AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?

Maharashtra Politics: ಮೂಲಗಳ ಪ್ರಕಾರ, ಎನ್‌ಸಿಪಿ ಬೆಂಬಲಿಗರ ಭಾವನಾತ್ಮಕ ಪ್ರತಿಕ್ರಿಯೆಗಳನ್ನು ನೋಡಿದ ನಂತರ ಪವಾರ್ ಅವರು ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸಲು ಒಪ್ಪಿಕೊಂಡಿದ್ದು ಸ್ವಲ್ಪ ಸಮಯ ಕೋರಿದ್ದಾರೆ. ಆದರೆ ಅವರು ನಿರ್ಧಾರವನ್ನು ಹಿಂತೆಗೆದುಕೊಳ್ಳುವ ಸಾಧ್ಯತೆಯಿಲ್ಲ.

Supriya Sule: ಶರದ್ ಪವಾರ್ ರಾಜೀನಾಮೆ; ಸುಪ್ರಿಯಾ ಸುಳೆ ಎನ್‌ಸಿಪಿಯ ನೂತನ ಮುಖ್ಯಸ್ಥರಾಗುವ ಸಾಧ್ಯತೆ?
ಸುಪ್ರಿಯಾ ಸುಳೆ
ರಶ್ಮಿ ಕಲ್ಲಕಟ್ಟ
|

Updated on:May 03, 2023 | 5:14 PM

Share

ಸುಪ್ರಿಯಾ ಸುಳೆ (Supriya Sule)ಎನ್‌ಸಿಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗುವ ಸಾಧ್ಯತೆಯಿದೆ. ಸುಳೆ ಅವರ ತಂದೆ ಮತ್ತು ಪಕ್ಷದ ಮಾಜಿ ಮುಖ್ಯಸ್ಥ ಶರದ್ ಪವಾರ್ (Sharad Pawar) ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ ನಂತರ ಮುಂದಿನ ಮುಖ್ಯಸ್ಥರು ಯಾರಾಗುತ್ತಾರೆ ಎಂಬುದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಮಧ್ಯೆ ಸುಳೆ ಅವರೇ ಈ ಸ್ಥಾನ ತುಂಬುವ ಸಾಧ್ಯತೆ ಇದೆ ಎಂದು ಟಿವಿ9 ಭರತವರ್ಷ್ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಶರದ್ ಪವಾರ್ ಅವರ ಸೋದರಳಿಯ ಅಜಿತ್ ಪವಾರ್ ( Ajit Pawar) ಅವರು ಪಕ್ಷದ ಮಹಾರಾಷ್ಟ್ರ ಘಟಕದ ಮುಖ್ಯಸ್ಥರಾಗಿರುತ್ತಾರೆ ಎಂದು ಮೂಲಗಳು ಹೇಳಿವೆ.

ಪಕ್ಷವು ತನ್ನ ಮುಂದಿನ ದಾರಿಯನ್ನು ನಿರ್ಧರಿಸಲು ಹರಸಾಹಸ ಪಡುತ್ತಿರುವಂತೆಯೇ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಮುಂಬೈನ ವೈ ಬಿ ಚವಾಣ್ ಸೆಂಟರ್ ನಲ್ಲಿ ಸಭೆ ನಡೆಯುತ್ತಿದೆ. ಮೂಲಗಳ ಪ್ರಕಾರ, ಎನ್‌ಸಿಪಿ ಬೆಂಬಲಿಗರ ಭಾವನಾತ್ಮಕ ಪ್ರತಿಕ್ರಿಯೆಗಳನ್ನು ನೋಡಿದ ನಂತರ ಪವಾರ್ ಅವರು ತಮ್ಮ ರಾಜೀನಾಮೆಯನ್ನು ಮರುಪರಿಶೀಲಿಸಲು ಒಪ್ಪಿಕೊಂಡಿದ್ದು ಸ್ವಲ್ಪ ಸಮಯ ಕೋರಿದ್ದಾರೆ. ಆದರೆ ಅವರು ನಿರ್ಧಾರವನ್ನು ಹಿಂತೆಗೆದುಕೊಳ್ಳುವ ಸಾಧ್ಯತೆಯಿಲ್ಲ.

ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಅವರು ಎನ್‌ಸಿಪಿಯ ರಾಷ್ಟ್ರೀಯ ಅಧ್ಯಕ್ಷರಾಗಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಅಜಿತ್ ಪವಾರ್ ಪಕ್ಷದ ಮಹಾರಾಷ್ಟ್ರ ಘಟಕವನ್ನು ಮುನ್ನಡೆಸಲಿದ್ದಾರೆ.

ಸುಳೆ ಮತ್ತು ಅಜಿತ್ ಅಲ್ಲದ ಪಕ್ಷದ ಮುಖಂಡರಾದ ಹಸನ್ ಮುಶ್ರೀಫ್, ಪ್ರಫುಲ್ ಪಟೇಲ್, ಪಿಸಿ ಚಾಕೊ, ನರಿಹರ್ ಜಿಲ್ವಾಲ್, ರೋಹಿತ್ ಪವಾರ್, ಛಗನ್ ಭುಜಬಲ್ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆ.

ಇದನ್ನೂ ಓದಿ:  ಅಧ್ಯಕ್ಷ ಸ್ಥಾನ ತೊರೆಯುವುದಾಗಿ ಶರದ್ ಪವಾರ್ ನಿರ್ಧಾರ ವಿರೋಧಿಸಿ ಎನ್‌ಸಿಪಿಯ ಹಿರಿಯ ನಾಯಕ ರಾಜೀನಾಮೆ

ಸಭೆಯ ಮತ್ತೊಂದು ಪ್ರಮುಖ ಬೆಳವಣಿಗೆಯೆಂದರೆ ಜಿತೇಂದ್ರ ಅವ್ಹಾದ್ ಅವರು ತಮ್ಮ ಹಲವಾರು ಬೆಂಬಲಿಗರು ಮತ್ತು ಪಕ್ಷದ ಥಾಣೆ ವಿಭಾಗದ ಅಧಿಕಾರಿಗಳೊಂದಿಗೆ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈನಲ್ಲಿ ತಮ್ಮ ಆತ್ಮಚರಿತ್ರೆಯ ಬಿಡುಗಡೆಯ ಸಂದರ್ಭದಲ್ಲಿ ಶರದ್ ಪವಾರ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ 24 ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:08 pm, Wed, 3 May 23

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?