ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ ಸುವೇಂದು ಅಧಿಕಾರಿ ನೀಡಿದ ರಾಜಿನಾಮೆ ಅಂಗೀಕಾರವಾಗಿದೆ. ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕರಾಗಿದ್ದ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಮೂಡಿಸಿದೆ.

ದೀದಿ ಬಲಗೈ ಸುವೇಂದು ಅಧಿಕಾರಿ ರಾಜೀನಾಮೆ: ಪಕ್ಷದ ಬಾಗಿಲು ಸದಾ ತೆರೆದಿದೆ ಎಂದ ಬಿಜೆಪಿ
ಸಾಂದರ್ಭಿಕ ಚಿತ್ರ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Nov 28, 2020 | 1:36 PM

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಯಾಬಿನೇಟ್​ಗೆ ಸಾರಿಗೆ ಸಚಿವ, ತೃಣಮೂಲ ಕಾಂಗ್ರೆಸ್​ನ ಪ್ರಭಾವಿ ನಾಯಕ ಸುವೇಂದು ಅಧಿಕಾರಿ ರಾಜೀನಾಮೆ ನೀಡಿದ್ದಾರೆ. ಇ ಮೇಲ್ ಮೂಲಕ ಕಳಿಸಿದ ರಾಜೀನಾಮೆಯನ್ನು ಪಶ್ಚಿಮ ಬಂಗಾಳ ರಾಜ್ಯಪಾಲ ಜಗದೀಪ್ ಧನ್ ಖಾರ್​  ಅಂಗೀಕರಿಸಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಫ್ಯಾಕ್ಸ್ ಮೂಲಕ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ.

ಚಳುವಳಿ ಹಿನ್ನೆಲೆಯ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳ ಸರ್ಕಾರದಲ್ಲಿ ದೀದೀ ನಂತರ ಸುವೇಂದು ಅಧಿಕಾರಿಯವರ ಹೆಸರು ಕೇಳಿಬರುತ್ತಿತ್ತು. ನಂದಿಗ್ರಾಮ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅಧಿಕಾರಿ, 2011ರಲ್ಲಿ ಮಮತಾ ಬ್ಯಾನರ್ಜಿ ಅಧಿಕಾರ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ‘ಪಕ್ಷದ ಇತ್ತೀಚಿನ ತೀರ್ಮಾನಗಳ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ನಾನು ನೇರವಾಗಿ ಈ ಹಂತಕ್ಕೆ ತಲುಪಿಲ್ಲ. ಚಳುವಳಿ, ಹೋರಾಟಗಳು ನನ್ನನ್ನು ಬೆಳೆಸಿವೆ’ ಎಂದು ಅವರು ಹೇಳಿಕೆ ನೀಡಿದ್ದರು.

ಬಿಜೆಪಿಯಿಂದ ಆಹ್ವಾನ ಸುವೇಂದು ಅಧಿಕಾರಿಯವರ ರಾಜೀನಾಮೆ ಬೆನ್ನಲ್ಲೇ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್​ನ ಯುಗ ಮುಗಿಯುತ್ತಿದೆ. ಟಿಎಂಸಿ ತೊರೆಯುವ ಎಲ್ಲ ನಾಯಕರಿಗೂ ಬಿಜೆಪಿಗೆ ಮುಕ್ತ ಸ್ವಾಗತವಿದೆ ಎಂದು ಘೋಷಿಸಿದ್ದಾರೆ. ಅಲ್ಲದೇ, ಇನ್ನೋರ್ವ ಟಿಎಂಸಿ ಶಾಸಕ ಮಿಹಿರ್ ಗೋಸ್ವಾಮಿ ಸಹ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುವೇಂದು ಅಧಿಕಾರಿಯವರ ಮುಂದಿನ ನಡೆ ಕುತೂಹಲ ಕೆರಳಿಸಿದೆ.

ಸುವೇಂದು ಎಲ್ಲಿಗೂ ಹೋಗಲ್ಲ ಎಂದ ಟಿಎಂಸಿ ಈ ಎಲ್ಲ ರಾಜಕೀಯ ಬೆಳವಣಿಗೆಗಳಿಗೆ ಪ್ರತಿಕ್ರಿಯಿಸಿರುವ ಟಿಎಂಸಿ, ‘ಸುವೇಂದು ಅಧಿಕಾರಿ ಎಂದಿಗೂ ಪಕ್ಷ ತೊರೆಯುವುದಿಲ್ಲ. ಅವರ ಬಿಜೆಪಿ ಸೇರ್ಪಡೆ ಸುದ್ದಿಗಳು ಕೇವಲ ಊಹಾಪೋಹಗಳಷ್ಟೇ. ಅವರ ಅಸಮಾಧಾನವನ್ನು ಸದ್ಯದಲ್ಲೇ ಪರಿಹರಿಸಲಾಗುವುದು’ ಎಂದು ತಿಳಿಸಿದೆ.

ಜೊತೆಗೆ, 2021ರ ಎಪ್ರಿಲ್-ಮೇಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗಾಗಿ ಡಿಸೆಂಬರ್ 7ರಿಂದ ಮಮತಾ ಬ್ಯಾನರ್ಜಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಭೇಟಿ ನೀಡಲಿದ್ದಾರೆ ಎಂದು ಟಿಎಂಸಿ ವಕ್ತಾರರು ತಿಳಿಸಿದ್ದಾರೆ.

ಇದನ್ನೂ ಓದಿ:  ತಾಕತ್ತಿದ್ದರೆ ಅರೆಸ್ಟ್ ಮಾಡಿ, ಜೈಲಲ್ಲಿ ಇದ್ದುಕೊಂಡೇ ನನ್ನ ಪಕ್ಷವನ್ನು ಗೆಲ್ಲಿಸುತ್ತೇನೆ; ಬಿಜೆಪಿಗೆ ದೀದಿ ಓಪನ್​ ಚಾಲೆಂಜ್

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ