ಮುಖ್ಯಮಂತ್ರಿ ಸ್ಥಾನಕ್ಕೆ ಸಾವಂತ್ ರಾಜೀನಾಮೆ, ಯಾರಾಗಲಿದ್ದಾರೆ ಗೋವಾದ ಮುಂದಿನ ಸಿ ಎಮ್?

ಕರಾವಳಿ ರಾಜದ್ಯಲ್ಲಿ ಬಿಜೆಪಿ ಸರ್ಕಾರ ರಚಿಸಲ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆಯಾದರೂ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ಸಾವಂತ್ ರಾಜೀನಾಮೆ, ಯಾರಾಗಲಿದ್ದಾರೆ ಗೋವಾದ ಮುಂದಿನ ಸಿ ಎಮ್?
ರಾಜೀನಾಮೆ ಸಲ್ಲಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್
Follow us
TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Mar 12, 2022 | 4:26 PM

ಪಣಜಿ: ಪುಟ್ಟ ರಾಜ್ಯ ಗೋವಾನಲ್ಲಿ (Goa) ಬಿಜೆಪಿ ಸತತ ಮೂರನೇ ಸಲ ಸರಕಾರ ರಚಿಸಲು ಅಣಿಯಾಗುತ್ತಿದ್ದಂತೆಯೇ ಪ್ರಮೋದ್ ಸಾವಂತ್ (Pramod Sawant) ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಗೋವಾ ವಿಧಾನ ಸಭೆಯ 40 ಸ್ಥಾನಗಳ ಪೈಕಿ 20 ರಲ್ಲಿ ಜಯ ಸಾಧಿಸಿರುವ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಗುರುವಾರದಂದು ಫಲಿತಾಂಶಗಳು ಪ್ರಕಟಗೊಂಡ ನಂತರ ತನ್ನ ಪ್ರಮುಖ ಮಿತ್ತಪಕ್ಷವಾಗಿರುವ ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿಯ (MGP) ಬೆಂಬಲವನ್ನೂ ಪಡೆದುಕೊಂಡಿದೆ. ಇದಲ್ಲದೆ ಈ ಬಾರಿಯ ಚುನಾವಣೆಯಲ್ಲಿ ಮೂರು ಸ್ಥಾನಗಳಲ್ಲಿ ಜಯಭೇರಿ ಬಾರಿಸಿರುವ ಮೂವರು ಪಕ್ಷೇತರ ಶಾಸಕರು ಸಹ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

‘ಗೋವಾ ಜನರ ಆಶೀರ್ವಾದಗಳಿಂದ ಬಿಜೆಪಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ ಮತ್ತು ಅಂತ್ಯೋದಯ ತತ್ವಗಳ ಆಧಾರದ ಮೇಲೆ ಆಡಳಿತ ನಡೆಸಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ಫೂರ್ತಿದಾಯಕ ನಾಯಕತ್ವದಲ್ಲಿ ಗೋವಾ ಒಂದು ಡಬಲ್ ಎಂಜಿನ್ ಸರ್ಕಾರವಾಗಿ ಮತ್ತಷ್ಟು ಅಭಿವೃದ್ಧಿಯ ಮಾರ್ಗದಲ್ಲಿ ಮುನ್ನುಗ್ಗಲಿದೆ,’ ಎಂದು ಸಾವಂತ್ ಟ್ವೀಟ್ ಮಾಡಿದ್ದಾರೆ.

ಕರಾವಳಿ ರಾಜದ್ಯಲ್ಲಿ ಬಿಜೆಪಿ ಸರ್ಕಾರ ರಚಿಸಲ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆಯಾದರೂ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಅನ್ನೋದು ಸಸ್ಪೆನ್ಸ್ ಆಗಿ ಉಳಿದಿದೆ. ಮೂಲಗಳ ಪ್ರಕಾರ ಸಾವಂತ್ ಪಕ್ಷದ ವರಿಷ್ಠರ ವಿಶ್ವಾಸ ಕಳೆದುಕೊಂಡಿದ್ದಾರೆ. ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲಾಗುವ ಸಂಕ್ವೆಲಿಮ್ ಕ್ಷೇತ್ರದಲ್ಲಿ ಸಾವಂತ್ ಕೇವಲ 666 ವೋಟುಗಳಿಂದ ಗೆಲುವು ಸಾಧಿಸಿದ್ದಾರೆ.

‘ನಾನು ಕಡಿಮೆ ಅಂತರದ ವೋಟುಗಳಿಂದ ಗೆದ್ದಿರುವುದು ನಿಜ ಆದರೆ, ಪಕ್ಷ ಬಹುಮತ ಪಡೆದಿದೆ. ಅದು ಬಹಳ ಮುಖ್ಯವಾದದ್ದು. ನಾನು ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿದ್ದರಿಂದ ನನ್ನ ಸ್ವಂತ ಮತಕ್ಷೇತ್ರದ ಕಡೆ ಗಮನ ಹರಿಸುವುದು ಸಾಧ್ಯವಾಗಲಿಲ್ಲ. ನಮ್ಮ ಕಾರ್ಯಕರ್ತರು ನನ್ನ ಪರವಾಗಿ ಪ್ರಚಾರ ನಡೆಸಿದರು,’ ಎಂದು ಅವರು ಗೆದ್ದಿರುವ ಬಗ್ಗೆ ಘೋಷಣೆಯಾಗುತ್ತಲೇ ಸಾವಂತ್ ಮಾಧ್ಯಮದವರಿಗೆ ಹೇಳಿದ್ದರು.

ಮಾಧ್ಯಮವರು ಸಾವಂತ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆಯೇ ಅಥವಾ ಪಕ್ಷ ಬೇರೆ ಯಾರನ್ನಾದರೂ ಆವರ ಸ್ಥಾನಕ್ಕೆ ಪರಿಗಣಿಸಲಿದೆಯೇ ಅಂತ ಗೋವಾದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಅವರನ್ನು ಕೇಳಿದಾಗ, ‘ನನಗೆ ಈ ಬಗ್ಗೆ ಮಾಹಿತಿ ಇಲ್ಲ. ಬಹಳ ಸೂಕ್ಷ್ಮವಾದ ಪ್ರಶ್ನೆ ಇದು. ಈಗಲೇ ಏನನ್ನೂ ಹೇಳಲಾಗದು,’ ಎಂದು ಹೇಳಿದರು.

ವಿಶ್ವಜಿತ್ ರಾಣೆ ಅವರು ಗೋವಾದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷದ ವಲಯಗಳಲ್ಲಿ ಚರ್ಚೆಯಾಗುತ್ತಿದೆ.

ಗೋವಾದಲ್ಲಿ ಪಕ್ಷದ ಯಶಸ್ಸಿನ ಶ್ರೇಯಸ್ಸು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಮತ್ತು ಅವರು ಗೋವಾದ ಅಭಿವೃದ್ಧಿಗಾಗಿ ಮಾಡಿದ ಕೆಲಸಗಳಿಗೆ ಸಲ್ಲುತ್ತದೆ. ಜನ ನನ್ನಲ್ಲಿ ವಿಶ್ವಾಸವಿರಿಸಿದ್ದಾರೆ. ಇದು ಜನತೆ ಮತ್ತು ಬಿಜೆಪಿ ನಾಯಕತ್ವಕ್ಕೆ ಸಂದಿರುವ ಜಯ. ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡಿವೆ,’ ಎಂದು ರಾಣೆ ಹೇಳಿದರು.

ರಾಣೆ ಮಾತಾಡುವಾಗ ಅವರ ಸುತ್ತ ನೆರದಿದ್ದ ಜನರು ಅವರಿಗೆ ಜಯಕಾರ ಹಾಕುತ್ತಾ ಅವರನ್ನೇ ಮುಖ್ಯಮಂತ್ರಿ ಅಂತ ಘೋಷಿಸಬೇಕೆಂದು ಪಕ್ಷದ ವರಿಷ್ಠರನ್ನು ಆಗ್ರಹಿಸಿದರು.

ಗೋವಾ ವಿಧಾನ ಸಭೆಯ ಎಲ್ಲ 40 ಸ್ಥಾನಗಳಿಗೆ ಬಿಜೆಪಿ ತನ್ನ ಉಮೇದುವಾರರನ್ನು ಕಣಕ್ಕಿಳಿಸಿತ್ತು. ಗೋವಾ ಫಾರ್ವರ್ಡ್ ಬ್ಲಾಕ್ ಪಕ್ಷವು ಕಾಂಗ್ರೆಸ್ ಪಕ್ಷದೊಂದಿಗೆ ಚುನಾವಣಾ-ಪೂರ್ವ ಮೈತ್ರಿ ಮಾಡಿಕೊಂಡಿದ್ದರೆ ಟಿ ಎಮ್ ಸಿ ಮತ್ತು ಎಮ್ ಜಿ ಪಿ ಯ ನಡುವೆ ಮೈತ್ರಿಯ ಒಪ್ಪಂದವಾಗಿತ್ತು.

ಇದನ್ನೂ ಓದಿ:  ಗೋವಾನಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಮೊದಲೇ ಕೆಪಿಸಿಸಿ ಸದಸ್ಯರು ಸರ್ಕಾರ ರಚಿಸುವ ದಾವೆ ಹೂಡಲು ಹೋಗಿದ್ದರು! ಸಿಟಿ ರವಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ