AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಸುವೇಂದು ಅಧಿಕಾರಿ ತಂದೆ, ಟಿಎಂಸಿ ಸಂಸದ ಶಿಶಿರ್ ಅಧಿಕಾರಿ

West Bengal Assembly Elections 2021: ಪ್ರಸ್ತುತ ಟಿಎಂಸಿ ಪಕ್ಷದ ಸಂಸದರಾಗಿರುವ ಶಿಶಿರ್ ಅಧಿಕಾರಿ, ಟಿಎಂಸಿಯ ಸ್ಥಾಪಕ ಸದಸ್ಯರೂ ಆಗಿದ್ದಾರೆ. ಇತ್ತೀಚೆಗಷ್ಟೇ ಶಿಶಿರ್ ಅಧಿಕಾರಿ ಪುತ್ರ ಸುವೇಂದು ಅಧಿಕಾರಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು.

ಶೀಘ್ರದಲ್ಲೇ ಬಿಜೆಪಿ ಸೇರಲಿದ್ದಾರೆ ಸುವೇಂದು ಅಧಿಕಾರಿ ತಂದೆ, ಟಿಎಂಸಿ ಸಂಸದ ಶಿಶಿರ್ ಅಧಿಕಾರಿ
ಶಿಶಿರ್ ಅಧಿಕಾರಿ
TV9 Web
| Updated By: ganapathi bhat|

Updated on:Apr 06, 2022 | 7:00 PM

Share

ಕೊಲ್ಕತ್ತಾ: ಶೀಘ್ರದಲ್ಲೇ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮೊದಲು ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಮತ್ತೊಂದು ಅಚ್ಚರಿಯ ವಿದ್ಯಮಾನ ಘಟಿಸುವ ಸೂಚನೆ ಲಭ್ಯವಾಗಿದೆ. ಪಶ್ಚಿಮ ಬಂಗಾಳ ಹಾಗೂ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಹಿರಿಯ ರಾಜಕಾರಣಿ ಶಿಶಿರ್ ಅಧಿಕಾರಿ ಬಿಜೆಪಿ ಸೇರುವ ಸೂಚನೆ ನೀಡಿದ್ದಾರೆ. ಮಾರ್ಚ್ 24ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಅವರು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.

ಪ್ರಸ್ತುತ ಟಿಎಂಸಿ ಪಕ್ಷದ ಸಂಸದರಾಗಿರುವ ಶಿಶಿರ್ ಅಧಿಕಾರಿ, ಟಿಎಂಸಿಯ ಸ್ಥಾಪಕ ಸದಸ್ಯರೂ ಆಗಿದ್ದಾರೆ. ಇತ್ತೀಚೆಗಷ್ಟೇ ಶಿಶಿರ್ ಅಧಿಕಾರಿ ಪುತ್ರ ಸುವೇಂದು ಅಧಿಕಾರಿ ಟಿಎಂಸಿ ತೊರೆದು ಬಿಜೆಪಿ ಸೇರಿದ್ದರು. ಆ ಬಳಿಕ, ಟಿಎಂಸಿಯ ಹಲವು ಶಾಸಕರು, ಸ್ಥಳೀಯ ನಾಯಕರು ಬಿಜೆಪಿ ಸೇರಿದ್ದರು. ಇದೀಗ ಶಿಶಿರ್ ಕೂಡ ಬಿಜೆಪಿ ಸೇರುವ ನಿರ್ಧಾರ ಹೇಳಿಕೊಂಡಿರುವುದು ಮಮತಾ ಬ್ಯಾನರ್ಜಿ ಮೇಲೆ ಒತ್ತಡ ಹೆಚ್ಚಿಸಲಿದೆ.

ಮಮತಾ ಬ್ಯಾನರ್ಜಿ ನಾಟಕ ಮಾಡುತ್ತಿದ್ದಾರೆ ಹಾಗೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಶಿಶಿರ್ ಆಧಿಕಾರಿ ತಿಳಿಸಿರುವ ಬಗ್ಗೆ ಆಂಗ್ಲ ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಾಗೂ ಟಿಎಂಸಿ ನಡುವೆ ನೇರ ಜಿದ್ದಾಜಿದ್ದಿ ಇದ್ದು ಚುನಾವಣಾ ಕಣ ರಂಗೇರುತ್ತಿದೆ. ಪಟ್ಟಭದ್ರ ಟಿಎಂಸಿ ಪಕ್ಷವನ್ನು ಹೊಡೆದುರುಳಿಸಲು ಬಿಜೆಪಿ ಶತಪ್ರಯತ್ನ ನಡೆಸುತ್ತಿದೆ. ಟಿಎಂಸಿ ಕೂಡ ಇನ್ನೊಮ್ಮೆ ಅಧಿಕಾರಕ್ಕೇರುವ ಉತ್ಸಾಹ ತೋರಿದೆ.

ಇಬ್ಬರು ಸಹೋದರರು ಈಗಾಗಲೇ ಟಿಎಂಸಿ ತೊರೆದು ಬಿಜೆಪಿ ಸೇರಿದ್ದಾರೆ ಶಿಶಿರ್ ಅಧಿಕಾರಿ ಮಕ್ಕಳಿಬ್ಬರು ಈಗಾಗಲೇ ತೃಣಮೂಲ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಸುವೇಂದು ಅಧಿಕಾರಿ ಮತ್ತು ಸೌಮೇಂದು ಅಧಿಕಾರಿ ಬಿಜೆಪಿ ಪಕ್ಷ ಸೇರಿದ್ದಾರೆ. ಶಿಶಿರ್ ಅಧಿಕಾರಿ ಮತ್ತೊಬ್ಬ ಪುತ್ರ ದಿವ್ಯೇಂದು ಅಧಿಕಾರಿ ಸದ್ಯ ತೃಣಮೂಲ ಕಾಂಗ್ರೆಸ್ ಲೋಕಸಭಾ ಸದಸ್ಯರಾಗಿಯೇ ಇದ್ದಾರೆ. ನನಗೆ ಆಮಂತ್ರಣ ಬಂದರೆ, ನನ್ನ ಮಕ್ಕಳು ಒಪ್ಪಿದರೆ, ನಾನು ಮೋದಿಯ ಸಾರ್ವಜನಿಕ ಪ್ರಚಾರ ಸಭೆಯಲ್ಲಿ ಭಾಗವಹಿಸುವೆ ಎಂದು ಇವರೆಲ್ಲರ ತಂದೆ ಆಗಿರುವ ಶಿಶಿರ್ ಅಧಿಕಾರಿ ಭಾನುವಾರ ತಿಳಿಸಿದ್ದರು.

ಇದಕ್ಕೂ ಮುನ್ನ ನಡೆದ ಬೆಳವಣಿಗೆಯಲ್ಲಿ ಬಿಜೆಪಿ ಲೋಕಸಭಾ ಸದಸ್ಯೆ ಲಾಕೆಟ್ ಚಟರ್ಜಿ ಶನಿವಾರ, ಶಿಶಿರ್ ಅಧಿಕಾರಿ ನಿವಾಸಕ್ಕೆ ತೆರಳಿದ್ದರು. ಜೊತೆಯಾಗಿ ಊಟವನ್ನೂ ಸವಿದಿದ್ದರು. ಅವರಿಬ್ಬರೂ ತಮ್ಮದು ಸೌಜನ್ಯದ ಭೇಟಿ ಎಂದು ವಿವರಿಸಿದ್ದರೂ ಸಾರ್ವಜನಿಕ ವಲಯದಲ್ಲಿ ರಾಜಕೀಯ ಗುಲ್ಲೆದ್ದಿತ್ತು. ಇದೀಗ ಲಭ್ಯವಾಗಿರುವ ಮಾಹಿತಿಯಂತೆ ಶಿಶಿರ್ ಅಧಿಕಾರಿ ಜೊತೆಗೆ, ಸುವೇಂದು ಸಹೋದರ ಕೂಡ ಬಿಜೆಪಿ ಪಕ್ಷ ಸೇರುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ತಿಂಗಳಿನಿಂದ ಅವರು ತೃಣಮೂಲ ಕಾಂಗ್ರೆಸ್​ನ ಚಟುವಟಿಕೆಗಳಲ್ಲಿ ಅಷ್ಟಾಗಿ ಕ್ರಿಯಾಶೀಲರಾಗಿಲ್ಲದೇ ಇರುವುದು, ಚುನಾವಣಾ ಪ್ರಚಾರದಲ್ಲೂ ಪರಿಣಾಮಕಾರಿಯಾಗಿ ಕಾಣಿಸಿಕೊಳ್ಳದಿರುವುದು ಈ ಅನುಮಾನಗಳು ದಟ್ಟವಾಗುವಂತೆ ಮಾಡಿದೆ.

ಇದನ್ನೂ ಓದಿ: West Bengal Elections 2021: ಪಶ್ಚಿಮ ಬಂಗಾಳದಲ್ಲಿ Tv9 ಚುನಾವಣಾ ಪೂರ್ವ ಸಮೀಕ್ಷೆ, ಮಮತಾ ಮುಂದೆ

ರಾಜಕೀಯ ವಿಶ್ಲೇಷಣೆ | ಪಶ್ಚಿಮ ಬಂಗಾಳದಲ್ಲಿ ಹಾಲಿ ಸಂಸದರು, ಅರ್ಥಶಾಸ್ತ್ರಜ್ಞ, ಸಿನಿಮಾ ತಾರೆಯರನ್ನು ಕಣಕ್ಕಿಳಿಸಿದ ಬಿಜೆಪಿ

Published On - 5:28 pm, Fri, 19 March 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!