Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಬಂಧಿತರಾಗಿದ್ದ ಬಿಜೆಪಿ ಶಾಸಕ ರಾಜಾ ಸಿಂಗ್​ಗೆ ಜಾಮೀನು ಮಂಜೂರು

ಬಿಜೆಪಿಯಿಂದ ಅಮಾನತುಗೊಂಡಿರುವ ಶಾಸಕ ಟಿ. ರಾಜಾ ಸಿಂಗ್​ಗೆ ಜಾಮೀನು ದೊರೆತಿದ್ದು, ಪೊಲೀಸ್ ಕಸ್ಟಡಿ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ.

Big News: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಬಂಧಿತರಾಗಿದ್ದ ಬಿಜೆಪಿ ಶಾಸಕ ರಾಜಾ ಸಿಂಗ್​ಗೆ ಜಾಮೀನು ಮಂಜೂರು
ತೆಲಂಗಾಣದ ಬಿಜೆಪಿ ಶಾಸಕ ರಾಜಾ ಸಿಂಗ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Aug 24, 2022 | 9:03 AM

ನವದೆಹಲಿ: ಪ್ರವಾದಿ ಮೊಹಮ್ಮದ್ (Prophet Muhammad) ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾಗಿರುವ ತೆಲಂಗಾಣದ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್‌ (T Raja Singh) ಅವರನ್ನು ನಿನ್ನೆ ಬಿಜೆಪಿ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಬಿಜೆಪಿಯಿಂದ ಅಮಾನತುಗೊಂಡಿರುವ ಶಾಸಕ ಟಿ. ರಾಜಾ ಸಿಂಗ್​ಗೆ ಜಾಮೀನು ದೊರೆತಿದ್ದು, ಪೊಲೀಸ್ ಕಸ್ಟಡಿ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಅವರನ್ನು ಅಮಾನತು ಮಾಡಿದರೂ ಗೋಶಾಮಾಲ್‌ನಲ್ಲಿರುವ ಅವರ ಕಚೇರಿಯಲ್ಲಿ ಟಿ. ರಾಜಾ ಸಿಂಗ್​ಗೆ ಭಾರೀ ಸ್ವಾಗತ ಕೋರಲಾಯಿತು.

  1. ಟಿ. ರಾಜಾ ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಕ್ರಿಮಿನಲ್ ಬೆದರಿಕೆ, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕಲಕುವ ಪ್ರಕರಣ ದಾಖಲಿಸಲಾಗಿತ್ತು. ರಾಜಾ ಸಿಂಗ್ ಅವರನ್ನು ಬಂಧಿಸಿದ ಬೆನ್ನಲ್ಲೇ ಬಿಜೆಪಿ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.
  2. ವ್ಯಾಪಕ ಹಿಂಸಾಚಾರದ ನಂತರ ರಾಜಾ ಸಿಂಗ್ ಅವರನ್ನು ಬಂಧಿಸಲಾಯಿತು. ವರದಿಗಳ ಪ್ರಕಾರ, ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ಅನೇಕ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಶಾಸಕರು ಮತ್ತು ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆಯ ಕಾರ್ಪೊರೇಟರ್‌ಗಳು ಪೊಲೀಸ್ ಠಾಣೆಗಳನ್ನು ತಲುಪಿ ಟಿ. ರಾಜಾ ಸಿಂಗ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು.
  3. ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ಏಕೆ ಹೀಗೆ ಹೇಳುತ್ತಿದ್ದಾರೆ? ಬಿಜೆಪಿಯವರು ಇದನ್ನೆಲ್ಲಾ ಮಾಡುವುದನ್ನು ನಿಲ್ಲಿಸಬೇಕು ಎಂಬುದು ನಮ್ಮ ಬೇಡಿಕೆ. ನೀವು ಪ್ರವಾದಿಯನ್ನು ಎಷ್ಟು ದ್ವೇಷಿಸುತ್ತೀರಿ ಎಂಬುದನ್ನು ಜನರು ನೋಡುತ್ತಾರೆ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.
  4. ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದಾರೆ ಎಂದು ಆರೋಪಿಸಿ ರಾಜಾ ಸಿಂಗ್ 10 ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದರು. ರಾಮ ಮತ್ತು ಸೀತೆಯ ಬಗ್ಗೆ ಮಾಡಲಾದ ಅವಮಾನವು ಹಾಸ್ಯ ಹೇಗಾಗುತ್ತದೆ? ಎಂದು ಅವರು ಕೇಳಿದ್ದರು.
  5. ಬಂಧನದ ಸಮಯದಲ್ಲಿ ಶಾಸಕ ರಾಜಾ ಸಿಂಗ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ತನ್ನ ವೀಡಿಯೊವನ್ನು ಸಾಮಾಜಿಕ ಮಾಧ್ಯಮ ಪೇಜಿನಿಂದ ತೆಗೆದುಹಾಕಲಾಗಿದೆ. ನಾನು ಜೈಲಿನಿಂದ ಬಿಡುಗಡೆಯಾದ ನಂತರ ಕ್ಲಿಪ್‌ನ 2ನೇ ಭಾಗವನ್ನು ಅಪ್‌ಲೋಡ್ ಮಾಡುವುದಾಗಿ ಹೇಳಿದ್ದರು.
  6. ಅವರು ಯೂಟ್ಯೂಬ್‌ನಿಂದ ನನ್ನ ವೀಡಿಯೊವನ್ನು ತೆಗೆದುಹಾಕಿದ್ದಾರೆ. ಪೊಲೀಸರು ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ. ನಾನು ಬಿಡುಗಡೆಯಾದ ನಂತರ ವೀಡಿಯೊದ ಎರಡನೇ ಭಾಗವನ್ನು ಖಂಡಿತವಾಗಿಯೂ ಅಪ್‌ಲೋಡ್ ಮಾಡುತ್ತೇನೆ. ನಾನು ನನ್ನ ಧರ್ಮಕ್ಕಾಗಿ ಇದನ್ನು ಮಾಡುತ್ತಿದ್ದೇನೆ. ಧರ್ಮಕ್ಕಾಗಿ ನಾನು ಸಾಯಲು ಸಿದ್ಧನಿದ್ದೇನೆ ಎಂದು ಹೇಳಿದ್ದರು.
  7. ಹೈದರಾಬಾದ್‌ನಲ್ಲಿ ಪ್ರತಿಭಟನಾಕಾರರು ರಾಜಾ ಸಿಂಗ್ ಮುಸ್ಲಿಂ ಸಮುದಾಯದ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ. ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು.
  8. ಕಮಿಷನರ್ ಕಚೇರಿಯ ಹೊರಗೆ ಹಾಗೂ ನಗರದ ಹಲವೆಡೆ ಭಾರಿ ಜನ ಜಮಾಯಿಸಿದ್ದರು. ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ವಿವಿಧ ಪೊಲೀಸ್ ಠಾಣೆಗಳಿಗೆ ಸ್ಥಳಾಂತರಿಸಲಾಯಿತು.ನಗರದ ಗೋಶಾಮಹಲ್‌ನ ಶಾಸಕ ಟಿ. ರಾಜಾ ಸಿಂಗ್‌ ಕಳೆದ ವಾರ ಹಾಸ್ಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿದ್ದರು.
  9. ಶುಕ್ರವಾರ, ಅವರು ಸುಮಾರು 50 ಬೆಂಬಲಿಗರೊಂದಿಗೆ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫಾರುಕಿ ಅವರ ಕಾರ್ಯಕ್ರಮದ ಸ್ಥಳವನ್ನು ತಲುಪಲು ಪ್ರಯತ್ನಿಸಿದಾಗ ಪೊಲೀಸರು ಅವರನ್ನು ತಡೆಗಟ್ಟಿ ಕಸ್ಟಡಿಗೆ ತೆಗೆದುಕೊಂಡರು. ನಂತರ ಕಾರ್ಯಕ್ರಮ ಶಾಂತಿಯುತವಾಗಿ ಜರುಗಿತು.
  10. ಬಿಜೆಪಿಯ ಮಾಜಿ ವಕ್ತಾರ ನೂಪುರ್ ಶರ್ಮಾ ಅವರು ಪ್ರವಾದಿಯವರ ಕುರಿತಾದ ಹೇಳಿಕೆ ನೀಡಿ ಜಗತ್ತಿನಾದ್ಯಂತ ಸುದ್ದಿಯಾಗಿದ್ದರು. ಅದಾದ ಕೆಲವೇ ತಿಂಗಳುಗಳ ನಂತರ ರಾಜಾ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೂಪುರ್ ಶರ್ಮಾ ಅವರನ್ನು ಬಿಜೆಪಿ ಅಮಾನತುಗೊಳಿಸಿತ್ತು. ಅವರ ವಿರುದ್ಧ ದೇಶಾದ್ಯಂತ 10 ಪ್ರಕರಣಗಳನ್ನು ದಾಖಲಿಸಲಾಗಿದೆ.