AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ ಆರಂಭಿಸಿದ್ದರು. ಆದರೆ, ಮನೆಯೊಳಗೆ ಸಿಕ್ಕ ಒಂದು ಸಣ್ಣ ಸುಳಿವು ಇಡೀ ಪ್ರಕರಣದ ದಿಕ್ಕನ್ನೇ ಬದಲಿಸಿತು.

ಪತ್ನಿಯ ಕೊಂದು ಶವದ ಮೇಲೆ ಸಿಮೆಂಟ್ ಸುರಿದು, ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟ ಪತಿ
ಮಹಿಳೆ Image Credit source: India Today
ನಯನಾ ರಾಜೀವ್
|

Updated on: Apr 27, 2026 | 1:53 PM

Share

ಸೂರತ್, ಏಪ್ರಿಲ್ 27: ಪತ್ನಿಯ ಕೊಲೆ(Murder) ಮಾಡಿ ಶವದ ಮೇಲೆ ಸಿಮೆಂಟ್ ಸುರಿದು ಮರದ ಪೆಟ್ಟಿಗೆಯಲ್ಲಿ ಬಚ್ಚಿಟ್ಟು, ಪತ್ನಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಹಾರ ತಜ್ಞೆ ಶಿಲ್ಪಾ ಸಾಲ್ವಿ (39) ಅವರ ಕೊಳೆತ ಶವವು ಪಾಳುಬಿದ್ದ ಮನೆಯೊಂದರಲ್ಲಿ ಪತ್ತೆಯಾಗಿದೆ. ಆರೋಪಿ ವಿಶಾಲ್ ಸಾಲ್ವಿ (40), ನಾಲ್ಕು ದಿನಗಳ ಹಿಂದೆ ತನ್ನ ಪತ್ನಿ ಶಿಲ್ಪಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಮೊದಲಿಗೆ ಇದನ್ನು ಸಾಮಾನ್ಯ ನಾಪತ್ತೆ ಪ್ರಕರಣವೆಂದು ಭಾವಿಸಿ ತನಿಖೆ ಆರಂಭಿಸಿದ್ದರು. ಆದರೆ, ಮನೆಯೊಳಗೆ ಸಿಕ್ಕ ಒಂದು ಸಣ್ಣ ಸುಳಿವು ಇಡೀ ಪ್ರಕರಣದ ದಿಕ್ಕನ್ನೇ ಬದಲಿಸಿತು.

ವಿಶಾಲ್ ಮತ್ತು ಶಿಲ್ಪಾ ಅವರ ಮಗನಿಗೆ ಮನೆಯಲ್ಲಿ ತನ್ನ ತಂದೆ ಬರೆದಿದ್ದ ಕೈಬರಹದ ಟಿಪ್ಪಣಿಯೊಂದು ಸಿಕ್ಕಿತ್ತು. ಅದರಲ್ಲಿ ವಿಶಾಲ್, ನಾನು ದೊಡ್ಡ ತಪ್ಪು ಮಾಡಿದ್ದೇನೆ, ಶಿಲ್ಪಾ ಇನ್ನು ಬದುಕಿಲ್ಲ ಎಂದು ಬರೆದುಕೊಂಡಿದ್ದ. ಮಗ ಈ ಪತ್ರವನ್ನು ಪೊಲೀಸರಿಗೆ ಹಸ್ತಾಂತರಿಸಿದ ತಕ್ಷಣವೇ ವಿಶಾಲ್ ಮೇಲಿನ ಅನುಮಾನ ಬಲವಾಯಿತು.

ಪೊಲೀಸರು ತನಿಖೆ ನಡೆಸಿದಾಗ ಸೂರತ್‌ನ ಸಲಬತ್‌ಪುರದಲ್ಲಿರುವ ವಿಶಾಲ್‌ನ ಹಳೆಯ ಪಾಳುಬಿದ್ದ ಮನೆಯ ಬಗ್ಗೆ ಮಾಹಿತಿ ಸಿಕ್ಕಿತು. ಆ ಮನೆಯ ಬೀಗ ಮುರಿದು ಒಳಹೋದಾಗ ಕೊಳೆಯುತ್ತಿರುವ ವಾಸನೆ ಬಂದಿದೆ. ಅಲ್ಲಿನ ಮೂಲೆಯಲ್ಲಿದ್ದ ಮರದ ಪೆಟ್ಟಿಗೆಯನ್ನು ತಪಾಸಣೆ ಮಾಡಿದಾಗ, ಶಿಲ್ಪಾ ಅವರ ಶವ ಪತ್ತೆಯಾಯಿತು. ಸಾಕ್ಷ್ಯ ನಾಶಪಡಿಸಲು ವಿಶಾಲ್ ಶವದ ಮೇಲೆ ಕಚ್ಚಾ ಸಿಮೆಂಟ್ ಸುರಿದು ಅದನ್ನು ಪೆಟ್ಟಿಗೆಯೊಳಗೆ ಭದ್ರಪಡಿಸಿದ್ದ.

ಮತ್ತಷ್ಟು ಓದಿ: ಸಿನಿಮಾ ಸ್ಟೈಲ್​​ ಕೊಲೆ ಕೇಸ್​ ಭೇದಿಸಿದ ಖಾಕಿ: ಆಸ್ತಿ ವಿವಾದಕ್ಕೆ ನಡೆದಿದ್ದು ಡೆಡ್ಲಿ ಮರ್ಡರ್​!

ಪ್ರಾಥಮಿಕ ತನಿಖೆಯ ಪ್ರಕಾರ, ದಂಪತಿಗಳ ನಡುವೆ ದೀರ್ಘಕಾಲದ ವೈವಾಹಿಕ ಕಲಹವಿತ್ತು. ತನ್ನ ಪತ್ನಿ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ವಿಶಾಲ್ ಅನುಮಾನಿಸುತ್ತಿದ್ದ. ಇದೇ ದ್ವೇಷದಿಂದ ಆಕೆಯನ್ನು ಹತ್ಯೆ ಮಾಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರಸ್ತುತ ವಿಶಾಲ್ ತಲೆಮರೆಸಿಕೊಂಡಿದ್ದು, ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಪೊಲೀಸರು ಆತನ ಬೆನ್ನು ಬಿದ್ದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
ಗಿನ್ನಿಸ್ ದಾಖಲೆ ಪುಟ ಸೇರಲಿದೆಯಾ ಕಾಂಗ್ರೆಸ್​​ ಸಾಧನಾ ಸಮಾವೇಶ?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
33ನೇ ವಯಸ್ಸಿಗೆ ದುರಂತ ಅಂತ್ಯ ಕಂಡ ಟ್ವಿಶಾ ಶರ್ಮಾ ಜೀವನ; ಸಾವಿಗೆ ಕಾರಣ ಏನು?
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ಯೂತ್ ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಮಾರಾಮಾರಿ; ಬಿಂದುಗೌಡ ಹೇಳಿದ್ದಿಷ್ಟು
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೆ ಗುಡ್​ ನ್ಯೂಸ್: ಜೂನ್ ಮೊದಲ ವಾರದಲ್ಲೇ ಮುಂಗಾರು ಮಳೆ
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ರೈತರಿಗೂ ತಟ್ಟಿದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಿಸಿ!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಉದ್ಯಮಿಗೆ ಬೆದರಿಕೆ ಹಾಕಿ 10 ಲಕ್ಷ ರೂ. ಹಫ್ತಾಗೆ ಬೇಡಿಕೆ ಇಟ್ಟ ಲೇಡಿ ಡಾನ್!
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕೆಪಿಸಿಸಿ ಕಚೇರಿಯಲ್ಲಿಯೇ ಯೂತ್​​ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಕಲಬುರ್ಗಿಯಲ್ಲಿ ಮೃಗಾಲಯ ಉದ್ಘಾಟಿಸಿದ ಸಚಿವ ಖಂಡ್ರೆ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಬರದಲ್ಲೂ ಬತ್ತಿಲ್ಲ ಈ ದೇಗುಲದ ಕೆರೆ: ಬಾದಾಮಿಯಲ್ಲೊಂದು ಅಚ್ಚರಿ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!
ಯಾದಗಿರಿ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ!