ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಬಾಲಿವುಡ್ ನ ಇಬ್ಬರು ಗಣ್ಯರಿಗೆ ಮುಂಬೈ ಪೋಲಿಸರು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದಾರೆ.
ಇದುವರೆಗೆ ನಟನ ಆತ್ಮಹತ್ಯೆ ಪ್ರಕರಣದಲ್ಲಿ 37 ಜನರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಇಂದೂ ಸಹ ಬಾಲಿವುಡ್ ನಿರ್ದೇಶಕ ಮಹೇಶ್ ಭಟ್ ಹಾಗೂ ನಿರ್ದೇಶಕ ಕರಣ್ ಜೋಹರ್ರ ಮ್ಯಾನೇಜರ್ಗೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ. ಜೊತೆಗೆ ಮುಂದಿನ ದಿನಗಳಲ್ಲಿ ಅಗತ್ಯವಿದ್ದಲ್ಲಿ ಕರಣ್ ಜೋಹರ್ಗೂ ಸಮನ್ಸ್ ನೀಡುವ ಸಾಧ್ಯತೆಗಳಿವೆ ಎಂದು ಮಹಾರಾಷ್ಟ್ರದ ಗೃಹ ಸಚಿವ ಅನಿಲ್ ದೇಶ್ಮುಖ್ ತಿಳಿಸಿದ್ದಾರೆ.
ಈ ಹಿಂದೆ ನಟಿ ಕಂಗನಾ ರನೌತ್ ಸುಶಾಂತ್ನ ಚಿತ್ರರಂಗದಲ್ಲಿ ಕಡೆಗಣಿಸಲು ಹಲವರು ಯತ್ನಿಸಿದ್ದರು ಎಂಬ ಹೇಳಿಕೆ ನೀಡಿದ್ದರು. ಇದರಲ್ಲಿ ಮಹೇಶ್ ಭಟ್ ಹಾಗೂ ಕರಣ್ ಜೋಹರ್ ಹೆಸರುಗಳು ಸಹ ಉಲ್ಲೇಖಿಸಿದ್ದರು.
Published On - 3:39 pm, Sun, 26 July 20