ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ; ನೂಪುರ್ ಶರ್ಮ ಇಡೀ ದೇಶದ ಕ್ಷಮೆ ಕೇಳಬೇಕು ಎಂದ ಸುಪ್ರೀಂ ಕೋರ್ಟ್​

Nupur Sharma: ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಅಲ್ಲದೆ, ನೂಪುರ್ ಶರ್ಮಾ ಅವರ ಅರ್ಜಿಯನ್ನು ತಿರಸ್ಕರಿಸಿದೆ.

ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ; ನೂಪುರ್ ಶರ್ಮ ಇಡೀ ದೇಶದ ಕ್ಷಮೆ ಕೇಳಬೇಕು ಎಂದ ಸುಪ್ರೀಂ ಕೋರ್ಟ್​
ನೂಪುರ್ ಶರ್ಮ
TV9kannada Web Team

| Edited By: Sushma Chakre

Jul 01, 2022 | 11:53 AM

ದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿದ್ದಕ್ಕೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ (Nupur Sharma) ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ (Supreme Court) ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರವಾದಿ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ.

ನೂಪುರ್ ಶರ್ಮ ವಿವಾದಾತ್ಮಕ ಹೇಳಿಕೆ ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಉದಯ್‌ಪುರದಲ್ಲಿ ಟೈಲರ್‌ನ ಹತ್ಯೆಯಾದ ದುರದೃಷ್ಟಕರ ಘಟನೆಗೆ ಆಕೆಯ ಆಕ್ರೋಶವೇ ಕಾರಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನೂಪುರ್ ಶರ್ಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸುಪ್ರೀಂ ಕೋರ್ಟ್, ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕಿರುವುದನ್ನು ಗಮನಿಸಿ ಇಡೀ ದೇಶದ ಕ್ಷಮೆ ಯಾಚಿಸುವಂತೆ ಸೂಚಿಸಿದೆ.

ಅವರ ಚರ್ಚೆಯ ದುರ್ಬಳಕೆಯಾದರೆ ಆ ಚಾನಲ್ ನಿರೂಪಕರ ವಿರುದ್ಧ ಮೊದಲಿಗೆ ಕೇಸ್ ಹಾಕಬೇಕು. ನೂಪುರ್ ಶರ್ಮಾ ನಾಲಿಗೆ ಸಡಿಲಬಿಟ್ಟು ಮಾತನಾಡಿದ್ದರಿಂದ ಇಡೀ ದೇಶಕ್ಕೆ ಬೆಂಕಿ ಬಿದ್ದಿತ್ತು. ಪ್ರಜಾಪ್ರಭುತ್ವದಲ್ಲಿ ಹುಲ್ಲಿಗೆ ಬೆಳೆಯುವ ಹಕ್ಕು ಇದೆ, ಕತ್ತೆಗೂ ತಿನ್ನುವ ಹಕ್ಕು ಇದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: Ranchi ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ರಾಂಚಿಯಲ್ಲಿ ಭುಗಿಲೆದ್ದ ಹಿಂಸಾಚಾರ; ವಾಹನಗಳಿಗೆ ಬೆಂಕಿ,ಕಲ್ಲು ತೂರಾಟ

ನೂಪುರ್ ಶರ್ಮಾ ಹೈಕೋರ್ಟ್​ಗೆ ಹೋಗಿ ಅರ್ಜಿ ಸಲ್ಲಿಸಲಿ ಎಂದು ನೂಪುರ್ ಶರ್ಮಾ ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನೂಪುರ ಶರ್ಮಾಗೆ ದೆಹಲಿ ಪೊಲೀಸರು ರೆಡ್ ಕಾರ್ಪೆಟ್ ಸ್ವಾಗತ ಕೋರಿರಬೇಕು. ಇಷ್ಟೊಂದು ಎಫ್.ಐ.ಆರ್. ದಾಖಲಾದರೂ ದೆಹಲಿ ಪೊಲೀಸ್ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ತಮ್ಮ ವಿರುದ್ಧದ ಎಲ್ಲ ಕೇಸ್ ಗಳನ್ನು ದೆಹಲಿಗೆ ವರ್ಗಾವಣೆ ಮಾಡಬೇಕೆಂದು ನೂಪುರ್ ಶರ್ಮಾ ಕೋರಿದ್ದರು. ಇದೀಗ ನೂಪುರ್ ಶರ್ಮಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನೂಪುರ್ ಶರ್ಮಾ ಮತ್ತು ಅವರ ಹೇಳಿಕೆಯು ಇಡೀ ದೇಶಕ್ಕೆ ಬೆಂಕಿ ಹಚ್ಚಿದೆ. ಉದಯಪುರದಲ್ಲಿ ಟೈಲರ್ ಕೊಲೆಯಾದ ದುರದೃಷ್ಟಕರ ಘಟನೆಗೆ ಆಕೆಯ ಏಕಾಏಕಿ ಕಾರಣವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಪ್ರವಾದಿಯ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ತನ್ನ ವಿರುದ್ಧ ಹಲವು ರಾಜ್ಯಗಳಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳನ್ನು ತನಿಖೆಗಾಗಿ ದೆಹಲಿಗೆ ವರ್ಗಾಯಿಸುವಂತೆ ಕೋರಿ ಅಮಾನತುಗೊಂಡ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?

ಪ್ರವಾದಿ ಮೊಹಮ್ಮದ್ ಕುರಿತು ಹೇಳಿಕೆ ನೀಡಿ ಗಲ್ಫ್ ರಾಷ್ಟ್ರಗಳಲ್ಲಿ ಭಾರೀ ಆಕ್ರೋಶ ಹಾಗೂ ದೇಶದಲ್ಲಿ ಪ್ರತಿಭಟನೆಗೆ ಕಾರಣವಾಗಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಇಡೀ ದೇಶಕ್ಕೆ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಹೇಳಿದೆ. ಈಗ ದೇಶದಲ್ಲಿ ಏನಾಗುತ್ತಿದೆಯೋ ಅದಕ್ಕೆ ನೂಪುರ್ ಶರ್ಮಾ ಅವರೇ ಜವಾಬ್ದಾರರು ಎಂದು ನ್ಯಾಯಮೂರ್ತಿ ಸೂರ್ಯ ಕಾಂತ್ ಹೇಳಿದ್ದಾರೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada