AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ 3 ದಿನಗಳ ಪೊಲೀಸ್ ಕಸ್ಟಡಿಗೆ

ಪ್ರಕರಣದಲ್ಲಿ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದ ಒಂದು ದಿನದ ನಂತರ ನ್ಯಾಯಾಲಯದಿಂದ ಈ ಆದೇಶ ಬಂದಿದೆ. ಎಫ್‌ಐಆರ್ ದಾಖಲಿಸುವಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರು ಯಾವುದೇ "ಪೂರ್ವತಯಾರಿ" ಮಾಡಿಲ್ಲ ಮತ್ತು ಅವರ ಆರೋಪಗಳನ್ನು "ತಳ್ಳಿ ಹಾಕಲು" ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಸ್ವಾತಿ ಮಲಿವಾಲ್ ಪ್ರಕರಣ: ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್ 3 ದಿನಗಳ ಪೊಲೀಸ್ ಕಸ್ಟಡಿಗೆ
ಬಿಭವ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on: May 28, 2024 | 8:19 PM

Share

ದೆಹಲಿ ಮೇ 28: ಸ್ವಾತಿ ಮಲಿವಾಲ್ (Swati Maliwal assault case) ಆಪಾದಿತ ಹಲ್ಲೆ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಸಹಾಯಕ ಬಿಭವ್ ಕುಮಾರ್ (Bibhav Kumar) ಅವರನ್ನು ದೆಹಲಿಯ ತೀಸ್ ಹಜಾರಿ ಕೋರ್ಟ್ ಮಂಗಳವಾರ ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಆದೇಶಿಸಿದೆ. ದೆಹಲಿ ಪೊಲೀಸರು ಆರೋಪಿಯನ್ನು ಐದು ದಿನಗಳ ಕಸ್ಟಡಿಗೆ ಕೋರಿದ್ದರು. ಕುಮಾರ್ ಅವರ ವಕೀಲರು ದೆಹಲಿ ಪೊಲೀಸರ ಮನವಿಯನ್ನು ವಿರೋಧಿಸಿ ಕಸ್ಟಡಿ ವಿಚಾರಣೆಗೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದರು. ಪ್ರಕರಣದಲ್ಲಿ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ತಿರಸ್ಕರಿಸಿದ ಒಂದು ದಿನದ ನಂತರ ನ್ಯಾಯಾಲಯದಿಂದ ಈ ಆದೇಶ ಬಂದಿದೆ. ಎಫ್‌ಐಆರ್ ದಾಖಲಿಸುವಲ್ಲಿ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಅವರು ಯಾವುದೇ “ಪೂರ್ವ ತಯಾರಿ” ಮಾಡಿಲ್ಲ ಮತ್ತು ಅವರ ಆರೋಪಗಳನ್ನು “ತಳ್ಳಿ ಹಾಕಲು” ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

“ಸಂತ್ರಸ್ತೆ ಮಾಡಿರುವ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅವುಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ. ಎಫ್‌ಐಆರ್ ದಾಖಲಿಸುವಲ್ಲಿ ಕೇವಲ ವಿಳಂಬವು ಪ್ರಕರಣದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಏಕೆಂದರೆ ನಾಲ್ಕು ದಿನಗಳ ನಂತರ ಗಾಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ ಎಂದು ಅಡಿಷನಲ್ ಸೆಷನ್ಸ್ ನ್ಯಾಯಾಧೀಶ ಸುಶೀಲ್ ಅನುಜ್ ತ್ಯಾಗಿ ಹೇಳಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ, ಬಿಭವ್ ಕುಮಾರ್ ಪರ ವಕೀಲ ಎನ್ ಹರಿಹರನ್, ಮೇ 13 ರಂದು ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ನಡೆದ ಘಟನೆಯ ನಂತರ ಮೇ 16 ರಂದು ತನ್ನ ಕಕ್ಷಿದಾರನ ವಿರುದ್ಧ ‘ಸಂಚು ಮಾಡಿ ಹೆಣೆದ’ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ವಾದಿಸಿದರು.

ಎಫ್‌ಐಆರ್‌ನ ಪ್ರಕಾರ, ಮೇ 13 ರಂದು ಸಿಎಂ ನಿವಾಸದಲ್ಲಿ ಕುಮಾರ್ ಯಾವುದೇ ಪ್ರಚೋದನೆಯಿಲ್ಲದೆ ತನಗೆ ಏಳರಿಂದ ಎಂಟು ಬಾರಿ ಕಪಾಳಮೋಕ್ಷ ಮಾಡಿದ್ದಾರೆ ಎಂದು ಮಲಿವಾಲ್ ಆರೋಪಿಸಿದ್ದಾರೆ. ಕೇಜ್ರಿವಾಲ್ ಅವರ ಆಪ್ತ “ತನಗೆ ಕಪಾಳಮೋಕ್ಷ ಮಾಡಿದರು, ಎದೆ ಮತ್ತು ಸೊಂಟಕ್ಕೆ ಒದ್ದು ಉದ್ದೇಶಪೂರ್ವಕವಾಗಿ ತನ್ನ ಅಂಗಿಯನ್ನು ಎಳೆದರು.” ಎಂದು ಎಫ್ಐಆರ್ ನಲ್ಲಿ ಹೇಳಲಾಗಿದೆ.

ಬಿಭವ್ ಕುಮಾರ್ ಅವರನ್ನು ಮೇ 18 ರಂದು ಬಂಧಿಸಿದ್ದು, ಅದೇ ದಿನ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿತು, ಅವರ ಬಂಧನದಿಂದಾಗಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯು ನಿರುಪಯುಕ್ತವಾಗಿದೆ ಎಂದ ಕೋರ್ಟ್, ಕಳೆದ ಶುಕ್ರವಾರ ಅವರನ್ನು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಇದನ್ನೂ ಓದಿ: ರಾಮಭಕ್ತ ಮಾತ್ರ ದೆಹಲಿ ಸಿಂಹಾಸನ ಆಳುತ್ತಾನೆ; ಗೋರಖ್‌ಪುರದಲ್ಲಿ ಯೋಗಿ ಆದಿತ್ಯನಾಥ್ ಘರ್ಜನೆ

ಕುಮಾರ್ ವಿರುದ್ಧ ಎಫ್‌ಐಆರ್ ಅನ್ನು ಮೇ 16 ರಂದು ವಿವಿಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ದಾಖಲಿಸಲಾಗಿದೆ, ಇದರಲ್ಲಿ ಕ್ರಿಮಿನಲ್ ಬೆದರಿಕೆ, ಹಲ್ಲೆ ಅಥವಾ ಕ್ರಿಮಿನಲ್ ಬಲದಿಂದ ಮಹಿಳೆಯ ದೌರ್ಜನ್ಯ ಮತ್ತು ನರಹತ್ಯೆಗೆ ಪ್ರಯತ್ನ ಆರೋಪ ಹೊರಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು