ಕೋವಿಡ್ ನಿಯಮ ಪಾಲಿಸಿ ಇಲ್ಲವೇ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವರ ಪತ್ರ

ಭಾರತ್ ಜೋಡೋ ಯಾತ್ರೆ ವೇಳೆ ಮಾಸ್ಕ್, ಸ್ಯಾನಿಟೈಜರ್ ಸೇರಿದಂತೆ ಕೋವಿಡ್-19 ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಲಸಿಕೆ ಪಡೆದವರು ಮಾತ್ರ ಯಾತ್ರೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಮಾಂಡವಿಯ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಕೋವಿಡ್ ನಿಯಮ ಪಾಲಿಸಿ ಇಲ್ಲವೇ ಭಾರತ್ ಜೋಡೋ ಯಾತ್ರೆ ನಿಲ್ಲಿಸಿ: ರಾಹುಲ್ ಗಾಂಧಿಗೆ ಕೇಂದ್ರ ಆರೋಗ್ಯ ಸಚಿವರ ಪತ್ರ
ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Dec 21, 2022 | 1:54 PM

ಕೋವಿಡ್ ನಿಯಮಾವಳಿ (Covid protocols) ಪಾಲಿಸದೇ ಇದ್ದರೆ ಭಾರತ್ ಜೋಡೋ ಯಾತ್ರೆಯನ್ನು (Bharat Jodo Yatra) ನಿಲ್ಲಿಸಿ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯ (Mansukh Mandaviya) ಮಂಗಳವಾರ ಕಾಂಗ್ರೆಸ್ ನೇತಾರ ರಾಹುಲ್ ಗಾಂಧಿಯವರಿಗೆ (Rahul Gandhi) ಪತ್ರ ಬರೆದಿದ್ದಾರೆ. ಇದೇ ಪತ್ರದ ಪ್ರತಿಯನ್ನು ಸಚಿವರು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಅವರಿಗೂ ಕಳುಹಿಸಿದ್ದಾರೆ. ರಾಜಸ್ಥಾನದ ಮೂವರು ಬಿಜೆಪಿ ಸಂಸದರು ಭಾರತ್ ಜೋಡೋ ಯಾತ್ರೆಯಿಂದಾಗಿ ಕೋವಿಡ್ ಹರಡುವ ಸಾಧ್ಯತೆ ಬಗ್ಗೆ ಕಳವಳ ವ್ಯಕ್ತ ಪಡಿಸಿರುವುದಾಗಿ ಅವರು ಹೇಳಿದ್ದಾರೆ. ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆ ಮಂಗಳವಾರ ಮುಕ್ತಾಯಗೊಂಡಿದ್ದು, ಬುಧವಾರ ಇದು ಹರ್ಯಾಣ ಪ್ರವೇಶಿಸಿದೆ. ಭಾರತ್ ಜೋಡೋ ಯಾತ್ರೆ ವೇಳೆ ಮಾಸ್ಕ್, ಸ್ಯಾನಿಟೈಜರ್ ಸೇರಿದಂತೆ ಕೋವಿಡ್-19 ನಿಯಮಾವಳಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಲಸಿಕೆ ಪಡೆದವರು ಮಾತ್ರ ಯಾತ್ರೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದು ಮಾಂಡವಿಯ ತಮ್ಮ ಪತ್ರದಲ್ಲಿ ಬರೆದಿದ್ದಾರೆ. ಕೋವಿಡ್ ನಿಯಮಾವಳಿಯನ್ನು ನೀವು ಪಾಲಿಸಬೇಕು. ಅದೇ ವೇಳೆ ಸಾರ್ವಜನಿಕರ ಆರೋಗ್ಯದ ಕಾಳಜಿ, ದೇಶವನ್ನು ಕೋವಿಡ್ ಸಾಂಕ್ರಾಮಿಕದಿಂದ ಪಾರು ಮಾಡುವುದಕ್ಕಾಗಿ ಮತ್ತು ದೇಶದ ಹಿತಕ್ಕಾಗಿ ನೀವು ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಬೇಕು ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಮಾಂಡವಿಯ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, ಮಾಂಡವಿಯ ಅವರು ಸಾರ್ವಜನಿಕರ ಆರೋಗ್ಯ ಬಗ್ಗೆ ಕಾಳಜಿ ಹೊಂದಿದ್ದರೆ, ಇತ್ತೀಚೆಗೆ ಮುಕ್ತಾಯವಾದ ಗುಜರಾತ್ ವಿಧಾನಸಭಾ ಚುನಾವಣೆಗೆ ಪ್ರಚಾರ ಮಾಡಿದ ಬಿಜೆಪಿ ನಾಯಕರು ಯಾಕೆ ಈ ನಿಯಮಾವಳಿ ಪಾಲಿಸಿಲ್ಲ ಎಂದು ಪ್ರಶ್ನಿಸಿರುವುದಾಗಿ ಎಎನ್ಐ ವರದಿ ಮಾಡಿದೆ. ಯಾತ್ರೆ ಬಗ್ಗೆ ದಿಗಿಲುಗೊಂಡಿರುವ ಬಿಜೆಪಿ ಭಯದಿಂದ ಈ ರೀತಿ ವರ್ತಿಸುತ್ತಿದೆ. ಗುಜರಾತಿನಲ್ಲಿ ಮತಯಾಚನೆ ಮಾಡುವಾಗ ಪ್ರಧಾನಿ ನರೇಂದ್ರ ಮೋದಿಯವರು ಮಾಸ್ಕ್ ಧರಿಸಿದ್ದರೇ ಎಂದು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದಾರೆ.

ಮಂಗಳವಾರ, ಕೇಂದ್ರ ಆರೋಗ್ಯ ಸಚಿವಾಲಯವು ಹಲವಾರು ದೇಶಗಳಲ್ಲಿ ಪ್ರಕರಣಗಳ ಹೆಚ್ಚಳದ ದೃಷ್ಟಿಯಿಂದ ಜಿನೋಮ್ ಅನುಕ್ರಮಕ್ಕಾಗಿ ಎಲ್ಲಾ ಕೋವಿಡ್ -19 ಸಕಾರಾತ್ಮಕ ಮಾದರಿಗಳನ್ನು ಕಳುಹಿಸುವಂತೆ ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿತ್ತು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಜಪಾನ್, ಅಮೆರಿಕ, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ “ಹಠಾತ್ ಪ್ರಕರಣಗಳ ಉಲ್ಬಣವನ್ನು” ಗಮನಿಸಿದ್ದಾರೆ.

ಇದನ್ನೂ ಓದಿ:ದೇಶದ ಕೋವಿಡ್​​ 19 ಪರಿಸ್ಥಿತಿಯನ್ನು ಪರಿಶೀಲಿಸಲು ಸಭೆ ಕರೆದ ಕೇಂದ್ರ ಆರೋಗ್ಯ ಸಚಿವ; ಸಭೆಯ ಮುಖ್ಯಾಂಶಗಳು

ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮ್ಯಾಪ್ ಮಾಡಲಾದ INSACOG ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್‌ಗಳಿಗೆ ಪ್ರತಿದಿನ ಕಳುಹಿಸಬೇಕು ಎಂದು ಸರ್ಕಾರ ಹೇಳಿದೆ. ಭಾರತದಲ್ಲಿ ಕೋವಿಡ್‌ನ ವಿವಿಧ ತಳಿಗಳನ್ನು ಅಧ್ಯಯನ ಮಾಡಲು ಮತ್ತು ಮೇಲ್ವಿಚಾರಣೆ ಮಾಡಲು INSACOG ಆರೋಗ್ಯ ಸಚಿವಾಲಯದ ಅಡಿಯಲ್ಲಿ ಒಂದು ವೇದಿಕೆಯಾಗಿದೆ.

ಜಪಾನ್, ಅಮೆರಿಕ, ರಿಪಬ್ಲಿಕ್ ಆಫ್ ಕೊರಿಯಾ, ಬ್ರೆಜಿಲ್ ಮತ್ತು ಚೀನಾದಲ್ಲಿ ಪ್ರಕರಣಗಳ ಹಠಾತ್ ಉಲ್ಬಣವನ್ನು ಗಮನಿಸಿದರೆ, ರೂಪಾಂತರಗಳನ್ನು ಪತ್ತೆಹಚ್ಚಲು ಸಕಾರಾತ್ಮಕ ಪ್ರಕರಣದ ಮಾದರಿಗಳ ಸಂಪೂರ್ಣ ಜೀನೋಮ್ ಅನುಕ್ರಮವನ್ನು ಸಜ್ಜುಗೊಳಿಸುವುದು ಅತ್ಯಗತ್ಯ.

ಕಳೆದ 24 ಗಂಟೆಗಳಲ್ಲಿ ದೇಶವು 129 ಹೊಸ ಸೋಂಕುಗಳನ್ನು ವರದಿ ಮಾಡಿದೆ ಮತ್ತು ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 3,408 ಆಗಿದೆ. ಕಳೆದ 24 ಗಂಟೆಗಳಲ್ಲಿ ಒಬ್ಬ ಸಾವು ದಾಖಲಾಗಿದ್ದು, ಒಟ್ಟು 5,30,677 ಕ್ಕೆ ತಲುಪಿದೆ. ಚೀನಾದ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗತೊಡಗಿದೆ, ಔಷಧಗಳ ಕೊರತೆಯನ್ನು ಎದುರಿಸುತ್ತಿದೆ. ಸ್ಮಶಾನಗಳು ಕೂಡ ಹೆಣಗಳಿಂದ ತುಂಬಿ ಹೋಗಿವೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು