Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ

ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ಈ ವರ್ಷದ ಕೊನೆಯ ಸೂರ್ಯಗ್ರಹಣವು ಎಲ್ಲೆಲ್ಲಿ ಗೋಚರಿಸಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Solar Eclipse 2020: ನಾಳೆ ನಡೆಯಲಿದೆ ವರ್ಷದ ಕೊನೆಯ ಸೂರ್ಯಗ್ರಹಣ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 07, 2022 | 10:46 AM

ಈ ವರ್ಷದ ಕೊನೆಯ ಸೂರ್ಯಗ್ರಹಣವು ನಾಳೆ (ಡಿ.14) ನಡೆಯಲಿದೆ. ಸೂರ್ಯ ಮತ್ತು ಭೂಮಿಯ ನಡುವೆ ಚಂದ್ರ ಹಾದುಹೋಗುವುದರಿಂದ ಈ ಗ್ರಹಣ ಸಂಭವಿಸಲಿದೆ. ವಿಶ್ವದ ಕೆಲವು ಭಾಗಗಗಳಲ್ಲಿ ಕಾಣಲಿರುವ ಭಾಗಶಃ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲ.

ಗ್ರಹಣವು ನಾಳೆ 7.30 PM ನಿಂದ 12.23 AM ವರೆಗೆ ಸಂಭವಿಸಲಿದೆ. ಸೂರ್ಯಗ್ರಹಣ ನಡೆಯುವ ಸಮಯಕ್ಕೆ ಭಾರತದಲ್ಲಿ ಸೂರ್ಯಾಸ್ತವಾಗಿರಲಿದೆ. ಈ ಕಾರಣದಿಂದಾಗಿ ಭಾರತಕ್ಕೆ ಗ್ರಹಣದ ದರ್ಶನ ಆಗುವುದಿಲ್ಲ. ಈ ವರ್ಷದ ಕೊನೆಯ ಸೂರ್ಯಗ್ರಹಣವು ದಕ್ಷಿಣ ಅಮೆರಿಕಾ ದೇಶಗಳಲ್ಲಿ ಮತ್ತು ನೈರುತ್ಯ ಆಫ್ರಿಕಾ ಭಾಗದಲ್ಲಿ ಕಾಣಿಸಿಕೊಳ್ಳಲಿದೆ.

ಚಿಲಿ ದೇಶದ ಸ್ಯಾಂಟಿಯಾಗೊ, ಬ್ರೆಜಿಲ್​ನ ಸಾವೊ ಪೌಲೊ, ಅರ್ಜೆಂಟೀನಾದ ಬ್ಯುನೊಸ್ ಏರಿಸ್, ಪೆರುವಿನ ಲಿಮಾ ಮುಂತಾದೆಡೆಗಳಲ್ಲಿ ಗ್ರಹಣವು ಸರಿಯಾಗಿ ಕಾಣಿಸಿಕೊಳ್ಳಲಿದೆ. ವಿದೇಶದಲ್ಲಿ ಗೋಚರವಾಗಲಿರುವ ಗ್ರಹಣವನ್ನು ಬರಿಗಣ್ಣಿನಿಂದ ವೀಕ್ಷಿಸದಂತೆ ಸೂಚನೆ ನೀಡಲಾಗಿದೆ. ಈ ವರ್ಷದ ಮೊದಲ ಮತ್ತು ದೊಡ್ಡ ಸೂರ್ಯಗ್ರಹಣವು ಜೂನ್ 21ರ ಭಾನುವಾರ ಗೋಚರವಾಗಿತ್ತು. ನಾಳೆ ನಡೆಯಲಿರುವ ಗ್ರಹಣವು ವರ್ಷದ ಕೊನೆಯ ಸೂರ್ಯಗ್ರಹ ಆಗಿರಲಿದೆ.

Published On - 11:05 am, Sun, 13 December 20

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ