Swachhata Hi Seva: ಬನ್ನಿ ದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿಸೋಣ: ಹಮೀಪುರದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಶ್ರಮದಾನ

|

Updated on: Oct 01, 2023 | 3:27 PM

ಗಾಂಧಿ ಜಯಂತಿ(Gandhi Jayanti) ಹಿನ್ನೆಲೆಯಲ್ಲಿ ‘ಸ್ವಚ್ಛತಾ ಅಭಿಯಾನ'ದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ 'ಸ್ವಚ್ಛತಾ ಹಿ ಸೇವಾ' ಅಭಿಯಾನದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur) ಪಾಲ್ಗೊಂಡರು. ಸ್ವಚ್ಛತಾ ಅಭಿಯಾನದ ಅಡಿಯಲ್ಲಿ ಅನುರಾಗ್ ಠಾಕೂರ್ ಅವರು ಹಿಮಾಚಲ ಪ್ರದೇಶದ ತಮ್ಮ ಸಂಸದೀಯ ಕ್ಷೇತ್ರವಾದ ಹಮೀರ್‌ಪುರವನ್ನು ಸ್ವಚ್ಛಗೊಳಿಸಿದರು. ಸಾರ್ವಜನಿಕರು ಅದರಲ್ಲೂ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಪ್ರಧಾನಿ ಮೋದಿಯವರ ಕರೆಯ ಮೇರೆಗೆ ಇಂದು ಸ್ವಚ್ಛತಾ ಅಭಿಯಾನವು ಸಾಮೂಹಿಕ ಆಂದೋಲನವಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.

Swachhata Hi Seva: ಬನ್ನಿ ದೇಶವನ್ನು ಸ್ವಚ್ಛ ಹಾಗೂ ಸುಂದರವಾಗಿಸೋಣ: ಹಮೀಪುರದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಶ್ರಮದಾನ
ಅನುರಾಗ್ ಠಾಕೂರ್
Follow us on

ಗಾಂಧಿ ಜಯಂತಿ(Gandhi Jayanti) ಹಿನ್ನೆಲೆಯಲ್ಲಿ ‘ಸ್ವಚ್ಛತಾ ಅಭಿಯಾನ’ದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್(Anurag Thakur) ಪಾಲ್ಗೊಂಡರು. ಸ್ವಚ್ಛತಾ ಅಭಿಯಾನದ ಅಡಿಯಲ್ಲಿ ಅನುರಾಗ್ ಠಾಕೂರ್ ಅವರು ಹಿಮಾಚಲ ಪ್ರದೇಶದ ತಮ್ಮ ಸಂಸದೀಯ ಕ್ಷೇತ್ರವಾದ ಹಮೀರ್‌ಪುರವನ್ನು ಸ್ವಚ್ಛಗೊಳಿಸಿದರು. ಸಾರ್ವಜನಿಕರು ಅದರಲ್ಲೂ ಯುವಕರು ಸ್ವಚ್ಛತಾ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಪ್ರಧಾನಿ ಮೋದಿಯವರ ಕರೆಯ ಮೇರೆಗೆ ಇಂದು ಸ್ವಚ್ಛತಾ ಅಭಿಯಾನವು ಸಾಮೂಹಿಕ ಆಂದೋಲನವಾಗಿದೆ ಎಂದು ಅನುರಾಗ್ ಠಾಕೂರ್ ಹೇಳಿದರು.

ಜನರ ನಡವಳಿಕೆ ಬದಲಾಗಿದೆ

ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅನುರಾಗ್ ಠಾಕೂರ್, ಇಂದು ಸ್ವಚ್ಛತೆಗೆ ಸಂಬಂಧಿಸಿದಂತೆ ಜನರ ನಡವಳಿಕೆ ಮತ್ತು ಸ್ಥಳಗಳಲ್ಲಿ ಬದಲಾವಣೆ ಕಾಣುತ್ತಿದೆ. ಇಂದು ತಮ್ಮ ಸಂಸದೀಯ ಕ್ಷೇತ್ರದ ಹಮೀರ್‌ಪುರದಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮದಡಿಯಲ್ಲಿ ನಡೆಯುತ್ತಿರುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ವಾರದಲ್ಲಿ ಕನಿಷ್ಠ ಎರಡು ಗಂಟೆ ಸ್ವಚ್ಛತೆಗೆ ಮೀಸಲಿಡಬೇಕು

“ದೇಶದ ಪ್ರತಿಯೊಬ್ಬ ನಾಗರಿಕರು ಇಂದು ಒಂದು ಗಂಟೆ ತಮ್ಮ ಶ್ರಮವನ್ನು ಸ್ವಚ್ಛತೆಗಾಗಿ ಮೀಸಲಿಟ್ಟಿದ್ದಾರೆ. ಭವಿಷ್ಯದಲ್ಲಿ ನಾವು ವಾರದಲ್ಲಿ ಕನಿಷ್ಠ ಎರಡು ಗಂಟೆಗಳನ್ನು ಸ್ವಚ್ಛತಾ ಅಭಿಯಾನಕ್ಕೆ ನೀಡುತ್ತೇವೆ ಎಂದು ಪ್ರತಿಜ್ಞೆ ಮಾಡುತ್ತೇನೆ ಎಂದು ನನಗೆ ಸಂಪೂರ್ಣ ನಂಬಿಕೆ ಇದೆ” ಎಂದು ಹೇಳಿದರು.

ಅನುರಾಗ್ ಠಾಕೂರ್ ಮಾತು

ಒಂದು ವರ್ಷದಲ್ಲಿ ನಾವು 100 ಗಂಟೆಗಳಿಗಿಂತ ಹೆಚ್ಚು ಸಮಯವನ್ನು ಸ್ವಚ್ಛತಾ ಅಭಿಯಾನದಲ್ಲಿ ಕಳೆಯುತ್ತೇವೆ. ಕಳೆದ ವರ್ಷ ನಡೆಸಿದ ಅಭಿಯಾನದ ಬಳಿಕ ಜನರು ಎಲ್ಲೆಂದರಲ್ಲಿ ಕಸವನ್ನು ಎಸೆಯುವುದನ್ನು ಕಡಿಮೆ ಮಾಡಿದ್ದಾರೆ. ದೇಶದ ಜನತೆ ಅಸಾಧ್ಯವಾದುದನ್ನು ಸಾಧ್ಯವಾಗಿಸಿದ್ದಾರೆ ಎಂದರು.

Swachh Bharat Mission: ಪ್ರಧಾನಿ ಮೋದಿಯಿಂದ ಶ್ರಮದಾನ, ದೇಶದೆಲ್ಲೆಡೆ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು, ನಾಗರಿಕರು

ನರೇಂದ್ರ ಮೋದಿ ಸ್ವಚ್ಛತಾ ಅಭಿಯಾನ ನಡೆಸಿದರು
ಪಿಎಂ ಮೋದಿ ಅವರು ಇಂದು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ. ಮನ್​ ಕಿ ಬಾತ್​ನಲ್ಲಿ ಅಕ್ಟೋಬರ್ 1 ರಂದು ಒಂದು ಗಂಟೆಗಳ ಕಾಲ ಎಲ್ಲರೂ ಶ್ರಮದಾನ ಮಾಡುವಂತೆ ದೇಶದ ಜನತೆಯಲ್ಲಿ ಮನವಿ ಮಾಡಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Sun, 1 October 23