AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನದ ಭಾರತ-ಪಾಕಿಸ್ತಾನ ಗಡಿ ಬಳಿ ಡ್ರೋನ್ ಪತ್ತೆ; ಸುತ್ತಮುತ್ತ ಕಟ್ಟೆಚ್ಚರ

ಅಧಿಕಾರಿಯೊಬ್ಬರು ನೀಡಿರುವ ಮಾಹಿತಿಯ ಪ್ರಕಾರ, ಸುಮಾರು 5ರಿಂದ 7 ಅಡಿ ಉದ್ದದ ಡ್ರೋನ್, ಕ್ಯಾಮೆರಾ ಮಾಡ್ಯೂಲ್ ಮುರಿದು ಬೇರ್ಪಟ್ಟಿದ್ದು ಕಂಡುಬಂದಿದೆ. ಡ್ರೋನ್ ಅನ್ನು ಅದರ ಮೂಲ ಮತ್ತು ಉದ್ದೇಶವನ್ನು ನಿರ್ಧರಿಸಲು ವಿಧಿವಿಜ್ಞಾನ ಮತ್ತು ತಾಂತ್ರಿಕ ವಿಶ್ಲೇಷಣೆಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.

ರಾಜಸ್ಥಾನದ ಭಾರತ-ಪಾಕಿಸ್ತಾನ ಗಡಿ ಬಳಿ ಡ್ರೋನ್ ಪತ್ತೆ; ಸುತ್ತಮುತ್ತ ಕಟ್ಟೆಚ್ಚರ
Drone
ಸುಷ್ಮಾ ಚಕ್ರೆ
|

Updated on: May 15, 2025 | 3:57 PM

Share

ಜೈಪುರ, ಮೇ 15: ಇಂದು ಬೆಳಿಗ್ಗೆ ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯ ಭಾರತ-ಪಾಕಿಸ್ತಾನ ಗಡಿಯ ಬಳಿಯ ಹೊಲದಲ್ಲಿ ಡ್ರೋನ್ ಪತ್ತೆಯಾಗಿದ್ದು, ಭದ್ರತಾ ಸಂಸ್ಥೆಗಳು ಅಲರ್ಟ್ ಆಗಿದ್ದಾರೆ. ಇಂದು ಬೆಳಿಗ್ಗೆ 9.45ರ ಸುಮಾರಿಗೆ ಅನುಪ್‌ಗಢ ಪ್ರದೇಶದ ಗ್ರಾಮಸ್ಥರು ಮಾನವರಹಿತ ವೈಮಾನಿಕ ವಾಹನವನ್ನು ಪತ್ತೆಹಚ್ಚಿದರು. ಅವರು ಅದನ್ನು ಗಮನಿಸಿದ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅನುಪ್‌ಗಢ ಸ್ಟೇಷನ್ ಹೌಸ್ ಆಫೀಸರ್ (SHO) ಈಶ್ವರ್ ಜಂಗಿದ್ ಅವರು ತಕ್ಷಣ ಗಡಿ ಭದ್ರತಾ ಪಡೆ (BSF)ಗೆ ಮಾಹಿತಿ ನೀಡಿ ಪೊಲೀಸ್ ತಂಡದೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಬಿಎಸ್​ಎಫ್ ವಶಕ್ಕೆ ಪಡೆದಿರುವ ಡ್ರೋನ್ 5ರಿಂದ 7 ಅಡಿ ಉದ್ದವಿದ್ದು ಬಹುತೇಕ ಹಾನಿಗೊಳಗಾಗಿದೆ. ಅದರ ಕ್ಯಾಮೆರಾ ಮಾಡ್ಯೂಲ್ ಮುರಿದಿದೆ.

“ನಾವು ಡ್ರೋನ್ ಅನ್ನು ವಶಪಡಿಸಿಕೊಂಡಿದ್ದೇವೆ. ಆ ಪ್ರದೇಶವನ್ನು ಸಂಪೂರ್ಣವಾಗಿ ಪರಿಶೀಲಿಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಾಂಬ್ ನಿಷ್ಕ್ರಿಯ ದಳವನ್ನು ಸಹ ಕರೆಯಲಾಗಿದೆ” ಎಂದು ಪೊಲೀಸರು ಹೇಳಿದರು. ಡ್ರೋನ್ ಅನ್ನು ಅದರ ಮೂಲ ಮತ್ತು ಉದ್ದೇಶವನ್ನು ನಿರ್ಧರಿಸಲು ವಿಧಿವಿಜ್ಞಾನ ಮತ್ತು ತಾಂತ್ರಿಕ ವಿಶ್ಲೇಷಣೆಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.

ಇದನ್ನೂ ಓದಿ: ದೆಹಲಿ: ಮೆಟ್ರೋ ನಿಲ್ದಾಣದ ಬಳಿ ಅಪರಿಚಿತ ದುಷ್ಕರ್ಮಿಗಳಿಂದ ಗುಂಡಿನ ದಾಳಿ, ಒಬ್ಬರಿಗೆ ಗಂಭೀರ ಗಾಯ

ಇದನ್ನೂ ಓದಿ
Image
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
Image
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
Image
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
Image
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಅಂತಾರಾಷ್ಟ್ರೀಯ ಗಡಿಯಲ್ಲಿರುವ ಶ್ರೀ ಗಂಗಾನಗರದ ಆಯಕಟ್ಟಿನ ಸ್ಥಳವನ್ನು ಗಮನದಲ್ಲಿಟ್ಟುಕೊಂಡು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಭದ್ರತಾ ಸಂಸ್ಥೆಯ ಮೂಲಗಳು ತಿಳಿಸಿವೆ. ಡ್ರೋನ್ ಅನ್ನು ಗಡಿಯಾಚೆಯಿಂದ ಕಳುಹಿಸಲಾಗಿದೆಯೇ ಅಥವಾ ಮಿಲಿಟರಿ ಚಟುವಟಿಕೆಯ ಸಮಯದಲ್ಲಿ ಅದು ದಾರಿ ತಪ್ಪಿದೆಯೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇದನ್ನೂ ಓದಿ: ನಮ್ಮ ಡ್ರೋನ್‌, ಕ್ಷಿಪಣಿಗಳ ಬಗ್ಗೆ ಯೋಚಿಸಿದರೂ ಪಾಕಿಸ್ತಾನಕ್ಕೆ ನಿದ್ರೆ ಬರುವುದಿಲ್ಲ; ಆದಂಪುರ ವಾಯುನೆಲೆಯಲ್ಲಿ ಪ್ರಧಾನಿ ಮೋದಿ

“ಭಾರತ ಮತ್ತು ಪಾಕಿಸ್ತಾನ ನಡುವಿನ ಇತ್ತೀಚಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಈಗಾಗಲೇ ಗಡಿ ಪ್ರದೇಶಗಳಲ್ಲಿ ಜಾಗರೂಕವಾಗಿವೆ. ಗಡಿಯ ಬಳಿ ಅಂತಹ ವಸ್ತುವಿನ ಉಪಸ್ಥಿತಿಯು ಕಳವಳಕ್ಕೆ ಕಾರಣವಾಗಿದೆ” ಎಂದು ಪೊಲೀಸರು ಹೇಳಿದರು. ಬಿಎಸ್ಎಫ್ ಸಿಬ್ಬಂದಿ ಮತ್ತು ಪೊಲೀಸರು ಈ ಪ್ರದೇಶದಲ್ಲಿ ಜಾಗರೂಕತೆಯನ್ನು ಕಾಯ್ದುಕೊಳ್ಳುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ