AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವು ಪ್ರಕರಣ: ಸಿಬಿಐ ಎಫ್​ಐಆರ್​ನಲ್ಲಿ ಆದಿತ್ಯ ಠಾಕ್ರೆ, ದಿನೋ ಮೊರಿಯಾ ಹೆಸರು

ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಅನುಮಾನಾಸ್ಪದ ಸಾವು ಪ್ರಕರಣದಲ್ಲಿ ಹೊಸ ಬೆಳವಣಿಗೆಯಾಗಿದೆ. ಬಾಂಬೆ ಹೈಕೋರ್ಟ್ ನೀಡಿದ ನಿರ್ದೇಶನದ ಮೇರೆಗೆ ಕೇಂದ್ರ ತನಿಖಾ ದಳ (CBI) ಹೊಸದಾಗಿ ಎಫ್‌ಐಆರ್ (FIR) ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಮುಂಬೈ ಪೊಲೀಸರು ನಡೆಸಿದ ತನಿಖೆಯಲ್ಲಿ ವೈಫಲ್ಯ ಕಂಡುಬಂದ ಹಿನ್ನೆಲೆಯಲ್ಲಿ ಸಿಬಿಐಗೆ ಇದರ ಜವಾಬ್ದಾರಿ ವಹಿಸಲಾಗಿದೆ.

ಸುಶಾಂತ್ ಮ್ಯಾನೇಜರ್ ದಿಶಾ ಸಾಲಿಯಾನ್ ಸಾವು ಪ್ರಕರಣ: ಸಿಬಿಐ ಎಫ್​ಐಆರ್​ನಲ್ಲಿ ಆದಿತ್ಯ ಠಾಕ್ರೆ, ದಿನೋ ಮೊರಿಯಾ ಹೆಸರು
ಆದಿತ್ಯ ಠಾಕ್ರೆImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Sep 14, 2026 | 6:11 PM

Share

ಮುಂಬೈ, ಸೆಪ್ಟೆಂಬರ್ 14: ಆರು ವರ್ಷದ ಹಿಂದೆ ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ಅವರ ಮ್ಯಾನೇಜರ್ ಆಗಿದ್ದ 28 ವರ್ಷದ ದಿಶಾ ಸಾಲಿಯಾನ್ ಅವರು ಆರು ವರ್ಷದ ಹಿಂದೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿಕೊಂಡಿದೆ. ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ ತನಿಖೆ ವಹಿಸಿಕೊಂಡಿರುವ ಸಿಬಿಐ ಹೊಸದಾಗಿ ಎಫ್​ಐಆರ್ ದಾಖಲಿಸಿ ತನಿಖೆ ಮುಂದುವರಿಸುತ್ತಿದೆ. 28 ವರ್ಷದ ದಿಶಾ ಸಾಲಿಯಾನ್ ಅವರು 2020ರ ಜೂನ್ 8ರಂದು ಮುಂಬೈನ ಮಲಾಡ್​ನಲ್ಲಿರುವ ಕಟ್ಟಡವೊಂದರಿಂದ ಬಿದ್ದು ಮೃತಪಟ್ಟಿದ್ದರು. ಪ್ರಕರಣವನ್ನು ಮುಂಬೈ ಪೊಲೀಸರು ಕೇವಲ ‘ಆಕಸ್ಮಿಕ ಸಾವು ವರದಿ’ (ADR) ಎಂದು ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

ಆದರೆ, ಮುಂಬೈ ಪೊಲೀಸರು ನಡೆಸಿದ ತನಿಖೆಯಲ್ಲಿ ಹಲವು ಗಂಭೀರ ವೈಫಲ್ಯಗಳು ಮತ್ತು ವ್ಯತ್ಯಾಸಗಳು ಕಂಡುಬಂದ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಸಿಬಿಐ ಹೊಸದಾಗಿ ಹಾಕಿರುವ ಎಫ್​ಐಆರ್​ನಲ್ಲಿ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ, ನಟ ದಿನೋ ಮೊರಿಯಾ, ರಿಯಾ ಚಕ್ರಬರ್ತಿ ಮೊದಲಾದವರ ಹೆಸರು ಇದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ನಕಲಿ ನಾಣ್ಯ ತಯಾರಿಕೆ ಗ್ಯಾಂಗ್ ಖಾಕಿ ಬಲೆಗೆ: ಐವರು ಆರೋಪಿಗಳು ಅರೆಸ್ಟ್​​

ಉಚ್ಚ ನ್ಯಾಯಾಲಯದ ತರಾಟೆ: ಕಳೆದ ಆರು ವರ್ಷಗಳಿಂದ ಪ್ರಕರಣವನ್ನು ಕೇವಲ ಆಕಸ್ಮಿಕ ಸಾವು ಎಂದು ಪರಿಗಣಿಸಿ ಯಾವುದೇ ಎಫ್‌ಐಆರ್ ದಾಖಲಿಸದಿರುವುದಕ್ಕೆ ಮುಂಬೈ ಪೊಲೀಸರನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಪ್ರಕರಣದ ಮಹಜರು ಹಾಗೂ ವೈದ್ಯಕೀಯ ವರದಿಗಳಲ್ಲಿ ಗಂಭೀರ ವ್ಯತ್ಯಾಸಗಳಿವೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಂದೆಯ ದೂರು ಹಾಗೂ ಹೇಳಿಕೆ: ದಿಶಾ ಸಾಲಿಯಾನ್ ತಂದೆ ಸತೀಶ್ ಸಾಲಿಯಾನ್ ಅವರು ತಮ್ಮ ಮಗಳ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಮತ್ತು ಪ್ರಕರಣವನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಸಿಬಿಐ ಸತೀಶ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ಸತೀಶ್ ಸಾಲಿಯಾನ್ ನೀಡಿದ ದೂರಿನ ಆಧಾರದ ಮೇಲೆ, ಅಪರಾಧ ಸಂಚು, ಸುಳ್ಳು ಕಥೆಯನ್ನು ಸೃಷ್ಟಿಸಿ ಪ್ರಚಾರ ಮಾಡಿದ್ದು, ಸಾಕ್ಷ್ಯ ನಾಶ ಮತ್ತು ತಿರುಚುವಿಕೆ ಮುಂತಾದ ಆರೋಪಗಳ ಅಡಿಯಲ್ಲಿ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ.

ಹಲವು ಹೆಸರುಗಳ ಪರಿಶೀಲನೆ: ದೂರಿನಲ್ಲಿ ಉಲ್ಲೇಖಿಸಲಾದ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ, ನಟರಾದ ದಿನೋ ಮೋರಿಯಾ, ಸೂರಜ್ ಪಾಂಚೋಲಿ, ರೋಹನ್ ರಾಯ್, ರಿಯಾ ಚಕ್ರಬರ್ತಿ ಹಾಗೂ ಮಾಜಿ ಪೊಲೀಸ್ ಅಧಿಕಾರಿಗಳ ಪಾತ್ರದ ಕುರಿತು ಸಾಕ್ಷ್ಯಾಧಾರಗಳನ್ನು ಮೌಲ್ಯಮಾಪನ ಮಾಡುವುದಾಗಿ ಸಿಬಿಐ ತಿಳಿಸಿದೆ.

ಇದನ್ನೂ ಓದಿ: ಬೀದಿಗೆ ಬಂದ ಪೆಟ್ ಡಾಗ್ ಜಗಳ: ಲಿಫ್ಟ್ ಒಳಗೆ ಮಹಿಳೆಯರ ನಡುವೆ ಜಗಳ, ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ನ್ಯಾಯಾಲಯದ ಸ್ಪಷ್ಟನೆ: ಎಫ್‌ಐಆರ್ ದಾಖಲಿಸಿದ ತಕ್ಷಣ ಯಾರನ್ನೂ ಅಪರಾಧಿ ಅಥವಾ ಆರೋಪಿ ಎಂದು ಪರಿಗಣಿಸಲಾಗುವುದಿಲ್ಲ. ಸಿಬಿಐ ಅಧಿಕಾರಿಯು ಸೂಕ್ತ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ನಂತರವೇ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

ದಿಶಾ ಸಾಲಿಯಾನ್ ಪ್ರಕರಣದಂತೆ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದೂ ಅನುಮಾನಾಸ್ಪದ ಸಾವಿನ ಪ್ರಕರಣವಾಗಿದೆ. ಸುಶಾಂತ್ ಅವರು 2020ರ ಜೂನ್ 14ರಂದು ಮೃತಪಟ್ಟಿದ್ದರು. ದಿಶಾ ಮೃತರಾದ ಕೆಲವೇ ದಿನಗಳಲ್ಲಿ ಸುಶಾಂತ್ ಮೃತಪಟ್ಟಿರುವುದರಿಂದ ಈ ಎರಡೂ ಪ್ರಕರಣಗಳ ನಡುವಿನ ಸಂಪರ್ಕದ ಕುರಿತು ಸಿಬಿಐ ತನ್ನ ತನಿಖೆಯ ಮೂಲಕ ಸತ್ಯಾಸತ್ಯತೆಯನ್ನು ಹೊರತರಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:05 pm, Mon, 14 September 26

Follow Us
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ
ಗಣೇಶ ಚತುರ್ಥಿಯಂದೇ ಗಜರಾಜನ ಎಂಟ್ರಿ