Swachh Bharat: ಪ್ರಗತಿ ಮೈದಾನ್ ಸುರಂಗ ಮಾರ್ಗ ಉದ್ಘಾಟನೆ ವೇಳೆ ಬರಿಗೈಲಿ ಕಸ ಹೆಕ್ಕಿ ಸ್ವಚ್ಛ ಭಾರತ್ ಸಂದೇಶ ರವಾನಿಸಿದ ಮೋದಿ

PM Narendra Modi: ಸ್ವಚ್ಛ ಭಾರತ್ ಮಿಷನ್​ ಆಶಯಕ್ಕೆ ಪೂರಕವಾಗಿ ಹಲವು ಬಾರಿ ನಡೆದುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ತಾವೇ ಉತ್ತಮ ಮಾದರಿಯೂ ಆಗಿದ್ದಾರೆ.

Swachh Bharat: ಪ್ರಗತಿ ಮೈದಾನ್ ಸುರಂಗ ಮಾರ್ಗ ಉದ್ಘಾಟನೆ ವೇಳೆ ಬರಿಗೈಲಿ ಕಸ ಹೆಕ್ಕಿ ಸ್ವಚ್ಛ ಭಾರತ್ ಸಂದೇಶ ರವಾನಿಸಿದ ಮೋದಿ
ಪ್ರಗತಿ ಮೈದಾನ್ ಸುರಂಗದಲ್ಲಿ ಕಸ ಹೆಕ್ಕಿದ ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 19, 2022 | 1:44 PM

ದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈ ಹಿಂದೆಯೂ ಹಲವು ಬಾರಿ ತಮ್ಮ ಸ್ವಚ್ಛ ಭಾರತ್ ಮಿಷನ್ (Swachh Bharat Mission) ಕನಸು ಹಂಚಿಕೊಂಡಿದ್ದಾರೆ. ಅದಕ್ಕೆ ಪೂರಕವಾಗಿ ಹಲವು ಬಾರಿ ನಡೆದುಕೊಂಡು ತಾವೇ ಉತ್ತಮ ಮಾದರಿಯೂ ಆಗಿದ್ದಾರೆ. ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ದೆಹಲಿಯ ಪ್ರಗತಿ ಮೈದಾನ್ ಸುರಂಗ ಮಾರ್ಗವನ್ನು (Pragati Maidan Integrated Transit Corridor) ಭಾನುವಾರ ಪ್ರಧಾನಿ ನರೇಂದ್ರ ಮೋದಿ ಪರಿಶೀಲಿಸಿದರು. ಈ ವೇಳೆ ರಸ್ತೆಯ ಬದಿಯಲ್ಲಿ ಸಿಕ್ಕ ಕೆಲ ಚಿಂದಿ, ಖಾಲಿ ನೀರಿನ ಬಾಟಲಿಯನ್ನು ಕೈಲಿ ಎತ್ತಿಕೊಂಡು ಕಸದ ಡಬ್ಬಿಗೆ ಹಾಕಿದರು. ಪ್ರಗತಿ ಮೈದಾನ್ ಸುರಂಗ ಮಾರ್ಗವು ಇಂದಿನಿಂದ ಸಾರ್ವಜನಿಕರಿಗೆ ಮುಕ್ತವಾಗಿದೆ.

ನರೇಂದ್ರ ಮೋದಿ ಸುರಂಗ ಮಾರ್ಗ ಪರಿಶೀಲಿಸುವ ವಿಡಿಯೊ ತುಣುಕನ್ನು ಎಎನ್​ಐ ಹಂಚಿಕೊಂಡಿದೆ. ಕಳೆದ ತಿಂಗಳ ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಚಾರ್ ಧಾಮ್ ಯಾತ್ರಾ ಸೇರಿದಂತೆ ವಿವಿಧ ಪವಿತ್ರ ಕ್ಷೇತ್ರಗಳಲ್ಲಿ ಕಸ ಹೆಚ್ಚಾಗುತ್ತಿರುವುದು ಹಾಗೂ ಪ್ರವಾಸಿಗರು ಎಲ್ಲೆಂದರಲ್ಲಿ ಕಸ ಹಾಕುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು.

ಪ್ರಗತಿ ಮೈದಾನ್ ಮರು ನಿರ್ಮಾಣ ಯೋಜನೆಯ ಭಾಗವಾಗಿ ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಿದರು. ಪ್ರಗತಿ ಮೈದಾನ್ ಸುರಂಗ ಮಾರ್ಗವು 1.6 ಕಿಮೀ ಉದ್ದವಿದೆ. ವಾಹನ ಸವಾರರು ಇಂಡಿಯಾ ಗೇಟ್​ನಿಂದ ಕೇಂದ್ರ ದೆಹಲಿಗೆ ಸಂಪರ್ಕ ಕಲ್ಪಿಸುತ್ತದೆ. ಇದರಿಂದಾಗಿ ಪೂರ್ವ ದೆಹಲಿ, ನೊಯ್ಡಾ ಮತ್ತು ಗಾಜಿಯಾಬಾದ್​ ಕಡೆಗೆ ತೆರಳುವವರು ಐಟಿಒ, ಮಥುರಾ ರಸ್ತೆ ಮತ್ತು ಭೈರಾನ್ ಮಾರ್ಗ್​​ಗಳ ಟ್ರಾಫಿಕ್ ಜಂಜಡದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತದೆ.

ಪ್ರಗತಿ ಮೈದಾನ್ ಸಮಗ್ರ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಸುರಂಗ ಮಾರ್ಗವನ್ನು ₹ 920 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರವು ಈ ಯೋಜನೆಯ ಸಂಪೂರ್ಣ ವೆಚ್ಚವನ್ನು ಭರಿಸಿದೆ. ವ್ಯಾಪಾರ ಮೇಳಗಳನ್ನು ಆಯೋಜಿಸುವವರಿಗೆ ನೆರವಾಗಲೆಂದು ವಿಶ್ವಮಟ್ಟದ ಪ್ರದರ್ಶನ ಕೇಂದ್ರವನ್ನು ಇಲ್ಲಿ ಕೇಂದ್ರ ಸರ್ಕಾರ ಪ್ರಗತಿ ಮೈದಾನದಲ್ಲಿ ರೂಪಿಸಿದೆ. ಈ ಹೊಸ ಯೋಜನೆಯಿಂದ ಗ್ರಾಹಕರು ಮತ್ತು ವ್ಯಾಪಾರಿಗಳಿಗೆ ಹಲವು ಅನುಕೂಲಗಳು ಒದಗಲಿವೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:44 pm, Sun, 19 June 22

ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ವಕ್ಪ್ ಕಾಯ್ದೆಗೆ ತಿದ್ದುಪಡಿ ಬರುವವರೆಗೆ ಹೋರಾಟ ನಿಲ್ಲದು: ಶೋಭಾ ಕರಂದ್ಲಾಜೆ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ
ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ