ಕಾರಿನ ಕಿಟಕಿಯಿಂದ ತಲೆ ಹೊರಗೆ ಹಾಕಿ ಮದುವೆ ನೋಡುತ್ತಿದ್ದ ಬಾಲಕಿ, ನಿರ್ಲಕ್ಷ್ಯದಿಂದ ಡೋರ್ ಹಾಕಿದ ಚಾಲಕ, ಉಸಿರುಗಟ್ಟಿ ಮಗು ಸಾವು

ಇದರಿಂದ ಅಲ್ಲಿಯವರೆಗೂ ಸುಗಮವಾಗಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ದಿಢೀರನೆ ಬೇಸರದ ಛಾಯೆ ಆವರಿಸಿದೆ. ಮಗುವಿನ ತಂದೆ ವೆಂಕಟೇಶ್ವರಲು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರು ಚಾಲಕ ಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಾರಿನ ಕಿಟಕಿಯಿಂದ ತಲೆ ಹೊರಗೆ ಹಾಕಿ ಮದುವೆ ನೋಡುತ್ತಿದ್ದ ಬಾಲಕಿ, ನಿರ್ಲಕ್ಷ್ಯದಿಂದ ಡೋರ್ ಹಾಕಿದ ಚಾಲಕ, ಉಸಿರುಗಟ್ಟಿ ಮಗು ಸಾವು
ಕಾರಿನ ಕಿಟಕಿಯಿಂದ ತಲೆ ಹೊರಗೆ ಹಾಕಿದ್ದ ಬಾಲಕಿ ಸಾವು
Follow us
TV9 Web
| Updated By: ಸಾಧು ಶ್ರೀನಾಥ್​

Updated on: May 23, 2023 | 1:17 PM

ಸಂಬಂಧಿಕರ ಮನೆಯಲ್ಲಿ ನಡೆಯುತ್ತಿದ್ದ ಮದುವೆ ಸಂಭ್ರಮದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಬಾಲಕಿ ಸಾವನ್ನಪ್ಪಿದೆ. ಕಾರು ಚಾಲಕನ ನಿರ್ಲಕ್ಷ್ಯದಿಂದ ಮದುವೆ ಮನೆಯಲ್ಲಿ ದುರಂತದ ಛಾಯೆ (Wedding Tragedy) ಆವರಿಸಿದೆ. ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭಾನುವಾರ (ಮೇ 21) ಈ ದಾರುಣ ಘಟನೆ ನಡೆದಿದೆ. ವಿವರಗಳನ್ನು ನೋಡುವುದಾದರೆ…

ಸೂರ್ಯಪೇಟ ಜಿಲ್ಲೆಯ ಅನಂತಗಿರಿ ಮಂಡಲದ ಬೊಜ್ಜಗುಡೆಂ ಗ್ರಾಮದಲ್ಲಿ ಭಾನುವಾರ ರಾತ್ರಿ ಮದುವೆ ಸಮಾರಂಭ ನಡೆಯುತ್ತಿತ್ತು. ವರ ಹಾಗೂ ವಧುವಿನ ನೃತ್ಯ ಕಾರ್ಯಕ್ರಮ ನಡೆಯುತ್ತಿತ್ತು. ಬಾನೋಟು ಇಂದ್ರಜಾ (9) ಎಂಬ ಮಗು ಕಾರಿನ ಹಿಂದಿನ ಸೀಟಿನಲ್ಲಿ ಒಂಟಿಯಾಗಿ ಕುಳಿತು ಕಿಟಕಿಯಿಂದ ತಲೆ ಹಾಕಿಕೊಂಡು ನೃತ್ಯಗಳನ್ನು ವೀಕ್ಷಿಸುತ್ತಿತ್ತು. ಆದರೆ ಅದೇ ವೇಳೆ ಮಗುವನ್ನು ಗಮನಿಸದ ಕಾರು ಚಾಲಕ ಎಲ್ಲಿಂದಲೋ ಡೋರ್ ಮಿರರ್ ಬಟನ್ ಒತ್ತಿದ್ದಾನೆ. ಇದರಿಂದ ಕಾರಿನ ಕಿಟಕಿಯಲ್ಲಿ ಮಗುವಿನ ಕುತ್ತಿಗೆ ಸಿಲುಕಿಕೊಂಡಿದೆ. ಯಾರೂ ಗಮನಿಸದ ಕಾರಣ ಮಗು ಉಸಿರುಗಟ್ಟಿ ಸಾವನ್ನಪ್ಪಿದೆ.

read more: Telangana Assembly Elections: ಡಿಸೆಂಬರ್​​ನಲ್ಲಿ ಅಸೆಂಬ್ಲಿ ಚುನಾವಣೆ -ತೆಲಂಗಾಣದಲ್ಲಿ ಬಿಜೆಪಿ ತಯಾರಿ ಹೀಗಿದೆ ನೋಡಿ

ಇದರಿಂದ ಅಲ್ಲಿಯವರೆಗೂ ಸುಗಮವಾಗಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ದಿಢೀರನೆ ಬೇಸರದ ಛಾಯೆ ಆವರಿಸಿದೆ. ಮಗುವಿನ ತಂದೆ ವೆಂಕಟೇಶ್ವರಲು ನೀಡಿದ ದೂರಿನ ಮೇರೆಗೆ ಪೊಲೀಸರು ಕಾರು ಚಾಲಕ ಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣದ ಸಮಗ್ರ ತನಿಖೆ ನಡೆಸಿ, ಮಾಹಿತಿ ನೀಡುವುದಾಗಿ ಪೊಲೀಸರು ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ