ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ

ಬುಧವಾರ ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ ಸ್ವೀಕರಿಸಿದ್ದು,  ಪ್ರಧಾನಿ ಮೋದಿ, ಅಮಿತ್ ಶಾ, ನಡ್ಡಾ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಪ್ರಮಾಣ ವಚನ
ಮೋಹನ್ ಯಾದವ್
Follow us
ರಶ್ಮಿ ಕಲ್ಲಕಟ್ಟ
|

Updated on:Dec 13, 2023 | 11:54 AM

ಭೋಪಾಲ್ ಡಿಸೆಂಬರ್ 13: ಮಧ್ಯಪ್ರದೇಶದ (Madhya Pradesh) ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ (Mohan Yadav) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು(ಬುಧವಾರ) ಭೋಪಾಲ್‌ನ ಲಾಲ್ ಪರೇಡ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸಿದ್ದು,  ಪ್ರಧಾನಿ ಮೋದಿ (PM Modi), ಅಮಿತ್ ಶಾ, ನಡ್ಡಾ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಮಧ್ಯಪ್ರದೇಶ ಉಪ ಮುಖ್ಯಮಂತ್ರಿಗಳಾಗಿ ಬಿಜೆಪಿ ನಾಯಕರಾದ ಜಗದೀಶ್ ದೇವದಾ ಮತ್ತು ರಾಜೇಂದ್ರ ಶುಕ್ಲಾ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

58 ವರ್ಷದ ಮೋಹನ್ ಯಾದವ್  ಈ ಹಿಂದೆ ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.ಮೋಹನ್ ಯಾದವ್ ಉಜ್ಜಯಿನಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಅವರು ಮೊದಲು 2013 ರಲ್ಲಿ ಶಾಸಕರಾಗಿ ಆಯ್ಕೆಯಾದರು. ಆನಂತರ 2018 ರಲ್ಲಿ ಎರಡನೇ ಬಾರಿಗೆ ಅದೇ ಸ್ಥಾನವನ್ನು ಗೆದ್ದರು. ಹೆಸರಾಂತ ಉದ್ಯಮಿಯೂ ಆಗಿರುವ ಇವರು ಹಲವಾರು ವರ್ಷಗಳಿಂದ ಬಿಜೆಪಿಯಲ್ಲಿದ್ದಾರೆ

ವಿಕ್ರಮ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ

ಮಾರ್ಚ್ 1965 ರಲ್ಲಿ ಉಜ್ಜಯಿನಿಯಲ್ಲಿ ಜನಿಸಿದ ಮೋಹನ್ ಯಾದವ್ ಅವರು ವಿದ್ಯಾರ್ಥಿಯಾಗಿದ್ದಾಗ ರಾಜಕೀಯ ಪ್ರವೇಶಿಸಿದರು. ತನ್ನ ವ್ಯಾಪಾರ ಮತ್ತು ರಾಜಕೀಯ ವೃತ್ತಿಜೀವನವನ್ನು ಏಕಕಾಲದಲ್ಲಿ ಮುಂದುವರಿಸಿದ ಅವರು ವಿಕ್ರಮ್ ವಿಶ್ವವಿದ್ಯಾಲಯದಿಂದ ತಮ್ಮ ಪಿಎಚ್‌ಡಿಯನ್ನು ಪೂರ್ಣಗೊಳಿಸಿದರು.

2020 ರಲ್ಲಿ, ಅಗರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಚುನಾವಣಾ ಆಯೋಗವು ‘ಅನುಚಿತ ಭಾಷೆ’ಯನ್ನು ಬಳಸುವ ಮೂಲಕ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಚಾರ ಮಾಡದಂತೆ ಚುನಾವಣಾ ಆಯೋಗವು ನಿಷೇಧಿಸಿತು.

ವಿದ್ಯಾರ್ಥಿ ರಾಜಕೀಯ

1982 ರಲ್ಲಿ, ಅವರು ಮಾಧವ್ ವಿಜ್ಞಾನ ಕಾಲೇಜಿನ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಮತ್ತು 1984 ರಲ್ಲಿ ಅದರ ಅಧ್ಯಕ್ಷರಾಗಿ ಆಯ್ಕೆಯಾದರು. 1997 ರಲ್ಲಿ, ಅವರು BJYM ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸೇರಿದರು. 1998 ರಲ್ಲಿ, ಅವರು ಪಶ್ಚಿಮ ರೈಲ್ವೆ ಮಂಡಳಿಯ ಸಲಹಾ ಸಮಿತಿಯ ಸದಸ್ಯರಾದರು.

ಇದನ್ನೂ ಓದಿ: ಮಧ್ಯಪ್ರದೇಶದ ಸಿಎಂ ಸ್ಥಾನಕ್ಕೆ ಆಯ್ಕೆಯಾಗಿರುವ ಮೋಹನ್ ಯಾದವ್ ಖಡ್ಗ ಝಳಪಿಸಿ ಕೌಶಲ ಪ್ರದರ್ಶಿಸಿದ ವಿಡಿಯೊ ವೈರಲ್

ಬಿಜೆಪಿಯ ಯುವ ಘಟಕದಲ್ಲಿ ವೃತ್ತಿಜೀವನ

  • 1999 ರಲ್ಲಿ, BJYM ನ ಉಜ್ಜಯಿನಿ ವಿಭಾಗದ ಪ್ರಭಾರಿ
  • 2000-2003 ರಿಂದ, ವಿಕ್ರಮ್ ವಿಶ್ವವಿದ್ಯಾಲಯ ಉಜ್ಜಯಿನಿ ಕಾರ್ಯಕಾರಿ ಮಂಡಳಿಯ ಸದಸ್ಯ.
  • 2000-2003ರವರೆಗೆ ಬಿಜೆಪಿಯ ನಗರ ಜಿಲ್ಲಾ ಮಹಾಮಂತ್ರಿ (ಮಹಾ ಕಾರ್ಯದರ್ಶಿ),
  • 2004ರಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದರು.
  • 2004 ರಲ್ಲಿ, ಮಧ್ಯಪ್ರದೇಶದ ಕುಂಭಮೇಳದ ಕೇಂದ್ರ ಸಮಿತಿಯ ಸದಸ್ಯ.
  • 2004-2010 ರಿಂದ, ಉಜ್ಜಯಿನಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು (ರಾಜ್ಯ ಸಚಿವರಿಗೆ ಸಮಾನ).
  • 2008ರಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಜಿಲ್ಲಾ ನಿರ್ದೇಶಕ.
  • 2011-2013 ರಿಂದ, ಮಧ್ಯಪ್ರದೇಶ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಭೋಪಾಲ್ (ಕ್ಯಾಬಿನೆಟ್ ಮಂತ್ರಿ ಶ್ರೇಣಿ).
  • 2013-2016ರವರೆಗೆ ಬಿಜೆಪಿಯ ಅಖಿಲ ಭಾರತ ಸಾಂಸ್ಕೃತಿಕ ಸೆಲ್ ಜಂಟಿ ಸಂಯೋಜಕ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:43 am, Wed, 13 December 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ