AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sushil Kumar Modi Death: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್ ಮೋದಿ ಕ್ಯಾನ್ಸರ್​ನಿಂದ ನಿಧನ

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನರಾಗಿದ್ದಾರೆ. ಅವರ ಬಾಲ್ಯ, ರಾಜಕೀಯ ಜೀವನ ಸೇರಿದಂತೆ ಕೆಲವು ಮಾಹಿತಿಗಳು ಇಲ್ಲಿವೆ.

Sushil Kumar Modi Death: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್ ಮೋದಿ ಕ್ಯಾನ್ಸರ್​ನಿಂದ ನಿಧನ
ಸುಶೀಲ್ ಕುಮಾರ್ ಮೋದಿ
ನಯನಾ ರಾಜೀವ್
|

Updated on:May 14, 2024 | 9:06 AM

Share

ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ(Sushil Kumar Modi) ನಿಧನರಾಗಿದ್ದಾರೆ. ಸುಶೀಲ್ ಮೋದಿ ಬಿಜೆಪಿಯ ಹಿರಿಯ ನಾಯಕರಲ್ಲಿ ಒಬ್ಬರು. ಅವರಿಗೆ 72 ವರ್ಷ ವಯಸ್ಸಾಗಿತ್ತು ಮತ್ತು ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಬಿಹಾರದ ಹಾಲಿ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಎಕ್ಸ್​ನಲ್ಲಿ ಪೋಸ್ಟ್​ ಮಾಡಿ ಅವರ ನಿಧನದ ಬಗ್ಗೆ ಮಾಹಿತಿ ನೀಡಿ ದುಃಖ ವ್ಯಕ್ತಪಡಿಸಿದ್ದಾರೆ.

ಅವರು ಟ್ವೀಟ್​ ಮಾಡಿ, ಬಿಹಾರದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಕುಮಾರ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ, ಇದು ಬಿಹಾರ ಬಿಜೆಪಿಗೆ ತುಂಬಲಾರದ ನಷ್ಟ’’ ಎಂದು ಬರೆದಿದ್ದಾರೆ. ಸುಶೀಲ್ ಮೋದಿ ಅವರು ಕಳೆದ ಆರು ತಿಂಗಳಿನಿಂದ ಕ್ಯಾನ್ಸರ್​ನಿಂದ ಬಳಲುತ್ತಿದ್ದಾರೆ ಎಂದು ಸ್ವತಃ ಅವರೇ ಈ ಹಿಂದೆ ಮಾಹಿತಿ ನೀಡಿದ್ದರು.

ಸುಶೀಲ್ ಕುಮಾರ್ ಮೋದಿ ಜೀವನ ಸುಶೀಲ್ ಕುಮಾರ್ ಮೋದಿ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಜನವರಿ 5, 1952ರಲ್ಲಿ ಜನಿಸಿದರು. ಅವರ ತಂದೆಯ ಹೆಸರು ಮೋತಿಲಾಲ್ ಮೋದಿ, ತಾಯಿಯ ಹೆಸರು ರತ್ನಾದೇವಿ. ಅವರ ಪತ್ನಿ ಜೆಸ್ಸಿ ಸುಶೀಲ್ ಮೋದಿ ಕ್ರಿಶ್ಚಿಯನ್ ಧರ್ಮದವರಾಗಿದ್ದು, ಪ್ರೊಫೆಸರ್ ಆಗಿದ್ದಾರೆ. ಅವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ ಓರ್ವ ಉತ್ಕರ್ಷ್​ ತಥಾಗತ, ಮತ್ತೋರ್ವ ಅಕ್ಷಯ್ ಅಮೃತಾಂಕ್ಷು. ಪಾಟ್ನಾ ವಿಜ್ಞಾನ ಕಾಲೇಜಿನಲ್ಲಿ ಸಸ್ಯಶಾಸ್ತ್ರದಲ್ಲಿ ಪದವಿ ಪಡೆದಿದ್ದರು. ಅವರು 1990ರಲ್ಲಿ ಬಿಹಾರ ವಿಧಾನಸಭೆಗೆ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಇದಾದ ಬಳಿಕ1995 ಮತ್ತು 2000ರಲ್ಲಿಯೂ ಶಾಸಕರಾಗಿ ಆಯ್ಕೆಯಾದರು. ಸತತ ಮೂರು ಅವಧಿಗೆ ಶಾಸಕರಾಗಿದ್ದರು.

ಮತ್ತಷ್ಟು ಓದಿ: ಸಿಎಂ ಆಗಿ ಕಾರ್ಯ ನಿರ್ವಹಿಸಿದ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದ ಸುಶೀಲ್ ಮೋದಿ: ತಪ್ಪು ಸರಿಪಡಿಸಿ ಇತಿಹಾಸದ ಪಾಠ ಹೇಳಿದ ನೆಟ್ಟಿಗರು

ಸುಶೀಲ್ ಮೋದಿ ರಾಜಕೀಯ ಜೀವನ ಸುಶೀಲ್ ಮೋದಿ ಅವರು ಮೂರು ದಶಕಗಳ ಸುದೀರ್ಘ ರಾಜಕೀಯ ಜೀವನವನ್ನು ಹೊಂದಿದ್ದಾರೆ. ಈ ಅವಧಿಯಲ್ಲಿ ಅವರು ಶಾಸಕ, ಎಂಎಲ್​ಸಿ, ಲೋಕಸಭಾ ಸಂಸದ ಹಾಗೂ ರಾಜ್ಯಸಭಾ ಸಂಸದರೂ ಆಗಿದ್ದರು. ಬಿಹಾರ ಸರ್ಕಾರದಲ್ಲಿ ಹಣಕಾಸು ಸಚಿವ ಹುದ್ದೆಯನ್ನೂ ಅಲಂಕರಿಸಿದ್ದರು. ಎರಡು ಬಾರಿ ಬಿಹಾರ ಉಪಮುಖ್ಯಮಂತ್ರಿಯಾಗಿದ್ದರು. ಅವರು 2005 ರಿಂದ 2013ರವರೆಗೆ ಮೊದಲ ಬಾರಿಗೆ ಮತ್ತು 2017ರಿಂದ 2020ರವರೆಗೆ ಎರಡನೇ ಬಾರಿಗೆ ಉಪಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ್ದರು.

ಪ್ರಧಾನಿ ಮೋದಿ ಟ್ವೀಟ್​

ವಿದ್ಯಾರ್ಥಿ ರಾಜಕೀಯದಿಂದ ಮುಖ್ಯವಾಹಿನಿಯ ರಾಜಕೀಯಕ್ಕೆ ಬಂದ ನಾಯಕರಲ್ಲಿ ಒಬ್ಬರು. ಪಾಟ್ನಾ ವಿಶ್ವವಿದ್ಯಾಲಯ ಅವರ ವಿದ್ಯಾರ್ಥಿ ರಾಜಕಾರಣದ ನಾಡಾಯಿತು. 1973ರಲ್ಲಿ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದರು. 1990ರಲ್ಲಿ ಅವರು ಪಾಟ್ನಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ಇದಾದ ಬಳಿಕ 1995ರಲ್ಲಿ ಶಾಸಕರಾಗಿ ಆಯ್ಕೆಯಾಗಿ ನಂತರ ಬಿಜೆಪಿಯ ಮುಖ್ಯ ಸಚೇತಕರಾದರು. ಇದಾದ ಬಳಿಕ 2000ರಲ್ಲಿ ಸತತ ಮೂರನೇ ಬಾರಿಯೂ ಶಾಸಕರಾಗಿ ಆಯ್ಕೆಯಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:36 am, Tue, 14 May 24

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಗದಗ ಎಸ್.ಎಸ್. ಕಾಮರ್ಸ್ ಕಾಲೇಜ್ ಫುಡ್ ಫೆಸ್ಟಿವಲ್
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
ಬೈಪಾಸ್​​ಗೆ ಆಗ್ರಹಿಸಿ ಕಗ್ಗಲಿಪುರ ನಿವಾಸಿಗಳಿಂದ ವಿನೂತನ ಪ್ರತಿಭಟನೆ
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
RSS ಪಥಸಂಚಲನಕ್ಕೆ ಕೊನೆ ಕ್ಷಣದಲ್ಲಿ ಸರ್ಕಾರ ಅನುಮತಿ ನೀಡಿದೆ ಎಂದ ಅಶೋಕ್
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ಕಿರಿಕ್; ಎಳೆಎಳೆಯಾಗಿ ವಿವರಿಸಿದ ಆಪ್ತ ವೇಲು
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ದರ್ಶನ್ ಹೊರಗೆ ಬರೋದು ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಲಾಯರ್ ಪ್ರತಿಕ್ರಿಯೆ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಪರಿಷತ್​​​ ಬಿಜೆಪಿ ಅಭ್ಯರ್ಥಿ ಸುರೇಶ್​​ ನಡೆಗೆ ಶಾಸಕ ಬಿ.ಪಿ.ಹರೀಶ್ ಆಕ್ರೋಶ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ಧನ್ವೀರ್, ವಿಜಯಲಕ್ಷ್ಮಿ ದರ್ಶನ್ ನಡುವಿನ ಜಗಳಕ್ಕೆ ಸಿಕ್ತು ಮುಖ್ಯ ಕಾರಣ
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ ಆರೋಪ: ನಾಲ್ವರ ವಿರುದ್ಧ ಎಫ್ಐಆರ್
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ವಾರಭವಿಷ್ಯ: ಅ.26 ರಿಂದ ನ.01ರ ವರೆಗಿನ ದ್ವಾದಶ ರಾಶಿಗಳ ಫಲಾಫಲಗಳು
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್
ಬಿಗ್ ಬಾಸ್: ಸುದೀಪ್ ಎದುರಲ್ಲೇ ಬಗೆಬಗೆಯ ಶಿಕ್ಷೆ ಅನುಭವಿಸಿದ ಪ್ರಶಾಂತ್