BIG NEWS: ಮಹಾರಾಷ್ಟ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಅನುಮಾನಾಸ್ಪದ ದೋಣಿ ಪತ್ತೆ
ರಾಯಗಢದ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಅನುಮಾನಾಸ್ಪದ ದೋಣಿ ಪತ್ತೆಯಾಗಿದೆ. ರಾಯಗಡದ ಹರಿಹರೇಶ್ವರ ಬೀಚ್ ಬಳಿ ಬೋಟ್‌ನಲ್ಲಿ ಕಳಚಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ: ಮಹಾರಾಷ್ಟ್ರದ ರಾಯಗಢದ ಸಮುದ್ರದಲ್ಲಿ ಶಸ್ತ್ರಾಸ್ತ್ರಗಳೊಂದಿಗೆ ಅನುಮಾನಾಸ್ಪದ ದೋಣಿ ಪತ್ತೆಯಾಗಿದೆ. ರಾಯಗಡದ ಹರಿಹರೇಶ್ವರ ಬೀಚ್ ಬಳಿ ಬೋಟ್‌ನಲ್ಲಿ ಕಳಚಿದ ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಮೀಪದ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಘಟನೆಯ ಕುರಿತು ವಿಶೇಷ ತನಿಖೆ ನಡೆಸುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿರುವುದಾಗಿ ರಾಯಗಢ ಶಾಸಕಿ ಅದಿತಿ ತಟ್ಕರೆ ಹೇಳಿದ್ದಾರೆ. ಈ ಘಟನೆಯು ಗಣೇಶ ಹಬ್ಬಕ್ಕಿಂತ ಇಂತಹ ಆಂತಕದ ವಿಚಾರ ನಡೆದಿರುವುದು ಎಲ್ಲರನ್ನೂ ಅಭ್ರದತೆಯ ಭಯವನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದರು.
ನಾಳೆ ದಹಿ ಹಂಡಿ, ಗಣೇಶೋತ್ಸವಕ್ಕೆ ಕೇವಲ 10 ದಿನಗಳು ಮಾತ್ರ ಇವೆ. ಈ ಹಬ್ಬಗಳ ಸಂದರ್ಭದಲ್ಲಿ ಜನರು ಇಲ್ಲಿಗೆ ಬರುತ್ತಾರೆ. ಈ ಕಾರಣದಿಂದ ಭದ್ರತೆಯ ವಿಚಾರ ತುಂಬಾ ಅಗತ್ಯ ಎಂದು Ms Tatkare ಸುದ್ದಿಗಾರರಿಗೆ ತಿಳಿಸಿದರು.
ಮುಂಬೈನಿಂದ 190 ಕಿಮೀ ದೂರದಲ್ಲಿರುವ ಬೋಟ್‌ನಲ್ಲಿ ಸಿಬ್ಬಂದಿ ಇಲ್ಲದಿದ್ದ ಬೋಟ್‌ನ್ನು ಕೆಲವು ಸ್ಥಳೀಯರು ಗಮನಿಸಿ ಭದ್ರತಾ ಸಂಸ್ಥೆಗಳಿಗೆ ಮಾಹಿತಿ ನೀಡಿದ್ದಾರೆ.
ರಾಯಗಢ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ದುಧೆ ಮತ್ತು ಇತರ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ದೋಣಿಯನ್ನು ಶೋಧಿಸಿದರು. ದೋಣಿಯಲ್ಲಿ ಮೂರು ಎಕೆ-47 ರೈಫಲ್‌ಗಳು ಮತ್ತು ಕೆಲವು ಬುಲೆಟ್‌ಗಳು ಪತ್ತೆಯಾಗಿದ್ದು, ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ
ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
Published On - 2:55 pm, Thu, 18 August 22