Swati Maliwal case: ಸ್ವಾತಿ ಮಲಿವಾಲ್ ಪ್ರಕರಣ ಬಗ್ಗೆ ಮೌನ ಮುರಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್

ಬುಧವಾರ ಪಿಟಿಐ ಸಂದರ್ಶನದಲ್ಲಿ, ಈ ವಿಷಯ ಕಾನೂನಿನ ಮುಂದೆ ಇದೆ.ನನ್ನ ಹೇಳಿಕೆಯು ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದು. ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ಈ ಪ್ರಕರಣದಲ್ಲಿ ನ್ಯಾಯವನ್ನು ಒದಗಿಸಬೇಕು. ಘಟನೆಯ ಎರಡು ಆವೃತ್ತಿಗಳಿವೆ. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ಮಾಡಬೇಕು ಮತ್ತು ನ್ಯಾಯವನ್ನು ನೀಡಬೇಕು ಎಂದು ಕೇಜ್ರಿವಾಲ್ ಹೇಳಿದ್ದಾರೆ.

Swati Maliwal case: ಸ್ವಾತಿ ಮಲಿವಾಲ್ ಪ್ರಕರಣ ಬಗ್ಗೆ ಮೌನ ಮುರಿದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Follow us
ರಶ್ಮಿ ಕಲ್ಲಕಟ್ಟ
|

Updated on:May 22, 2024 | 7:21 PM

ದೆಹಲಿ ಮೇ 22: ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಸ್ವಾತಿ ಮಲಿವಾಲ್ (Swati Maliwal) ಮೇಲಿನ ಹಲ್ಲೆ ಪ್ರಕರಣದ ಕುರಿತು ಇದೇ ಮೊದಲ ಬಾರಿ ಮಾತನಾಡಿದ್ದಾರೆ.ಈ ಘಟನೆಯ ಎರಡು ಆವೃತ್ತಿಗಳಿರುವುದರಿಂದ ನ್ಯಾಯ ಮತ್ತು ಪ್ರಕರಣದಲ್ಲಿ ನ್ಯಾಯಯುತ ತನಿಖೆಯನ್ನು ಬಯಸುವುದಾಗಿ ಹೇಳಿದರು. ಸುದ್ದಿ ಸಂಸ್ಥೆ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಕೇಜ್ರಿವಾಲ್ ,ಮೇ 13 ರಂದು ದೆಹಲಿಯಲ್ಲಿ ಭಾರಿ ವಿವಾದ ಸೃಷ್ಟಿಸಿದ ಸ್ವಾತಿ ಮಲಿವಾಲ್ ಪ್ರಕರಣ ಬಗ್ಗೆ ಮಾತನಾಡಿದ್ದಾರೆ. ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್, ತಾನು ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಹೋದಾಗ ದೆಹಲಿ ಸಿಎಂ ಅವರ ಸಹಾಯಕ ಬಿಭವ್ ಕುಮಾರ್ (Bibhav Kumar) ಮುಖ್ಯಮಂತ್ರಿ ನಿವಾಸದೊಳಗೆ ತನಗೆ ಕಪಾಳಮೋಕ್ಷ ಮಾಡಿ ಒದೆದಿದ್ದಾರೆ ಎಂದು ಆರೋಪಿಸಿದ್ದರು. ಆಮ್ ಆದ್ಮಿ ಪಕ್ಷವು ಬಿಭವ್ ಅವರ ಬೆಂಬಲಕ್ಕೆ ನಿಂತಿದ್ದರೆ ಮತ್ತು ಬಿಜೆಪಿಯು ಬಿಭವ್ ನ್ನು ಗೂಂಡಾ ಎಂದು ಕರೆಯುತ್ತಿದೆ. ದೂರಿನ ಆಧಾರದಲ್ಲಿ ಬಿಭವ್ ಅವರನ್ನು ಬಂಧಿಸಲಾಗಿದೆ.

ದೆಹಲಿ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್, ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು ಈ ವಿಷಯದ ಬಗ್ಗೆ ಪಕ್ಷದ ನಿಲುವನ್ನು ಇಲ್ಲಿಯವರೆಗೆ ಮುಂದಿಟ್ಟಿದ್ದರೂ ಕೇಜ್ರಿವಾಲ್ ಬಗ್ಗೆ ಮಾತನಾಡಿರಲಿಲ್ಲ. ಬುಧವಾರ ಪಿಟಿಐ ಸಂದರ್ಶನದಲ್ಲಿ, ಈ ವಿಷಯ ಕಾನೂನಿನ ಮುಂದೆ ಇದೆ.ನನ್ನ ಹೇಳಿಕೆಯು ಪ್ರಕ್ರಿಯೆಯ ಮೇಲೆ ಪರಿಣಾಮ ಬೀರಬಹುದು. ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಘಟನೆಯ ಎರಡು ಆವೃತ್ತಿಗಳಿವೆ. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ಮಾಡಬೇಕು ಮತ್ತು ನ್ಯಾಯವನ್ನು ನೀಡಬೇಕು,” ಕೇಜ್ರಿವಾಲ್ ಹೇಳಿದರು.

ಘಟನೆ ನಡೆದಾಗ ತಾವು ಸ್ಥಳದಲ್ಲಿ ಇರಲಿಲ್ಲ ಎಂದು ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ.

ಪತ್ನಿಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಪತ್ನಿ ಸುನೀತಾ ಅವರು ಭವಿಷ್ಯದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ. ಸಂದರ್ಶನದಲ್ಲಿ ಕೇಜ್ರಿವಾಲ್, ನಾನು ಸೆರೆವಾಸದಲ್ಲಿ ಅನುಭವಿಸಿದ “ಅವಮಾನ”, ನನ್ನ ವಿರುದ್ಧದ ಆರೋಪಗಳು, ಅವರ ಕುಟುಂಬವು ಏನೆಲ್ಲ ಅನುಭವಿಸುತ್ತಿದೆ ಮತ್ತು 2024 ರ ಲೋಕಸಭೆಯಲ್ಲಿ ವಿರೋಧ ಪಕ್ಷದ ಇಂಡಿಯಾ ಬಣದ ಭವಿಷ್ಯ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುದೀರ್ಘವಾಗಿ ಮಾತನಾಡಿದ್ದಾರೆ. “ನನ್ನ ಜೀವನದ ಪ್ರತಿ ಹಂತದಲ್ಲೂ ಸುನೀತಾ ನನಗೆ ಬೆಂಬಲ ನೀಡಿದ್ದಾರೆ. ಅವರಂತಹ ಸಂಗಾತಿಯನ್ನಾಗಿ ಪಡೆಯಲು ನಾನು ಅದೃಷ್ಟಶಾಲಿಯಾಗಿದ್ದೇನೆ. ನನ್ನಂತಹ ವಿಲಕ್ಷಣ ವ್ಯಕ್ತಿಯನ್ನು ಸಹಿಸಿಕೊಳ್ಳುವುದು ಸುಲಭವಲ್ಲ” ಎಂದಿದ್ದಾರೆ ಕೇಜ್ರಿವಾಲ್.

ಆಕೆ 2000 ರಲ್ಲಿ ದೆಹಲಿಯ ಕೊಳೆಗೇರಿಗಳಲ್ಲಿ ಕೆಲಸ ಮಾಡಲು ಆದಾಯ ತೆರಿಗೆ ಕಮಿಷನರ್ ಆಗಿ ಕೆಲಸದಿಂದ ರಜೆ ತೆಗೆದುಕೊಂಡರು. ನಂತರ ಸಾಮಾಜಿಕ ಕಾರ್ಯಗಳಿಗೆ ಪೂರ್ಣ ಸಮಯವನ್ನು ವಿನಿಯೋಗಿಸಲು ರಾಜೀನಾಮೆ ನೀಡಿದರು ಎಂದು ಕೇಜ್ರಿವಾಲ್ ತಮ್ಮ ಪತ್ನಿ ಬಗ್ಗೆ ಹೇಳಿದ್ದಾರೆ.

ಆಗ ನಾನು ಮುಖ್ಯಮಂತ್ರಿಯಾಗುತ್ತೇನೆ ಅಥವಾ ಪಕ್ಷ ಸ್ಥಾಪಿಸುತ್ತೇನೆ, ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂಬ ಯಾವುದೇ ಸುಳಿವು ಇರಲಿಲ್ಲ. ನಾನು 10 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಆಗಲೂ ಅವಳು ನನ್ನನ್ನು ಬೆಂಬಲಿಸಿದಳು. ಆಗ ಅವಳು ಏನೆಲ್ಲ ಸಹಿಸಿರಬಹುದು ಎಂದು ಯೋಚಿಸಿ!” ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ 2010ರ ನಂತರ ನೀಡಲಾದ ಎಲ್ಲಾ OBC ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ಕಲ್ಕತ್ತಾ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಇಡಿ ಕೇಜ್ರಿವಾಲ್  ಅವರನ್ನು ಬಂಧಿಸಿದ ಕೂಡಲೇ, ಮಾಜಿ ಆದಾಯ ತೆರಿಗೆ ಅಧಿಕಾರಿ ಸುನಿತಾ ಕೇಜ್ರಿವಾಲ್ ಅವರು ಪಕ್ಷದ ರಾಜಕೀಯ ಚುಕ್ಕಾಣಿ ಹಿಡಿದಿದ್ದರು.. ಅವರು ಜೈಲಿನಿಂದ  ಕೇಜ್ರಿವಾಲ್ ಕಳುಹಿಸುತ್ತಿದ್ದ ಸಂದೇಶವನ್ನು ಓದಿ ಜನಗಳಿಗೆ ಹೇಳುತ್ತಿದ್ದರು. ಸುನಿತಾ ರೋಡ್ ಶೋಗಳನ್ನು ನಡೆಸಿದರು. ವಿರೋಧ ಪಕ್ಷದ ರ‍್ಯಾಲಿಗಳಲ್ಲಿ ಭಾಷಣ ಮಾಡಿದರು.

ಪತ್ನಿ ರಾಜಕೀಯದಲ್ಲಿ ಮುಂದುವರಿಯುತ್ತಾರಾ ಎಂದು  ಕೇಜ್ರಿವಾಲ್ ಅವರಲ್ಲಿ ಕೇಳಿದಾಗ, “ನನ್ನನ್ನು ಬಂಧಿಸಿದಾಗ, ಆಕೆ ನನ್ನ ಮತ್ತು ದೆಹಲಿಯ ನಿವಾಸಿಗಳ ನಡುವೆ ಸೇತುವೆಯಾಗಿದ್ದರು. ಇದು ತಾತ್ಕಾಲಿಕ ಹಂತವಾಗಿತ್ತು. ಆಕೆ ಸಕ್ರಿಯ ರಾಜಕೀಯದಲ್ಲಿ ಆಸಕ್ತಿ ಹೊಂದಿಲ್ಲ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:59 pm, Wed, 22 May 24

ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ