AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ತಂದೆಯ ಪಾದ ಮುಟ್ಟಿ ನಮಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್

CJI UU Lalit: ರಾಷ್ಟ್ರಪತಿ ದ್ರೌಪದಿ ಮುರ್ಮು ನೂತನ ಸಿಜೆಐ ಯುಯು ಲಲಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದಾದ ಬಳಿಕ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ತಮ್ಮ ತಂದೆಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು.

Viral Video: ಸಿಜೆಐ ಆಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ತಂದೆಯ ಪಾದ ಮುಟ್ಟಿ ನಮಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಯುಯು ಲಲಿತ್
ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ Image Credit source: News18
TV9 Web
| Updated By: ಸುಷ್ಮಾ ಚಕ್ರೆ|

Updated on:Aug 27, 2022 | 1:27 PM

Share

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಶನಿವಾರ ನಡೆದ ಸರಳ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್​ನ 49ನೇ​ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ (UU Lalit) ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ನೂತನ ಸಿಜೆಐ ಯುಯು ಲಲಿತ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಇದಾದ ಬಳಿಕ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ತಮ್ಮ ತಂದೆಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದರು. ಸಿಜೆಐ ಅವರ 90 ವರ್ಷದ ತಂದೆ ಉಮೇಶ್ ರಂಗನಾಥ್ ಲಲಿತ್ ಅವರು ತಮ್ಮ ತವರು ರಾಜ್ಯ ಮಹಾರಾಷ್ಟ್ರದಲ್ಲಿ ವಕೀಲರಾಗಿ ಸುದೀರ್ಘ ವೃತ್ತಿಜೀವನದ ನಂತರ ಹೈಕೋರ್ಟ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಯುಯು ಲಲಿತ್ ಅವರ ಕುಟುಂಬಸ್ಥರು ಈ ವೇಳೆ ಉಪಸ್ಥಿತರಿದ್ದರು.

ನೊಯ್ಡಾದಲ್ಲಿ ಶಾಲೆಯನ್ನು ನಡೆಸುತ್ತಿರುವ ಲಲಿತ್ ಅವರ ಪತ್ನಿ ಅಮಿತಾ ಲಲಿತ್ ಅವರ ಇಬ್ಬರು ಪುತ್ರರಾದ ಹರ್ಷದ್ ಮತ್ತು ಶ್ರೀಯಶ್ ಸಹ ಈ ವೇಳೆ ಉಪಸ್ಥಿತರಿದ್ದರು. ಯುಯು ಲಲಿತ್ ಅವರ ಅಜ್ಜ ರಂಗನಾಥ್ ಲಲಿತ್ ಭಾರತಕ್ಕೆ ಸ್ವಾತಂತ್ರ್ಯ ಬರುವ ಮುಂಚೆಯೇ ಸೊಲ್ಲಾಪುರದಲ್ಲಿ ವಕೀಲರಾಗಿದ್ದರು. ಇಂದು ನ್ಯಾಯಮೂರ್ತಿ ಯುಯು ಲಲಿತ್ ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಅವರ ಕುಟುಂಬದ 3 ತಲೆಮಾರುಗಳು ಹಾಜರಿದ್ದುದು ವಿಶೇಷವಾಗಿತ್ತು.

ಇದನ್ನೂ ಓದಿ: Breaking News: ಭಾರತದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯುಯು ಲಲಿತ್ ಪ್ರಮಾಣವಚನ ಸ್ವೀಕಾರ

ನೋಯ್ಡಾದಲ್ಲಿ ಶಾಲೆಯನ್ನು ನಡೆಸುತ್ತಿರುವ ನ್ಯಾಯಮೂರ್ತಿ ಯುಯು ಲಲಿತ್ ಅವರ ಪತ್ನಿ ಅಮಿತಾ ಲಲಿತ್ ಮತ್ತು ಅವರ ಇಬ್ಬರು ಪುತ್ರರಾದ ಹರ್ಷದ್ ಮತ್ತು ಶ್ರೀಯಶ್ ಸಹ ಇಂದು ಉಪಸ್ಥಿತರಿದ್ದರು. ಪುತ್ರರಿಬ್ಬರೂ ಇಂಜಿನಿಯರಿಂಗ್ ಓದಿದ್ದರೆ, ಶ್ರೀಯಶ್ ಲಲಿತ್ ಇಂಜಿನಿಯರಿಂಗ್ ನಂತರ ಕಾನೂನು ಅಧ್ಯಯನದತ್ತ ಮುಖ ಮಾಡಿದರು. ಅವರ ಪತ್ನಿ ರವೀನಾ ಕೂಡ ವಕೀಲೆ. ಹರ್ಷದ್ ಲಲಿತ್ ಅವರು ಸಂಶೋಧಕರಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಪತ್ನಿ ರಾಧಿಕಾ ಜೊತೆ ಅವರು ಅಮೇರಿಕಾದಲ್ಲಿ ವಾಸಿಸುತ್ತಿದ್ದಾರೆ.

2ಜಿ ಸ್ಪೆಕ್ಟ್ರಮ್ ಹಂಚಿಕೆ ಪ್ರಕರಣ ನ್ಯಾಯಮೂರ್ತಿ ಯುಯು ಲಲಿತ್ ನಿಭಾಯಿಸಿದ ಪ್ರಮುಖ ಪ್ರಕರಣಗಳಲ್ಲಿ ಒಂದಾಗಿದೆ. ಆಗಸ್ಟ್ 2014ರಲ್ಲಿ ಅವರನ್ನು ನೇರವಾಗಿ ವಕೀಲ ಸ್ಥಾನದಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನಾಗಿ ಮಾಡಲಾಯಿತು. ಈ ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಉಪಸ್ಥಿತರಿದ್ದರು. ಹಾಗೇ, ನಿನ್ನೆಯಷ್ಟೇ ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾದ ನ್ಯಾಯಮೂರ್ತಿ ಎನ್ ವಿ ರಮಣ ಕೂಡ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಿಜೆಐ ಎನ್​ವಿ ರಮಣ ನಿವೃತ್ತಿ ಹಿನ್ನೆಲೆ; ಸುಪ್ರೀಂ ಕೋರ್ಟ್​ ಇತಿಹಾಸದಲ್ಲೇ ಮೊದಲ ಬಾರಿಗೆ ಕಲಾಪದ ನೇರ ಪ್ರಸಾರ

ನಿರ್ಗಮಿತ ಸಿಜೆಐ ಎನ್‌ವಿ ರಮಣ ಅವರಿಗೆ ಬೀಳ್ಕೊಡಲು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ) ಒಂದು ದಿನದ ಹಿಂದೆ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ನ್ಯಾಯಮೂರ್ತಿ ಲಲಿತ್, ಸ್ಪಷ್ಟತೆ ಮತ್ತು ಸಾಧ್ಯವಾದಷ್ಟು ಉತ್ತಮವಾದ ಕಾನೂನನ್ನು ರೂಪಿಸುವುದು ಉನ್ನತ ನ್ಯಾಯಾಲಯದ ಮುಖ್ಯ ಪಾತ್ರ ಎಂದು ನಾನು ಯಾವಾಗಲೂ ನಂಬುತ್ತೇನೆ ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:23 pm, Sat, 27 August 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?