗೆ ಸಹಿ ಮಾಡಿಲ್ಲ ಅಥವಾ ಅನುಮೋದಿಸಿಲ್ಲ ಎಂದು ಹೇಳುತ್ತಿದ್ದಾರೆ. ಈ ವಿಷಯವು ನ್ಯಾಯಾಲಯಕ್ಕೆ ಸಂಬಂಧಪಟ್ಟಿದ್ದು ನ್ಯಾಯಾಲಯದಲ್ಲಿರುವ ವಿಷಯಗಳ ಬಗ್ಗೆ ರಾಜಕೀಯ ಮಾಡಬಾರದು ಎಂದು ಸಿಸೋಡಿಯಾ ಹೇಳಿದರು.

“ದೆಹಲಿಯು ಏಪ್ರಿಲ್‌ನಲ್ಲಿ ಕೊವಿಡ್ ಎರಡನೇ ಅಲೆಯ ಉತ್ತುಂಗದಲ್ಲಿ ತೀವ್ರ ಆಮ್ಲಜನಕದ ಕೊರತೆಯನ್ನು ಎದುರಿಸಿತು. ಆಮ್ಲಜನಕದ ನಿರ್ವಹಣೆ ಕೇಂದ್ರದ ಜವಾಬ್ದಾರಿಯಾಗಿದೆ. ಅವರು ನಿಜವಾಗಿ ಕೇಜ್ರಿವಾಲ್ ಅವರನ್ನು ನಿಂದಿಸುತ್ತಿಲ್ಲ. ಕೇಂದ್ರ ಈ ವಾದಗಳ ಮೂಲಕ, ವೈದ್ಯಕೀಯ ಆಮ್ಲಜನಕದ ಕೊರತೆಯಿಂದಾಗಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿಸೊಡಿಯಾ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್​​ಪ್ರೆಸ್ ವರದಿ ಮಾಡಿದೆ.

“ರೋಗಿಗಳು, ಅವರ ಸಂಬಂಧಿಗಳು ಮತ್ತು ವೈದ್ಯರು ಸುಳ್ಳು ಹೇಳಿದ್ದಾರೆಯೇ? ಅಂತಹ ಸಾವುಗಳ ಬಗ್ಗೆ ನ್ಯಾಯಾಲಯಕ್ಕೆ ತೆರಳಿದವರ ಬಗ್ಗೆ ಏನಂತೀರಿ ಎಂದು ಸಿಸೋಡಿಯಾ ಪ್ರಶ್ನಿಸಿದ್ದಾರೆ.

ಕೊವಿಡ್ ಉತ್ತುಂಗದಲ್ಲಿದ್ದಾಗ ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಸರ್ಕಾರ ಆಮ್ಲಜನಕ ಪೂರೈಕೆಯನ್ನು ರಾಜಕೀಯಗೊಳಿಸಿದ್ದನ್ನು ನಂಬಲಾಗದು. ಇದು ಅಂತಹ ಸಣ್ಣ ರಾಜಕೀಯ. ವರದಿಯಲ್ಲಿ ಆಕ್ಸಿಜನ್ ಆಡಿಟ್ ಸಮಿತಿ ಮಂಡಿಸಿದ ಅಂಕಿ ಅಂಶಗಳು ಆಘಾತಕಾರಿ ಎಂದು ಬಿಜೆಪಿ ನಾಯಕ ಸಂಬಿತ್ ಪಾತ್ರ ಪ್ರತಿಕ್ರಿಯಿಸಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್  ಮಾಡಿದೆ.

ಇದನ್ನೂ ಓದಿ: ದೆಹಲಿ ಸರ್ಕಾರ ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ಆಮ್ಲಜನಕವನ್ನು ಕೇಳಿತ್ತು: ಸುಪ್ರೀಂಕೋರ್ಟ್ ಸಮಿತಿ

(Supreme Court’s oxygen audit committee have not signed or approved the interim report says Delhi Deputy CM Manish Sisodia )

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್