ಮೋದಿ ಉಪನಾಮ; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ನಾಯಕನಿಗೆ ಪ್ರಮುಖ ಹುದ್ದೆ

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ(Rahul Gandhi) ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿ (Purnesh Modi) ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯುನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೋದಿ ಉಪನಾಮ; ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಿಜೆಪಿ ನಾಯಕನಿಗೆ ಪ್ರಮುಖ ಹುದ್ದೆ
ಪೂರ್ಣೇಶ್ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Nov 18, 2023 | 10:19 AM

ದೆಹಲಿ, ನ.18: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ(Rahul Gandhi) ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿ (Purnesh Modi) ಅವರನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯುನಲ್ಲಿ ಪಕ್ಷದ ರಾಜಕೀಯ ವ್ಯವಹಾರಗಳ ಉಸ್ತುವಾರಿಯಾಗಿ ಶುಕ್ರವಾರ ನೇಮಿಸಲಾಗಿದೆ. ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದ ರಾಹುಲ್​​​​ ಗಾಂಧಿ ವಿರುದ್ಧ ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​​​ ನ್ಯಾಯಾಲಯವು ಮಾರ್ಚ್‌ನಲ್ಲಿ ರಾಹುಲ್​​​ ಗಾಂಧಿ ಅವರು ದೋಷಿ ಎಂದು ಹೇಳಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ಇದನ್ನೂ ಓದಿ:ಮೋದಿ ಉಪನಾಮ ಪ್ರಕರಣ: ರಾಹುಲ್ ಗಾಂಧಿ ದುರಹಂಕಾರಿ, ಒಂದು ಚೂರು ಪಶ್ಚಾತಾಪವಿಲ್ಲ: ಪೂರ್ಣೇಶ್ ಮೋದಿ

ನಂತರ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್​​​ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಈ ವಿಚಾರವಾಗಿ ರಾಹುಲ್​​​ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಆಗಸ್ಟ್​​ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಅವರ ಶಿಕ್ಷೆಯನ್ನು ತಡೆಹಿಡಿಯಿತು. ನಂತರ ಮತ್ತೆ ಲೋಕಸಭಾ ಸದಸ್ಯತ್ವವನ್ನು ಅವರಿಗೆ ನೀಡಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ