Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಉಪನಾಮ ಟೀಕೆ, ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು ಪ್ರಕಟ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮಾಡಿರುವ ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್  ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಹುಲ್ ಗಾಂಧಿ ದೋಷಿ ಎಂದು ತೀರ್ಪು  ಪ್ರಕಟಿಸಿದೆ.

ಮೋದಿ ಉಪನಾಮ ಟೀಕೆ, ರಾಹುಲ್ ಗಾಂಧಿ ದೋಷಿ ಎಂದು ಸೂರತ್ ನ್ಯಾಯಾಲಯದಿಂದ ಮಹತ್ವದ ತೀರ್ಪು ಪ್ರಕಟ
ರಾಹುಲ್ ಗಾಂಧಿ
Follow us
ನಯನಾ ರಾಜೀವ್
|

Updated on:Mar 23, 2023 | 11:50 AM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಮಾಡಿರುವ ಮೋದಿ ಉಪನಾಮ ಟೀಕೆಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್  ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್​ನ ಸೂರತ್ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ರಾಹುಲ್ ಗಾಂಧಿ ದೋಷಿ ಎಂದು ತೀರ್ಪು  ಪ್ರಕಟಿಸಿದೆ.

ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ಉಪನಾಮವನ್ನಾಗಿ ಮಾಡಿಕೊಂಡಿರುವುದು ಹೇಗೆ?ಎಂಬ ಟೀಕೆಗಳ ಮೇಲೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಶಾಸಕ ಮತ್ತು ಗುಜರಾತ್‌ನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ನೀಡಿದ ದೂರು ನೀಡಿದ್ದರು.

ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದ ಸೂರತ್ ನ್ಯಾಯಾಲಯ ಇದೀಗ 30 ದಿನಗಳಿಗೆ ಜಾಮೀನು ಮಂಜೂರು ಮಾಡಿದೆ.

ರಾಹುಲ್‌ ಅವರು ಕೋಲಾರದಲ್ಲಿ ನಡೆದಿದ್ದ ರ‍್ಯಾಲಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ಆದರು.  ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ನಿಂದಿಸಿದ್ದಾರೆ’ ಎಂದು ಅರ್ಜಿದಾರರ ಪರ ವಕೀಲರು ನ್ಯಾಯಪೀಠಕ್ಕೆ ಹೇಳಿದ್ದಾರೆ.

ರಾಹುಲ್ ವಿರುದ್ಧ  ಮಾನನಷ್ಟ ಪ್ರಕರಣ ದಾಖಲಿಸಲಾಗಿತ್ತು. ನ್ಯಾಯಾಲಯವು ಕಳೆದ ವಾರ ಎರಡೂ ಕಡೆಯ ಅಂತಿಮ ವಾದಗಳನ್ನು ಆಲಿಸಿದೆ ಮತ್ತು ನಾಲ್ಕು ವರ್ಷಗಳ ಹಿಂದಿನ ಮಾನನಷ್ಟ ಮೊಕದ್ದಮೆಯ ತೀರ್ಪುನ್ನು ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎಚ್‌ಎಚ್ ವರ್ಮಾ ಆಲಿಸಿದ್ದಾರೆ.

ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 499 ಮತ್ತು 500 (ಮಾನನಷ್ಟ ವ್ಯವಹರಿಸುವುದು) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರಾಹುಲ್ ಗಾಂಧಿಯ ಅವರು ಕೊನೆಯದಾಗಿ 2021ರ ಅಕ್ಟೋಬರ್‌ನಲ್ಲಿ ತಮ್ಮ ಹೇಳಿಕೆಯನ್ನು ದಾಖಲಿಸಲು ಸೂರತ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ರಾಹುಲ್‌ ಅವರು ತಮ್ಮ ಹೇಳಿಕೆ ಮೂಲಕ ಮೋದಿ ಉಪನಾಮ ಹೊಂದಿರುವವರನ್ನೆಲ್ಲಾ ಹೀಯಾಳಿಸಿದ್ದಾರೆ ಎಂದು ಆರೋಪಿಸಿದ್ದ ಗುಜರಾತ್‌ನ ಬಿಜೆಪಿ ಶಾಸಕ ಪೂರ್ಣೇಶ್‌ ಮೋದಿ ಅವರು ಕಾಂಗ್ರೆಸ್‌ ಸಂಸದನ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

2019ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ರಾಹುಲ್‌, ಕಳ್ಳರೆಲ್ಲರಿಗೂ ಸಾಮಾನ್ಯವಾಗಿ ಮೋದಿ ಎಂಬ ಉಪನಾಮವೇ ಏಕಿರುತ್ತದೆ ಎಂದು ಪ್ರಶ್ನಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:10 am, Thu, 23 March 23

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !