ದೆಹಲಿ ಜುಲೈ 08: ಲೋಕಸಭೆಯಲ್ಲಿ ರಾಹುಲ್ ಗಾಂಧಿ (Rahul Gandhi) ಅವರ ಅಬ್ಬರದ ಭಾಷಣದ ನಂತರ, ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ (Swami Avimukteshwarananda) ಅವರು ಕಾಂಗ್ರೆಸ್ (Congress) ನಾಯಕರ ಬೆಂಬಲಕ್ಕೆ ನಿಂತಿದ್ದಾರೆ. ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಬಿಜೆಪಿ ನಾಯಕರು ಜನರನ್ನು ಕೋಮುವಾದದ ಆಧಾರದ ಮೇಲೆ ವಿಭಜಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.
ಭಾಷಣವನ್ನು ಖಂಡಿಸಿದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಗಾಂಧಿ ಅವರು “ಇಡೀ ಹಿಂದೂ ಸಮುದಾಯವನ್ನು ಹಿಂಸಾ ಪ್ರವೃತ್ತಿಯವರು” ಎಂದು ದೂಷಿಸಿದ್ದಾರೆ ಎಂದು ಹೇಳಿದ್ದರು. ಈ ಆರೋಪವು ಸಂಸತ್ತಿನಲ್ಲಿ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದ್ದಲ್ಲದೆ ಸ್ಪೀಕರ್ ಅವರು ದಾಖಲೆಗಳಿಂದ ಹಲವಾರು ವಿವಾದಾತ್ಮಕ ಹೇಳಿಕೆಗಳನ್ನು ತೆಗೆದುಹಾಕಿದ್ದರು.
We heard Rahul Gandhi’s entire speech. He is clearly saying that there is no place for violence in Hinduism.
Rahul Gandhi is not saying anything contrary to Hinduism anywhere.
Spreading half of Rahul Gandhi’s statement is a crime.
: Shankaracharya Swami Avimukteshwarananda Ji pic.twitter.com/1ug2LJLtxs
— J&K Congress (@INCJammuKashmir) July 7, 2024
ಇದೀಗ ಹಿಂದೂಗಳಲ್ಲಿ ಗೌರವಾನ್ವಿತ ವ್ಯಕ್ತಿಯಾಗಿದ್ದ ಶಂಕರಾಚಾರ್ಯರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ನಾವು ಗಮನವಿಟ್ಟು ಆಲಿಸಿದ್ದೇವೆ. ಹಿಂದೂ ಧರ್ಮ ಹಿಂಸೆಯನ್ನು ತಿರಸ್ಕರಿಸುತ್ತದೆ ಎಂದು ಅವರು ನಿಸ್ಸಂದಿಗ್ಧವಾಗಿ ಒತ್ತಿಹೇಳುತ್ತಾರೆ” ಎಂದು ಹೇಳಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ, ಮಠಾಧೀಶರು ರಾಹುಲ್ ಗಾಂಧಿಯವರ ಭಾಷಣದ ಆಯ್ದ ಪ್ರಸಾರವನ್ನು ಟೀಕಿಸಿದ್ದಾರೆ. ರಾಹುಲ್ ಗಾಂಧಿ ಹೇಳಿಕೆಯ ತುಣುಕುಗಳನ್ನು ಮಾತ್ರ ಪ್ರಸ್ತುತಪಡಿಸುವುದು ತಪ್ಪುದಾರಿಗೆಳೆಯುತ್ತದೆ. ಅದೇ ವೇಳೆ ಅದು ಅನೈತಿಕವಾಗಿದೆ” ಇದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: Rahul Gandhi: ಅಸ್ಸಾಂನಲ್ಲಿ ನಿರಾಶ್ರಿತ ಮಣಿಪುರ ನಿವಾಸಿಗಳನ್ನು ಭೇಟಿ ಮಾಡಿದ ರಾಹುಲ್ ಗಾಂಧಿ
ಕಾಂಗ್ರೆಸ್ ಸಂಸದೆ ಹಾಗೂ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಕೂಡ ತಮ್ಮ ಸಹೋದರನ ಆರೋಪವನ್ನು ಸಮರ್ಥಿಸಿಕೊಂಡಿದ್ದಾರೆ. “ರಾಹುಲ್ ಎಂದಿಗೂ ಹಿಂದೂಗಳ ವಿರುದ್ಧ ಮಾತನಾಡಲು ಸಾಧ್ಯವಿಲ್ಲ, ಅವರ ಹೇಳಿಕೆಗಳು ಬಿಜೆಪಿ ಮತ್ತು ಅದರ ನಾಯಕರನ್ನು ಗುರಿಯಾಗಿರಿಸಿಕೊಂಡಿವೆ” ಎಂದು ಪ್ರಿಯಾಂಕಾ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ