ಉತ್ತರ ಪ್ರದೇಶ: ಅಧಿಕಾರಿಗಳಿಂದ ರಾತ್ರೋರಾತ್ರಿ ಶಾಲೆಯ ಹಾಸ್ಟೆಲ್​ ತಪಾಸಣೆ, 89 ವಿದ್ಯಾರ್ಥಿನಿಯರು ಇರಲೇ ಇಲ್ಲ

ಉತ್ತರ ಪ್ರದೇಶದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಅಧಿಕಾರಿಗಳು ರಾತ್ರೋ ರಾತ್ರಿ ತಪಾಸಣೆ ನಡೆಸಿದ್ದು, 89 ಬಾಲಕಿಯರು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಲ್ಲಿ ದಾಖಲಾಗಿದ್ದ ಒಟ್ಟು 100 ವಿದ್ಯಾರ್ಥಿನಿಯರ ಪೈಕಿ 11 ಮಂದಿ ಮಾತ್ರ ರಾತ್ರಿ ಹಠಾತ್ ತಪಾಸಣೆ ವೇಳೆ ಆವರಣದಲ್ಲಿ ಹಾಜರಿದ್ದುದು ಕಂಡುಬಂತು

ಉತ್ತರ ಪ್ರದೇಶ: ಅಧಿಕಾರಿಗಳಿಂದ ರಾತ್ರೋರಾತ್ರಿ ಶಾಲೆಯ ಹಾಸ್ಟೆಲ್​ ತಪಾಸಣೆ, 89 ವಿದ್ಯಾರ್ಥಿನಿಯರು ಇರಲೇ ಇಲ್ಲ
ಹಾಸ್ಟೆಲ್Image Credit source: NDTV
Follow us
ನಯನಾ ರಾಜೀವ್
|

Updated on: Aug 23, 2023 | 8:10 AM

ಉತ್ತರ ಪ್ರದೇಶದ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ಅಧಿಕಾರಿಗಳು ರಾತ್ರೋ ರಾತ್ರಿ ತಪಾಸಣೆ ನಡೆಸಿದ್ದು, 89 ಬಾಲಕಿಯರು ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ರಾಜ್ಯ ಸರ್ಕಾರ ನಡೆಸುತ್ತಿರುವ ವಸತಿ ಶಾಲೆಯೊಂದರ ವಾರ್ಡನ್ ಸೇರಿದಂತೆ ನಾಲ್ವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಅಲ್ಲಿ ದಾಖಲಾಗಿದ್ದ ಒಟ್ಟು 100 ವಿದ್ಯಾರ್ಥಿನಿಯರ ಪೈಕಿ 11 ಮಂದಿ ಮಾತ್ರ ರಾತ್ರಿ ಹಠಾತ್ ತಪಾಸಣೆ ವೇಳೆ ಆವರಣದಲ್ಲಿ ಹಾಜರಿದ್ದುದು ಕಂಡುಬಂತು. ಪರಸ್ಪುರದ ಕಸ್ತೂರಬಾ ಗಾಂಧಿ ವಸತಿ ಬಾಲಕಿಯರ ಶಾಲೆಯಲ್ಲಿ ಸೋಮವಾರ ರಾತ್ರಿ ತಪಾಸಣೆ ನಡೆಸಲಾಯಿತು ಎಂದು ಜಿಲ್ಲಾಧಿಕಾರಿ ನೇಹಾ ಶರ್ಮಾ ತಿಳಿಸಿದ್ದಾರೆ.

ಅಲ್ಲಿ ಒಟ್ಟು 100 ವಿದ್ಯಾರ್ಥಿನಿಯರು ನೋಂದಾಯಿಸಿಕೊಂಡಿದ್ದಾರೆ, ಆದರೆ 11 ವಿದ್ಯಾರ್ಥಿನಿಯರು ಮಾತ್ರ ಶಾಲೆಯಲ್ಲಿ ಹಾಜರಿರುವುದು ಕಂಡುಬಂದಿದೆ. 89 ವಿದ್ಯಾರ್ಥಿನಿಯರ ಗೈರುಹಾಜರಿಯ ಬಗ್ಗೆ ವಾರ್ಡನ್ ಸರಿತಾ ಸಿಂಗ್ ಅವರನ್ನು ಕೇಳಿದಾಗ ತೃಪ್ತಿಕರ ಉತ್ತರವನ್ನು ನೀಡಲು ಸಾಧ್ಯವಾಗಲಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

ಮತ್ತಷ್ಟು ಓದಿ: ಕಾರವಾರ: ಅಧಿಕಾರ ಸ್ವೀಕರಿಸಲು ಆಗಮಿಸಿದ ಪ್ರಾಂಶುಪಾಲರ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ; ಬಾಗಿಲು ಮುರಿದು ದಾಂಧಲೆ

ಈಗ ಆ 89 ವಿದ್ಯಾರ್ಥಿನಿಯರು ಎಲ್ಲಿದ್ದಾರೆ ಎನ್ನುವ ಮಾಹಿತಿಯನ್ನು ಕಲೆ ಹಾಕಬೇಕಿದೆ. ಇದು ಗಂಭೀರ ನಿರ್ಲಕ್ಷ್ಯ, ವಸತಿ ಬಾಲಕಿಯರ ಶಾಲೆಗಳನ್ನು ಈ ರೀತಿ ನಡೆಸುವಂತಿಲ್ಲ ಎಂದು ಜಿಲ್ಲಾಧಿಕಾರಿ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಶಾಲಾ ವಾರ್ಡನ್, ಪೂರ್ಣಾವಧಿ ಶಿಕ್ಷಕ, ಕಾವಲುಗಾರ ಮತ್ತು ಪ್ರಾಂತೀಯ ರಕ್ಷಣಾ ದಳದ (ಪಿಆರ್‌ಡಿ) ಜವಾನನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಪ್ರೇಮ್ ಚಂದ್ ಯಾದವ್ ತಿಳಿಸಿದ್ದಾರೆ.

ಇದರೊಂದಿಗೆ ನೌಕರರ ವಿರುದ್ಧವೂ ಇಲಾಖಾ ಕ್ರಮ ಕೈಗೊಳ್ಳಲಾಗುತ್ತಿದ್ದು, ಕರ್ತವ್ಯದಲ್ಲಿರುವ ಸಿಬ್ಬಂದಿ ವಿರುದ್ಧ ಇಲಾಖಾ ಕ್ರಮಕ್ಕಾಗಿ ಜಿಲ್ಲಾ ಯುವ ಕಲ್ಯಾಣಾಧಿಕಾರಿಗೆ ಪ್ರತ್ಯೇಕ ಪತ್ರ ಬರೆಯಲಾಗಿದೆ ಎಂದು ಬಿಎಸ್‌ಎ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್