Sign In

By signing in or creating an account, you agree with Associated Broadcasting Company's Terms & Conditions and Privacy Policy.

Supriya Sule: ಶರದ್ ಪವಾರ್ ರಾಜೀನಾಮೆಗೆ ಮರುಗಿದ ಪೌರ ಕಾರ್ಮಿಕ, ವಿಶೇಷ ವ್ಯಕ್ತಿಯ ಜತೆ ಸೆಲ್ಫಿ ಕ್ಲಿಕ್ಕಿಸಿದ ಸುಪ್ರಿಯಾ ಸುಳೆ

ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಈ ನಿರ್ಧಾರ ಅನೇಕರಿಗೆ ನೋವು ತಂದಿದೆ

Supriya Sule: ಶರದ್ ಪವಾರ್ ರಾಜೀನಾಮೆಗೆ ಮರುಗಿದ ಪೌರ ಕಾರ್ಮಿಕ, ವಿಶೇಷ ವ್ಯಕ್ತಿಯ ಜತೆ ಸೆಲ್ಫಿ ಕ್ಲಿಕ್ಕಿಸಿದ ಸುಪ್ರಿಯಾ ಸುಳೆ
ಸುಪ್ರಿಯಾ ಸುಳೆ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: May 03, 2023 | 11:00 AM

ಮುಂಬೈ: ಎನ್‌ಸಿಪಿಯ (NCP) ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ (Sharad Pawar) ಹೇಳಿದ್ದಾರೆ. ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ(Nationalist Congress Party) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿರುವ ಶರದ್ ಪವಾರ್ ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಂಗಳವಾರ ಘೋಷಿಸಿದ್ದಾರೆ. ಈ ವಿಚಾರದ ನಂತರ ಎನ್​​​ಸಿಪಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ನಿನ್ನೆ ಪ್ರತಿಭಟನೆಗಳನ್ನು ನಡೆಸಿದ್ದರು. ಅನೇಕರು ಅವರ ರಾಜೀನಾಮೆ ನೋವು ತಂದಿದೆ ಎಂದು ಕಣ್ಣೀರು ಹಾಕಿದ್ದಾರೆ. ಇಂದು (ಮೇ 3) ಬೆಳಗ್ಗೆ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರಿಗೆ NCP ಪಕ್ಷದ ವಿಶೇಷ ಅಭಿಮಾನಿಯೊಬ್ಬರು ಮನವಿ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಸುಪ್ರಿಯಾ ಸುಳೆ ವಾಕಿಂಗ್​​​ ಹೋಗುವ ವೇಳೆ ಸುಪ್ರಿಯಾ ಸುಳೆ ಅವರನ್ನು ಪೌರ ಕಾರ್ಮಿಕರೊಬ್ಬರು ನಿಮ್ಮ ತಂದೆಯ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದಾರೆ.

ಈ ಮಾತುಕತೆಯನ್ನು ಸುಪ್ರಿಯಾ ಸುಳೆ ಅವರು ಫೇಸ್‌ಬುಕ್‌ನಲ್ಲಿ ಲೈವ್ ಹಂಚಿಕೊಂಡಿದ್ದಾರೆ. ಈ ವೀಡಿಯೊದಲ್ಲಿ ಪೌರ ಕಾರ್ಮಿಕ ಮರಾಠಿಯಲ್ಲಿ ಮಾತನಾಡುತ್ತಾ ತಮ್ಮ ರಾಜೀನಾಮೆಯನ್ನು ಹಿಂಪಡೆಯುವಂತೆ ಶರದ್​​ ಪವಾರ್​​ ವಿನಂತಿಸುತ್ತಿರುವುದನ್ನು ಕಾಣಬಹುದು. ಸುಪ್ರಿಯಾ ಸುಳೆ ಅವರು ಪೌರ ಕಾರ್ಮಿಕ ಅವರೊಂದಿಗೆ ಸೆಲ್ಫಿ ಕ್ಲಿಕ್ಕಿಸಿ ಮತ್ತು ನಗರದ ರಸ್ತೆಗಳನ್ನು ಸ್ವಚ್ಛಗೊಳಿಸುವ ನಿಮಗೆ ಧನ್ಯವಾದಗಳು ಎಂದು ಹೇಳಿದ್ದಾರೆ. ಸುಪ್ರಿಯಾ ಸುಳೆ ಮುಂದಿನ 15 ದಿನಗಳಲ್ಲಿ ಎರಡು ದೊಡ್ಡ ರಾಜಕೀಯ ಸ್ಫೋಟಗಳ ಸುಳಿವು ನೀಡಿದ್ದರು.

ಒಂದು ದೆಹಲಿಯಲ್ಲಿ ಮತ್ತು ಇನ್ನೊಂದು ಮಹಾರಾಷ್ಟ್ರದಲ್ಲಿ ಎಂದು ಎನ್‌ಸಿಪಿಯ ಹಿರಿಯ ಸಂಸದೆ ಸುಪ್ರಿಯಾ ಸುಳೆ ಸುದ್ದಿಗಾರರಿಗೆ ತಿಳಿಸಿದರು, 15 ದಿನಗಳಲ್ಲಿ ದೊಡ್ಡ ರಾಜಕೀಯ ಸ್ಫೋಟಗಳು ನಡೆಯಲಿದೆ ಎಂಬ ಪ್ರಕಾಶ್ ಅಂಬೇಡ್ಕರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಮಾಜಿ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಿಜೆಪಿಗೆ ಸೇರುತ್ತಾರೆ ಎನ್ನುವ ವಿಚಾರದ ನಡುವೆ ಶರದ್​ ಪವಾರ್ ಅವರ ಈ ದೊಡ್ಡ ನಡೆ ರಾಜಕೀಯದಲ್ಲಿ ದೊಡ್ಡ ಬದಲಾವಣೆಯನ್ನು ತಂದಿದೆ. ಕೇಂದ್ರ ರಕ್ಷಣಾ ಮತ್ತು ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ ಶರದ್ ಪವಾರ್ ಅವರು ದೇಶದ ಪ್ರಮುಖ ವಿರೋಧ ಪಕ್ಷದ ನಾಯಕರಲ್ಲಿ ಒಬ್ಬರು ಮತ್ತು ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರವನ್ನು ರಚಿಸಲು ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ನಡುವೆ ಆಗ ಅಸಂಭವ ಮೈತ್ರಿಯನ್ನು ಒಟ್ಟುಗೂಡಿಸುವಲ್ಲಿ ದೊಡ್ಡ ಪಾತ್ರವನ್ನು ಹೊಂದಿದ್ದರು.

ಇದನ್ನೂ ಓದಿ:Sharad Pawar: ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್​​ ರಾಜೀನಾಮೆ

1999 ರಲ್ಲಿ ಪಕ್ಷವನ್ನು ಸ್ಥಾಪಿಸಿದ ಎನ್‌ಸಿಪಿ ಮುಖ್ಯಸ್ಥ ಪವಾರ್, ತಮ್ಮ ಆತ್ಮಚರಿತ್ರೆಯ ಎರಡನೇ ಆವೃತ್ತಿ ‘ಲೋಕ್ ಮಾಜೆ ಸಂಗಟಿ’ ಬಿಡುಗಡೆ ಸಮಾರಂಭದಲ್ಲಿ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದಾರೆ. ನಾನು ನನ್ನ ರಾಜಕೀಯ ಜೀವನವನ್ನು ಮೇ 1, 1960 ರಂದು ಪ್ರಾರಂಭಿಸಿದೆ. ನಿನ್ನೆ ನಾವು ಮೇ ದಿನವನ್ನು ಆಚರಿಸಿದ್ದೇವೆ. ಈ ಸುದೀರ್ಘ ರಾಜಕೀಯ ಜೀವನದ ನಂತರ ಅದನ್ನು ಎಲ್ಲೋ ನಿಲ್ಲಿಸುವ ಬಗ್ಗೆ ಯೋಚಿಸಬೇಕು. ವ್ಯಕ್ತಿಗೆ ದುರಾಸೆ ಇರಬಾರದು ಎಂದು ಅವರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ